ಜಿಲ್ಲಾಸ್ಪತ್ರೆಯಲ್ಲಿ ಹಂದಿಗಳ ಓಡಾಟ
Team Udayavani, Jul 18, 2020, 1:00 PM IST
ಕಲಬುರಗಿ: ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ಸಿಬ್ಬಂದಿ ನಿರ್ಲಕ್ಷ್ಯದಿಂದ ನಗರದ ಜಿಲ್ಲಾಸ್ಪತ್ರೆಯೊಳಗೆ ಹಂದಿಗಳ ಹಿಂಡು ನುಗ್ಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಂದಿಗಳ ದೃಶ್ಯವನ್ನು ಆಸ್ಪತ್ರೆಗೆ ಭೇಟಿ ನೀಡಿದ್ದ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಸ್ಪತ್ರೆಯಲ್ಲಿ ಹಗಲಿನ ಹೊತ್ತಿನಲ್ಲೇ ಹಂದಿಗಳು ಓಡಾಡುತ್ತಿರುವುದು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ನಗರದಲ್ಲಿ ಹಂದಿಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳೂ ವಿಫಲರಾಗಿದ್ದಾರೆ ಎಂದು ಮಾನವ ಹಕ್ಕುಗಳ ಹೋರಾಟಗಾರ ರಿಯಾಜುದ್ದೀನ್ನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಹಂದಿಗಳ ಹಾವಳಿ ಇರುವುದು ನಿಜ. ಆದರೆ, ಜಿಲ್ಲೆಯಲ್ಲಿ ಹಂದಿ ಹಿಡಿಯುವವರು ಇಲ್ಲ. ಬೇರೆ ಜಿಲ್ಲೆಗಳಿಂದ ಕರೆ ತಂದು ಹಂದಿ ಹಿಡಿಸಬೇಕಿದೆ. ಈ ಹಿಂದೆ ಒಮ್ಮೆ ಹಂದಿಗಳ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗಿದೆ. ಈಗ ಮತ್ತೂಮ್ಮೆ ಶೀಘ್ರದಲ್ಲೇ ಹಂದಿಗಳನ್ನು ಹಿಡಿಯುವ ಕಾರ್ಯಾಚರಣೆ ಕೈಗೊಳ್ಳಲಾಗುವುದು. –ರಾಹುಲ್ ಪಾಂಡ್ವೆ, ಪಾಲಿಕೆ ಆಯುಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.