ವಾಡಿ ಪುರಸಭೆ: ಪ್ರಿಯಾಂಕ್‌-ವಾಲ್ಮೀಕಿಗೆ ಅಗ್ನಿ ಪರೀಕ್ಷೆ


Team Udayavani, Apr 6, 2017, 3:30 PM IST

gul7.jpg

ವಾಡಿ: ಕಳೆದ ಒಂದು ವಾರದಿಂದ ರಂಗೇರಿದ್ದ ಸ್ಥಳೀಯ ಪುರಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆಬಿದ್ದಿದ್ದು, ಏ.7ರಂದು ಬೆಳಗ್ಗೆ 7:00 ರಿಂದ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳ ಅಬ್ಬರದ ಪ್ರಚಾರದ ಮಧ್ಯೆ ಪಕ್ಷೇತರ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡುವ ಮೂಲಕ ರಾಷ್ಟ್ರೀಯ ಪಕ್ಷಗಳ ನಿದ್ದೆಗೆಡಿಸಿದ್ದಾರೆ. 

ಪಟ್ಟಣದಲ್ಲಿ ಅಸ್ತಿತ್ವವನ್ನೇ ಕಳೆದುಕೊಂಡಿರುವ ಜೆಡಿಎಸ್‌, ಒಂದೆರಡು ವಾರ್ಡ್‌ಗಳಲ್ಲಿ ಸ್ಪರ್ಧಿìಸಿ ಪೈಪೋಟಿಯಿಂದ ದೂರ ಉಳಿದಿದೆ. ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡ್‌ಗಳಲ್ಲಿ ಕಾಂಗ್ರೆಸ್‌-ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದ್ದು, ಗದ್ದುಗೆ ಗುದ್ದಾಟ ಸವಾಲಿನ ಸೆಣೆಸಾಟಕ್ಕೆ ಕಾರಣವಾಗಿದೆ.

ವಾಡಿ ಪುರಸಭೆ ಚುನಾವಣೆ ಪ್ರಚಾರದ ಸಂಘರ್ಷ ಸ್ಪರ್ಧಿಸಿದ ಅಭ್ಯರ್ಥಿಗಳ ಮಧ್ಯೆ ಏರ್ಪಡದೆ, ಮಾಜಿ ಶಾಸಕ ಬಿಜೆಪಿಯ ವಾಲ್ಮೀಕಿ ನಾಯಕ ಹಾಗೂ ಕ್ಷೇತ್ರದ ಶಾಸಕ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪಾಲಿಗೆ ಅಗ್ನಿ ಪರೀಕ್ಷೆಯಾಗಿದೆ. ಟಿಕೆಟ್‌ ಹಂಚಿಕೆಯಿಂದ ಬಂಡಾಯದ ಬಿಸಿ ಅನುಭವಿಸಿರುವ ಎರಡೂ ಪಕ್ಷಗಳಿಗೆ ಪಕ್ಷೇತರರೆ ಕಾಡುತ್ತಿದ್ದಾರೆ.

ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ರಣಬಿಸಿಲು ಲೆಕ್ಕಿಸದೆ ಪಾದಯಾತ್ರೆ ಕೈಗೊಂಡು ಗಲ್ಲಿ ಗಲ್ಲಿ ಸುತ್ತುತ್ತಿರುವ ವಾಲ್ಮೀಕಿ ನಾಯಕ ಹಾಗೂ ಪ್ರಿಯಾಂಕ್‌ ಖರ್ಗೆ ಅವರಿಗೆ ಬಹುಮತದ್ದೇ ಚಿಂತೆಯಾಗಿದೆ. ತಾಪಂ ಚುನಾವಣೆಯಲ್ಲಿ ತುಸು ಚೇತರಿಸಿಕೊಂಡ ತಾಲೂಕು ಬಿಜೆಪಿ ಘಟಕ, ಜಿಪಂ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗೆಲ್ಲುವ ಮೂಲಕ ಸಂಪೂರ್ಣ ಮುಗ್ಗರಿಸಿತ್ತು. 

ಎರಡೂ ಚುನಾ ವಣೆ ಗಳಲ್ಲಿ ಕಹಿ ಅನುಭ ವಿಸಿರು ವ ಮಾಜಿ ಶಾಸಕ ವಾಲ್ಮೀ ಕಿಗೆ ವಾಡಿ ಪುರಸಭೆ ಗದ್ದುಗೆ ಮಹತ್ವದ ಮೈಲಿ ಗಲ್ಲಾಗಲಿದೆ. ಪಕ್ಷದ ಪ್ರತಿಷ್ಠೆ ಉಳಿಸಿಕೊಳ್ಳಲು ಕಳೆದ ಹತ್ತಾರು ದಿನಗಳಿಂದ ನಗರದಲ್ಲಿಯೇ ಠಿಕಾಣಿ ಹೂಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ, ಶಶಿಕಲಾ ಟೆಂಗಳಿ, ವಿಧಾನಪರಿಷತ್‌ ಸದಸ್ಯ ಅಮರನಾಥ ಪಾಟೀಲ ಬಿರುಸಿನ ಮತಪ್ರಚಾರ ನಡೆಸಿದ್ದಾರೆ.

ವಿಧಾನಪರಿಷತ್‌ ಸದಸ್ಯ ಬಿ.ಜಿ.ಪಾಟೀಲ ಕೆಲ ವಾರ್ಡ್‌ಗಳಲ್ಲಿ ಪಾದಯಾತ್ರೆ ನಡೆಸಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರೆ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿರುವುದು ಕೈ ಪಕ್ಷದ ಮುಖಂಡರಿಗೆ ನುಂಗಲಾರದ ತುತ್ತಾಗಿದೆ.

ಕೆಲ ವಾರ್ಡ್‌ಗಳಲ್ಲಿನ ಅತೃಪ್ತರ ಬಿಸಿ ತಣ್ಣಗಾಗಿಸುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌, ತುಸು ತೃಪ್ತಿಪಟ್ಟುಕೊಂಡಿದೆ. ಬಿಜೆಪಿ-ಕಾಂಗ್ರೆಸ್‌ ಮಧ್ಯೆ ಪೈಪೋಟಿ  ನಡೆಯುವ ಬದಲು, ಹಲವು ವಾರ್ಡ್‌ಗಳಲ್ಲಿ ಬಿಜೆಪಿಗೆ ಬಿಜೆಪಿ, ಕಾಂಗ್ರೆಸ್‌ಗೆ ಕಾಂಗ್ರೆಸ್‌ ಎದುರಾಳಿಯಾಗಿರುವುದು ಸ್ಪಷ್ಟವಾಗಿದೆ. ಬಹುಮತ ಕೈಯಿಗೋ, ಕಮಲಕ್ಕೋ ಅಥವಾ ಅತಂತ್ರದ ಬಿಕ್ಕಟ್ಟೋ ಎನ್ನುವುದು ಮಾತ್ರ ಏ.9 ರಂದು ತಿಳಿಸುಬರಲಿದೆ.

* ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.