ಕಲ್ಲಂಗಡಿ ಮಾರಾಟ ಬಲು ಜೋರು
Team Udayavani, Mar 17, 2020, 11:24 AM IST
ಜೇವರ್ಗಿ: ಬೇಸಿಗೆಯ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದಂತೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಿದೆ. ಪಟ್ಟಣದ ಮಾರುಕಟ್ಟೆ, ರಸ್ತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕಲ್ಲಂಗಡಿ ವ್ಯಾಪಾರ ಬಲು ಜೋರಾಗಿದೆ.
ರಸ್ತೆ ಬದಿಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಕಲ್ಲಂಗಡಿ ಹಣ್ಣುಗಳ ಖರೀದಿಗೆ ಜನರು ಮುಗಿ ಬೀಳುತ್ತಿದ್ದಾರೆ. ಅದು ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿಗಳು ರಸ್ತೆ ಬದಿಯಲ್ಲಿ ತಲೆ ಎತ್ತುವುದು ಸಾಮಾನ್ಯವಾಗಿದ್ದು, ಇದು ದಾರಿಹೋಕರು, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಿದೆ. ವಿಶೇಷವಾಗಿ ಮಧ್ಯಾಹ್ನ ಕಲ್ಲಂಗಡಿ ಸೇವಿಸಿ ಬಿಸಿಲಿನ ಬೇಗುದಿಯಿಂದ ಸುಧಾರಿಸಿಕೊಳ್ಳುತ್ತಿದ್ದಾರೆ. ಪಟ್ಟಣದ ಪುರಸಭೆ ಕಾರ್ಯಾಲಯ ಎದುರು 5-6 ಕಡೆ ರಸ್ತೆ ಬದಿಯಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿಗಳಿವೆ. ಪಟ್ಟಣದ ಬಸ್ ನಿಲ್ದಾಣ, ಅಖಂಡೇಶ್ವರ ವೃತ್ತ, ಬಸವೇಶ್ವರ ವೃತ್ತದ ಬಳಿ ಸಾಕಷ್ಟು ಕಲ್ಲಂಗಡಿ ಹಣ್ಣಿನ ಅಂಗಡಿಗಳು ತಲೆ ಎತ್ತಿವೆ. ಅಲ್ಲದೇ ತಳ್ಳು ಬಂಡಿಗಳಲ್ಲಿ ಐಸ್ ಗಡ್ಡೆ ಮೇಲೆ ಕಲ್ಲಂಗಡಿ ಹಣ್ಣು ಇಟ್ಟು ಪ್ರತಿ ಗ್ಲಾಸ್‌ಗೆ 10 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಮಳೆ ಮತ್ತು ನೀರಿನ ಕೊರತೆಯಿಂದ ಕಲ್ಲಂಗಡಿ ಬೆಳೆಯುವುದು ಅಪರೂಪ. ಆದರೆ ಪ್ರಸಕ್ತ ವರ್ಷ ಹೊರ ರಾಜ್ಯಗಳಿಂದ ಹಣ್ಣು ಸರಬರಾಜು ಕಡಿಮೆಯಾಗಿದೆ.
ಕಾರಣ ಪಟ್ಟಣ ಹಾಗೂ ತಾಲೂಕಿನ ಮದರಿ, ಯನಗುಂಟಿ, ಗುಡೂರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ರೈತರು ಕಲ್ಲಂಗಡಿ ಹಣ್ಣು ಬೆಳೆದಿದ್ದಾರೆ. ಕಲ್ಲಂಗಡಿ ಹಣ್ಣು ಕೆಜಿಗೆ 20 ರೂ.ನಂತೆ ಮಾರಾಟವಾಗುತ್ತಿದೆ. ನಿತ್ಯ ಪಟ್ಟಣದಲ್ಲಿ ಸರಿ ಸುಮಾರು ಐದಾರು ಟನ್ ಕಲ್ಲಂಗಡಿ ಹಣ್ಣುಗಳ ಮಾರಾಟ ನಡೆಯುತ್ತಿದೆ.
-ವಿಜಯಕುಮಾರ ಎಸ್.ಕಲ್ಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.