Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹನ, ಬಿಜೆಪಿ ವಿರುದ್ಧ ಘೋಷಣೆ
Team Udayavani, Dec 21, 2024, 7:19 PM IST
ವಾಡಿ: ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ದಲಿತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬೌದ್ಧ ಸಮಾಜದ ನೇತೃತ್ವದಲ್ಲಿ ಶನಿವಾರ ವಾಡಿ ಬಂದ್ ಕರೆ ನೀಡುವ ಮೂಲಕ ದಲಿತರು ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ಅಂಬೇಡ್ಕರ್ ಕಾಲನಿಯಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಯುವಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಅಂಬೇಡ್ಕರ್ ಭಾವಚಿತ್ರ ಹಿಡಿದು ಬಿಜೆಪಿ ವಿರುದ್ಧ ಘೋಷಣೆ, ಮೆರವಣಿಗೆಯುದ್ದಕ್ಕೂ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ಆಜಾದ್ ಚೌಕ್, ಶಿವಾಜಿ ಚೌಕ್, ಶ್ರೀನಿವಾಸ ಗುಡಿ ಚೌಕ್, ಬಸವೇಶ್ವರ ಚೌಕ್ ಹಾಗೂ ಅಂಬೇಡ್ಕರ್ ಚೌಕ್ ಗಳಲ್ಲಿ ಟಯರ್ ಸುಟ್ಟು ಪ್ರತಿಭಟನೆ ನಡೆಸಿದರು.
ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಸಹ ಕಾರ್ಯದರ್ಶಿ ಸೂರ್ಯಕಾಂತ ರದ್ದೇವಾಡಿ, ಮುಖಂಡರಾದ ಚಂದ್ರಸೇನ ಮೇನಗಾರ, ದೇವಿಂದ್ರಪ್ಪ ಕರದಳ್ಳಿ, ಮಹಮೂದ್ ಸಾಹೇಬ್, ಬಸವರಾಜ ಕಾಟಮಳ್ಳಿ, ಶರಣಬಸು ಸಿರೂರಕರ, ರಮೇಶ ಬಡಿಗೇರ, ರವಿಕುಮಾರ ಸಿಂಗೆ ಸೇರಿದಂತೆ ಸಾವಿರಾರು ಮಂದಿ ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿವಿಧ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟವನ್ನು ಬೆಂಬಲಿಸಿದ್ದು ಕಂಡು ಬಂದಿತು. ವಾಹನಗಳ ಸಂಚಾರ ವಿರಳವಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು. ತಹಶೀಲ್ದಾರ್ ನಾಗಯ್ಯ ಸ್ವಾಮಿ ಹಿರೇಮಠ ಮನವಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.