ವಾಡಿ: 750 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್
Team Udayavani, Jun 26, 2020, 2:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಡಿ: ನಗರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಿದ್ದ ಒಟ್ಟು 767 ವಿದ್ಯಾರ್ಥಿಗಳಲ್ಲಿ 750 ಮಕ್ಕಳು ಪ್ರಥಮ ಭಾಷೆ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆದರೆ, 17 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಕೋವಿಡ್ ಸೋಂಕಿತರ ಕುಟುಂಬದಿಂದ ಆಗಮಿಸಿದ್ದ ಇಬ್ಬರು ಮಕ್ಕಳಿಗೆ ವಿಶೇಷ ಕೊಠಡಿ ಒದಗಿಸಲಾಗಿತ್ತು. ರಾವೂರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 215 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಗೈರು ಹಾಜರಿದ್ದರು. ನಾಲವಾರ ಸರಕಾರಿ ಪ್ರೌಢಶಾಲೆಯಲ್ಲಿ ಸುಸೂತ್ರವಾಗಿ ಪರೀಕ್ಷೆ ಬರೆದರು. ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಪುರಸಭೆ ಸದಸ್ಯ ಕಾಂಗ್ರೆಸ್‌ನ ಪೃಥ್ವಿರಾಜ ಸೂರ್ಯವಂಶಿ ವ್ಯವಸ್ಥೆ ಮಾಡಿದ್ದ ಸ್ಯಾನಿಟೈಸರ್ ಸ್ಪ್ರೇ ಗಮನ ಸೆಳೆಯಿತು. ವಾಡಿ ಪರೀಕ್ಷೆ ಕೇಂದ್ರಗಳಿಗೆ ಮಹೇಶಕುಮಾರ ಬಡಿಗೇರ, ಚಂದ್ರಾಮ ಅಮನಘಡ ಮೇಲ್ವಿಚಾರಕರಾಗಿದ್ದರೆ, ಪ್ರಿಯದರ್ಶಿನಿ ರಾವೂರಿನ ಪರೀಕ್ಷಾ ಕೇಂದ್ರಕ್ಕೆ ಚೀಫ್ ಆಗಿದ್ದರು. ದತ್ತಪ್ಪ ಡೋಂಬಳೆ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.