ಜೀವನದ ಏರುಪೇರುಗಳಿಗೆ ನಾವೇ ಹೊಣೆಗಾರರು
Team Udayavani, Aug 24, 2018, 12:30 PM IST
ಕಲಬುರಗಿ: ಜೀವನದಲ್ಲಿ ಆಗುವ ಏರು ಪೇರುಗಳಿಗೆ ನಾವೇ ಹೊಣೆಗಾರರೇ ಹೊರತು ಬೇರೊಬ್ಬರಲ್ಲ ಎಂದು ಹೈದ್ರಾಬಾದ್‌ನ ಯುವರಾಜ ಮೋಟಿವೇಟರ್ ಸಂಸ್ಥೆ ತರಬೇತುದಾರ ನಾಗಪ್ರಸಾದ ಹೇಳಿದರು.
ನಗರದ ಅಪ್ಪಾ ಪಬ್ಲಿಕ್ ಶಾಲೆ ಆವರಣದ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಶರಣಬಸವ ವಿಶ್ವವಿದ್ಯಾಲಯದಿಂ ದ ಹಮ್ಮಿಕೊಂಡಿರುವಇಂಡಕ್ಷನ್ ಪ್ರೋಗ್ರಾಂ ತರಬೇತಿ ಕಾರ್ಯಕ್ರಮದಲ್ಲಿ ಮೋಟಿವೇಶನ್ ಎನ್ನುವ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.
ನಾವು ಪ್ರಯತ್ನಿಸಿದರೆ ನಮ್ಮ ಹಣೆಬರಹ ನಾವೇ ಬರೆದುಕೊಳ್ಳಬಹುದು. ಇದಕ್ಕೆ ಬೇಕಾಗಿರುವುದು ಪ್ರಬಲ ಇಚ್ಛಾಶಕ್ತಿ. ಬಯಸಿದರೆ ನಮ್ಮ ಸಾವನ್ನೂ ಮುಂದೂಡಬಹುದು. ಈ ನಿಟ್ಟಿನಲ್ಲಿ ನಮ್ಮ ಯೋಚನೆಗಳು, ಯೋಜನೆಗಳು ಇರಬೇಕು ಎಂದರು.
ಜೀವನದಲ್ಲಿ ಗುರಿ ಇರದೆ ಇದ್ದರೆ ಏನನ್ನು ಸಾಧಿಸಲು ಸಾಧ್ಯವಿಲ್ಲ. ಗುರಿ ಮುಟ್ಟುವ ವರೆಗೆ ಅನೇಕ ಅಡಚಣೆಗಳು, ತೊಂದರೆಗಳು ಎದುರಾಗುತ್ತವೆ. ಅವುಗಳಿಂದ ಪಾರಾಗುವುದರಲ್ಲಿಯೇ ಜೀವನದ ಕೌಶಲ್ಯ ಅಡಗಿದೆ. ಪ್ರಯತ್ನಪಡದ ಹೊರತು ಏನೂ ಲಭಿಸುವುದಿಲ್ಲ. ಅದಕ್ಕಾಗಿ ನಿರಂತರ ಆಶಾವಾದಿಯಾಗಿದ್ದು, ಕಠಿಣ ಪರಿಶ್ರಮದಿಂದ ಜೀವನದ ಗುರಿ ತಲುಪಬೇಕು ಎಂದು ಹೇಳಿದರು.
ಭೂಮಿ ಮೇಲೆ ಇರುವ ನಿಜವಾದ ದೇವರುಗಳೆಂದರೆ ತಂದೆ-ತಾಯಿ. ಅವರ ನೋವು-ನಲಿವಿನಲ್ಲಿ ಭಾಗಿಗಳಾಗಿ ಕುಟುಂಬದವರ ಜೊತೆ ಕಾಲ ಕಳೆಯಬೇಕು. ನಾವು ಸಾಮಾನ್ಯವಾಗಿ ಹಣ ಖರ್ಚು ಮಾಡುವುದನ್ನು ಕಲಿತಿದ್ದೇವೆಯೇ ಹೊರತು ಗಳಿಸುವುದು, ಉಳಿಸುವುದನ್ನು ಕಲಿತಿಲ್ಲ. ಮೊದಲು ಹಣವನ್ನು ಮಿತವಾಗಿ ಖರ್ಚು ಮಾಡುವುದನ್ನು ಕಲಿಯಿರಿ ಎಂದು ಸಲಹೆ ನೀಡಿದರು.
ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ| ಲಿಂಗರಾಜ ಶಾಸ್ತ್ರೀ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸ್ನಾತಕ ಪದವಿ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.