ವಾಡಿ ಪುರಸಭೆ: ಶೇ.56 ಮತದಾನ
Team Udayavani, Apr 8, 2017, 3:40 PM IST
ವಾಡಿ: ಪಟ್ಟಣದ ಪುರಸಭೆ ಮೂರನೇ ಅವಧಿ ಚುನಾವಣೆ ಶುಕ್ರವಾರ ಪೊಲೀಸ್ ಬಿಗಿಭದ್ರತೆ ಮಧ್ಯೆ ಶಾಂತಿಯುತವಾಗಿ ನಡೆಯಿತು. ಮತದಾರರು ವಿದ್ಯುನ್ಮಾನದ ಮತಯಂತ್ರಗಳ ಗುಂಡಿ ಒತ್ತುವ ಮೂಲಕ ಕಣದಲ್ಲಿದ್ದ ಒಟ್ಟು 72 ಅಭ್ಯರ್ಥಿಗಳ ಹಣೆಬರಹ ಬರೆದರು.
ಪುರಸಭೆ ವ್ಯಾಪ್ತಿಯ ಒಟ್ಟು 34040 ಜನ ಮತದಾರರಲ್ಲಿ 18898 ಜನ ಮತ ಚಲಾಯಿಸಿದ್ದು, ಶೇ.56.3 ಮತದಾನವಾಗಿದೆ ಎಂದು ಚುನಾವಣಾಧಿಧಿಕಾರಿ ಮಲ್ಲೇಶ ತಂಗಾ ತಿಳಿಸಿದ್ದಾರೆ. ಪಟ್ಟಣದ ಒಟ್ಟು 23 ವಾರ್ಡ್ಗಳಲ್ಲಿ ಸ್ಥಾಪಿಸಲಾಗಿದ್ದ ಹಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯಿಂದಲೇ ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಿದರು.
ಮಧ್ಯಾಹ್ನದ ಉರಿಬಿಸಿಲು ಲೆಕ್ಕಿಸದೆ ತಾಂಡಾಗಳಲ್ಲಿ ಲಂಬಾಣಿ ಜನರು ಮತಗಟ್ಟೆಗಳತ್ತ ಬರುತ್ತಿದ್ದ ದೃಶ್ಯಗಳು ಕಂಡುಬಂದವು. ರೆಸ್ಟ್ಕ್ಯಾಂಪ್ ತಾಂಡಾದ ಎಂಪಿಎಸ್ ಶಾಲೆಯಲ್ಲಿನ ನಾಲ್ಕು ಮತಗಟ್ಟೆಗಳಿಗೆ ಪ್ರವೇಶಿಸಲು ಇಳಿಜಾರಿನ ರಸ್ತೆಯಲ್ಲಿ ನಡೆಯಲಾಗದೆ ವೃದ್ಧರು, ಅಂಗವಿಕಲರು ತೀವ್ರ ತೊಂದರೆ ಅನುಭವಿಸಿದರು.
ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ವಯೋವೃದ್ಧರಿಗೆ ಆಸರೆಯಾದರು. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಶಾಸಕ ಬಿಜೆಪಿಯ ವಾಲ್ಮೀಕಿ ನಾಯಕ ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಚುನಾವಣೆ ಪ್ರಕ್ರಿಯೆ ಅರಿತುಕೊಂಡರು.
ವ್ಯಾಪಕ ಭದ್ರತೆ: ಪಟ್ಟಣ ವ್ಯಾಪ್ತಿಯ 23 ವಾರ್ಡ್ಗಳ ಮತದಾರರ ಅನುಕೂಲಕ್ಕಾಗಿ ಸ್ತಾಪಿಸಲಾಗಿದ್ದ 33 ಮತದಾನ ಕೇಂದ್ರಗಳಿಗೆ ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗಳ್ಳಿ, ಚುನಾವಣಾಧಿಕಾರಿ ತಹಶೀಲ್ದಾರ ಮಲ್ಲೇಶ ತಂಗಾ, ಮಲ್ಲಣ್ಣ ದೇಸಾಯಿ, ಲಕ್ಷಣ ಶೃಂಗೇರಿ, ಶಿವಶರಣಪ್ಪ ಬನ್ನಿಕಟ್ಟಿ ಹಾಗೂ ಡಿವೈಎಸ್ಪಿ ಮಹೇಶ ಮೇಘಣ್ಣವರ್, ಸಿಪಿಐ ಶಂಕರಗೌಡ ಪಾಟೀಲ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಪೂರ್ಣಗೊಳಿಸುವಲ್ಲಿ ಯಶಸ್ವಿಯಾದರು.
ಪ್ರತಿಭಟನೆ: ವಾರ್ಡ್ 23ರ ವಿಜಯನಗರ ಮತಗಟ್ಟೆ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೋಗಸ್ ಮತದಾನ ನಡೆದಿದೆ ಎಂದು ಆರೋಪಿಸಿ ಜೆಡಿಎಸ್ ಅಭ್ಯರ್ಥಿ ಹಾಜಪ್ಪ ಲಾಡ್ಲಾಪುರ, ಬಿಜೆಪಿ ಅಭ್ಯರ್ಥಿ ರವಿಕುಮಾರ ಕಾಳಗಿ, ಪಕ್ಷೇತರ ಅಭ್ಯರ್ಥಿ ಬಾಲರಾಜ ಬಳಿಚಕ್ರ, ಸಾಬಣ್ಣ ಈರಣ್ಣ ಸೇರಿದಂತೆ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಮಾಜಿ ಪುರಸಭೆ ಸದಸ್ಯ ಕಾಂಗ್ರೆಸ್ನ ಚಾಂದ್ಮಿಯ್ನಾ ಎನ್ನುವರು ಎರಡು ಮತದಾನ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತ ಚೆಲಾಯಿಸಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.