ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿ
Team Udayavani, May 16, 2022, 1:07 PM IST
ಕಲಬುರಗಿ: ರಾಜ್ಯದ ಪಠ್ಯಪುಸ್ತಕದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಕೇಶವ ಬಲಿರಾಮ ಹೆಡಗೆವಾರ್ ಅವರ ಭಾಷಣ ಸೇರ್ಪಡೆಯಾದರೆ ತಪ್ಪೇನು. ಅವರೊಬ್ಬ ರಾಷ್ಟ್ರವಾದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಮರ್ಥಿಸಿಕೊಂಡರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಹಾಗೂ ಎಡಪಂಥೀಯರು ರಾಷ್ಟ್ರೀಯ ವಿಚಾರಧಾರೆಗಳನ್ನು ಮುಚ್ಚಿಟ್ಟಿದ್ದರು. ನಾವು ಈಗ ಅದನ್ನು ಮಕ್ಕಳಿಗೆ ತಿಳಿಸುತ್ತಿದ್ದೇವೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.
ಪ್ರತಿ ಸರಕಾರ ಆಡಳಿತ ನಡೆಸುವ ದೂರದೃಷ್ಟಿ ಇಟ್ಟುಕೊಂಡಿರುತ್ತದೆ. ಬಿಜೆಪಿ ರಾಷ್ಟ್ರವಾದ ತತ್ವ ಮತ್ತು ಚಿಂತನೆ ಹೊಂದಿದೆ ಎಂದರು.
ಇದನ್ನೂ ಓದಿ:ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ ಪತ್ತೆ
ತ್ರಿಪುರಾದಲ್ಲಿ ಬದಲಾವಣೆಯಾದಂತೆ ಕರ್ನಾಟಕದಲ್ಲಿಯೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ, ಇಲ್ಲ ಮುಂದಿನ ವಿಧಾನಸಭೆ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಬೇಡವೋ ಎಂಬುದನ್ನು ಅವರು ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದರು.
ಪಿಎಸ್ಐ ಅಕ್ರಮ ನೇಮಕಾತಿಯ ತನಿಖೆ ಬಗ್ಗೆ ವಿರೋಧ ಪಕ್ಷದವರಿಗೆ ತೃಪ್ತಿ ಇಲ್ಲದಿದ್ದರೆ ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿ. ನಾವು ಯಾರನ್ನೂ ಬಿಟ್ಟಿಲ್ಲ. ಇಲ್ಲಿಯವರೆಗೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದೇವೆ. 40 ಜನರನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆ ಮತ್ತು ತನಿಖೆ ಈಗಲೂ ನಡೆಯುತ್ತಿದೆ ಎಂದರು.
ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ್ ಗುತ್ತೇದಾರ, ಶಶೀಲ್ ಜಿ. ನಮೋಶಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.