ವಾಡಿ ಬಯಲು ಶೌಚ ಮುಕ್ತ ಪಟ್ಟಣ ಘೋಷಣೆ
Team Udayavani, Mar 14, 2022, 7:37 PM IST
ವಾಡಿ: ಪಟ್ಟಣದಲ್ಲಿ ಸ್ವಚ್ಚ ಭಾರತ ಯೋಜನೆ ಸಂಪೂರ್ಣ ಯಶಸ್ವಿಯಾಗಿದ್ದು, ಪುರಸಭೆ ವ್ಯಾಪ್ತಿಯ ಪ್ರದೇಶವನ್ನು ಒಡಿಎಫ್ ಪ್ಲಸ್ (ಬಯಲು ಶೌಚ ಮುಕ್ತ) ಎಂದು ಸ್ವಯಂ ಘೋಷಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಡಾ.ಚಿದಾನಂದ ಸ್ವಾಮಿ ಪ್ರಕಟಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳ ಮನೆಗಳನ್ನು ಸರ್ವೆ ಮಾಡುವ ಮೂಲಕ ವೈಯಕ್ತಿಕ ಚೌಚಾಲಯ ಹೊಂದಿರದ ಕುಟುಂಬಗಳನ್ನು ಗುರುತಿಸಲಾಗಿದೆ. ಸ್ವಚ್ಚ ಭಾರತ ಯೋಜನೆಯಡಿ ಸರ್ಕಾರದ ಸುತ್ತೋಲೆಯಂತೆ ಸಹಾಯಧನ ಬಿಡುಗೆ ಮಾಡಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜಾಗದ ಕೊರತೆ ಎದುರಿಸಿದ ಕುಟುಂಬಗಳಿಗಾಗಿ ಸಮುದಾಯ ಶೌಚಾಲಯ ನಿರ್ಮಿಸಲಾಗಿದೆ. ಅಲ್ಲದೆ ಪಟ್ಟಣಕ್ಕೆ ಬಂದು ಹೋಗುವ ಸಾರ್ವಜನಿಕರಿಗಾಗಿ ಮತ್ತು ವ್ಯಾಪಾರಿಗಳಿಗಾಗಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿ ಶಾಲೆ, ಕಾಲೇಜು ಆಡಳಿತ ಮಂಡಳಿಗಳಿಂದ, ವಿದ್ಯಾರ್ಥಿಗಳು, ಶಿಕ್ಷಕರು, ಎನ್‌ಜಿಒ, ಎಸ್‌ಎಚ್‌ಜಿಗಳಿಂದ ಕಡ್ಡಾಯವಾಗಿ ಬಯಲು ಶೌಚ ಮುಕ್ತ ಕುರಿತು ಘೋಷಣಾ ಪತ್ರ ಪಡೆದುಕೊಳ್ಳಲಾಗಿದೆ. ಪಟ್ಟಣದ ಪುರಸಭೆ ವ್ಯಾಪ್ತಿಯ ಪ್ರದೇಶವನ್ನು ಬಯಲು ಶೌಚ ಮುಕ್ತ (ಓಡಿಎಫ್ ಪ್ಲಸ್) ಎಂದು ಸ್ವಯಂ ಘೋಷಿಸಿ ನಿರ್ಣಯ ಕೈಗೊಳ್ಳಲಾಗಿದೆ.
ಈ ಕುರಿತು ಸಾರ್ವಜನಿಕರು ಬಯಲು ಶೌಚ ಬಳಕೆಗೆ ಅವಕಾಶ ನೀಡದೆ ನೈರ್ಮಲ್ಯ ವ್ಯವಸ್ಥೆ ಕಾಪಾಡುವ ಮೂಲಕ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಮುಖ್ಯಾಧಿಕಾರಿ ಡಾ.ಚಿದಾನಂದ ಸ್ವಾಮಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.