ನೀರಿನ ಸಮಸ್ಯೆ ವಿಪರೀತ
Team Udayavani, Feb 12, 2019, 8:29 AM IST
ಚಿಂಚೋಳಿ: ತಾಲೂಕಿನ ಅತಿ ಹಿಂದುಳಿದ ಪ್ರದೇಶಗಳಾದ ರುಮ್ಮನಗೂಡ, ಪಸ್ತಪುರ ಗ್ರಾಪಂಗಳ ವ್ಯಾಪ್ತಿಯ 14 ಗ್ರಾಮಗಳಲ್ಲಿ ಇದೀಗ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ದೂರದ ಗ್ರಾಮಗಳಿಗೆ ತೆರಳಿ ತಲೆ ಮೇಲೆ ಕೊಡ ಹೊತ್ತುಕೊಂಡು ನೀರು ಪರಿಸ್ಥಿತಿ ಉಂಟಾಗಿದ್ದರು ಸಹ ಅಧಿಕಾರಿಗಳ ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.
ತಾಲೂಕಿನ ರುಮ್ಮನಗೂಡ ಮತ್ತು ಪಸ್ತಪುರ, ಚಂದನಕೇರಾ, ಚೆಂಗಟಾ, ಖಾನಾಪುರ, ಭೂಯಾರ(ಬಿ), ಕೊಟಗಾ, ರಾಣಾಪುರ, ಸಾಸರಗಾಂವ ಗ್ರಾಮಗಳು ಸೇರಿದಂತೆ ಸುತ್ತಲಿನ ತಾಂಡಾಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕಳೆದ 10 ವರ್ಷಗಳ ಹಿಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ 19 ಕೋಟಿ ರೂ. ಖರ್ಚು ಮಾಡಿ ಗ್ರಾಮ ಮತ್ತು ತಾಂಡಾಗಳಲ್ಲಿ ಪೈಪ್‌ಲೈನ್ ಮಾಡಲಾಗಿತ್ತು. ಆದರೆ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಒಡೆದು ಹೋಗಿವೆ. ಅಲ್ಲದೇ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಕಿತ್ತು ಹೋಗಿವೆ. ಹೀಗಾಗಿ ಜನರಿಗೆ ಸಮರ್ಪಕವಾಗಿ ಶುದ್ಧ ನೀರು ಪೂರೈಕೆಯಾಗುತ್ತಿಲ್ಲ. ರುಮ್ಮನಗೂಡ ಗ್ರಾಮದ ಎಲ್ಲ ಓಣಿಗಳಲ್ಲಿ ಪೈಪ್‌ಲೈನ್ ಮಾಡಲಾಗಿದೆ. ಆದರೆ ಪೈಪ್‌ಗ್ಳು ಕೆಲವು ಕಡೆಗಳಲ್ಲಿ ಕಿತ್ತು ಹೋಗಿವೆ. ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಪಿಡಿಒ ಮತ್ತು ತಾಪಂ ಅಧಿಕಾರಿಗಳಿಗೆ ಅಲ್ಲದೇ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಸಹ ಗ್ರಾಮಸ್ಥರು ಅನುಭವಿಸುತ್ತಿರುವ ಸಮಸ್ಯೆ ಯಾರು ಕೇಳುತ್ತಿಲ್ಲ ಎಂದು ಗ್ರಾಪಂ ಸದಸ್ಯ ವೀರಾರೆಡ್ಡಿ ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.
ರುಮ್ಮನಗೂಡ, ಗಂಜಗಿರಿ, ತಾಡಪಳ್ಳಿ, ಹೂವಿನಬಾವಿ, ಹುಲಿ ತಾಂಡಾಗಳಲ್ಲಿ ಕುಡಿಯುವ ನೀರಿನ ಪೂರೈಸುವ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಕೊಳವೆಬಾವಿ ದುರಸ್ತಿ ಮಾಡಬೇಕು. ಅಲ್ಲದೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಗ್ರಾಮಸ್ಥರು ಚಿಂಚೋಳಿ ಪಟ್ಟಣದಲ್ಲಿ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರೂ ಇನ್ನುವರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಗ್ರಾಮಸ್ಥ ಸೂರ್ಯಕಾಂತ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರುಮ್ಮನಗೂಡ ಸುತ್ತಲು ನೀರಿನ ಸಮಸ್ಯೆ ಉಂಟಾಗಿರುವುದರಿಂದ ಸಾಸರಗಾಂವದಿಂದ ಜನರು ತಲೆ ಮತ್ತು ವಾಹನಗಳ ಮೇಲೆ ನೀರು ತರುವಂತಾಗಿದೆ. ಹಳ್ಳಿಯಲ್ಲಿ ಮಹಿಳೆಯರು ಕೇವಲ ನೀರು ತರುವುದಕ್ಕಾಗಿ ಸಮಯ ಮೀಸಲಿಡುವಂತಾಗಿದೆ. ದನಕರುಗಳನ್ನು 5 ಕಿಮೀ ದೂರದಲ್ಲಿರುವ ಕೋಡ್ಲಿ ಅಲ್ಲಾಪುರ ಕೆರೆಗೆ ನೀರು ಕುಡಿಸುವುದಕ್ಕಾಗಿ ಹೊಡೆದುಕೊಂಡು ಹೋಗಬೇಕಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರು ಸಹ ಶಾಸಕ ಡಾ| ಉಮೇಶ ಜಾಧವ ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಕೇಳಿಲ್ಲ ಎಂದು ಜನರು ದೂರುತ್ತಿದ್ದಾರೆ.
ತಹಶೀಲ್ದಾರ್, ತಾಪಂ ಅಧಿಕಾರಿ ಇನ್ನಿತರ ಇಲಾಖೆ ಅಧಿಕಾರಿಗಳು ತಾಲೂಕಿನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ಮುಖಂಡ ಭೀಮಶೆಟ್ಟಿ ಮುಕ್ಕಾ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
10 ವರ್ಷಗಳ ಹಿಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ 19 ಕೋಟಿ ರೂ. ಖರ್ಚು ಮಾಡಿ ಗ್ರಾಮ ಮತ್ತು ತಾಂಡಾಗಳಲ್ಲಿ ಪೈಪ್‌ಲೈನ್ ಮಾಡಲಾಗಿತ್ತು. ಆದರೆ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಒಡೆದು ಹೋಗಿವೆ. ಅಲ್ಲದೇ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಕಿತ್ತು ಹೋಗಿವೆ. ಹೀಗಾಗಿ ಜನರಿಗೆ ಸಮರ್ಪಕವಾಗಿ ಶುದ್ಧ ನೀರು ಪೂರೈಕೆಯಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.