ಕಾಲುವೆ ಆಧುನೀಕರಣ ಪೂರ್ಣ ಯಾವಾಗ?
Team Udayavani, Aug 5, 2022, 2:40 PM IST
ಚಿಂಚೋಳಿ: ಮೂರು ದಶಕಗಳು ಉರುಳಿದರೂ ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಪೂರ್ಣಗೊಳ್ಳದೇ ಇರುವುದಕ್ಕೆ ಶಾಸಕ ಡಾ| ಅವಿನಾಶ ಜಾಧವ ಅಸಮಾಧಾನ ವ್ಯಕ್ತಪಡಿಸಿದರು.
ತಾಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ 1973-74ನೇ ಸಾಲಿನಲ್ಲಿ ಪ್ರಾರಂಭವಾದ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಗೆ ಕಳೆದ ಮೂರು ದಶಕಗಳಿಂದ ಸರ್ಕಾರದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ಹೀಗಿದ್ದರೂ ಮುಖ್ಯ ಕಾಲುವೆ ಆಧುನೀಕರಣ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ ಯಾಕೆ ಎಂದು ಯೋಜನೆ ಎಇಇ ಹಣಮಂತಪ್ಪ ಪೂಜಾರಿ ಅವರನ್ನು ಪ್ರಶ್ನಿಸಿದರು.
ಅರಣ್ಯ ಕಾಲೇಜಿಗೆ ಅನುದಾನ: ಸಚಿವ ಉಮೇಶ ಕತ್ತಿ ತಾಲೂಕಿನ ಚಂದ್ರಂಪಳ್ಳಿ ಪ್ರವಾಸಿತಾಣದಲ್ಲಿ ಅರಣ್ಯಕಾಲೇಜು ಮಂಜೂರಿಗೊಳಿಸಿ 10ಕೋಟಿ ರೂ. ಅನುದಾನ ನೀಡಿದ್ದಾರೆ. ಜಂಗಲ್ ಲಾಡ್ಜ್ಗೆ 5ಕೋಟಿ ರೂ.ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.
ಸಣ್ಣ ನೀರಾವರಿ ಇಲಾಖೆ ಎಇಇ ಶಿವಶರಣಪ್ಪ ಮಾತನಾಡಿ, ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದ 20ಕೆರೆಗಳ ಪೈಕಿ ನಾಲ್ಕು ಕೆರೆಗಳು ತುಂಬಿ ಹರಿಯುತ್ತಿವೆ. ಇನ್ನುಳಿದ ಕೆರೆಗಳು ಭರ್ತಿಗೊಳ್ಳುತ್ತಿವೆ ಎಂದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಅಂಜುಮ ತಬಸುಮ, ಸಣ್ಣ ನೀರಾವರಿ ಕೆರೆಗಳ ಬಗ್ಗೆ ಆಗಾಗ ಭೇಟಿ ನೀಡಿ, ಅವುಗಳ ಸ್ಥಿತಿಗತಿ, ಪ್ರವಾಹ ಪರಿಸ್ಥಿತಿ ಕುರಿತು ಗಮನಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಡಿಯಲ್ಲಿ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಹಕ್ಕುಪತ್ರ ನೀಡಿಲ್ಲ. ಒಬ್ಬರ ಹೆಸರಿನಲ್ಲಿ ಇನ್ನೊಬ್ಬರು ಹಕ್ಕುಪತ್ರ ನೀಡಿದ ದೂರುಗಳಿವೆ. ಶಾಶ್ವತ ಪರಿಹಾರಕ್ಕಾಗಿ ಜನರಿಗೆ ನ್ಯಾಯಕೊಡಿಸುವುದಕ್ಕಾಗಿ ಕಂದಾಯ ಇಲಾಖೆ, ನೀರಾವರಿ ಇಲಾಖೆ ಜಂಟಿಯಾಗಿ ಜಂಟಿಸರ್ವೇ ನಡೆಸಿ ಆಸ್ತಿಕಳೆದುಕೊಂಡವರಿಗೆ ಹಕ್ಕುಪತ್ರ ನೀಡಬೇಕಾಗಿದೆ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಮಹಮ್ಮದ್ ಗಫಾರ್ ಮಾತನಾಡಿ, ತಾಲೂಕಿನಲ್ಲಿ ಏಳು ಕೊರೊನಾ ಪ್ರಕರಣಗಳಿವೆ. ಹೆಚ್ಚು ಜನರಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುತ್ತಿದೆ. ಕಲುಷಿತ ನೀರಿನಿಂದ ವಾಂತಿಭೇದಿ ಪ್ರಕರಣಗಳಾಗುತ್ತಿವೆ. ಜನರಿಗೆ ಬಿಸಿ ನೀರು ಕಾಯಿಸಿ, ಆರಿಸಿ ಕುಡಿಯಬೇಕೆಂದು ಆರೋಗ್ಯ ಸಿಬ್ಬಂದಿ ತಿಳಿಸುತ್ತಿದ್ದಾರೆ ಎಂದರು.
ಬಿಇಒ ರಾಚಪ್ಪ ಭದ್ರಶೆಟ್ಟಿ ಮಾತನಾಡಿ, ತಾಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಒಟ್ಟು 1200 ಶಾಲಾ ಕೋಣೆಗಳು ಸೋರಿಕೆಯಾಗುತ್ತಿವೆ. ಸಾಕಷ್ಟು ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಜಿಪಂ ಎಇಇಗೆ ಪತ್ರ ನೀಡಲಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ವ್ಯಾಪಕ ಮಳೆಯಿಂದ 185ಮನೆಗಳು ಬಿದ್ದಿವೆ. ಎಲ್ಲ ಫಲಾನುಭವಿಗಳಿಗೆ 10ಸಾವಿರ ರೂ. ಪರಿಹಾರ ನೀಡಲಾಗಿದೆ. ಕುಂಚಾವರಂನಲ್ಲಿರುವ ಡಾ| ಬಿ.ಆರ್.ಅಂಬೇಡ್ಕರ್ ಆಂಗ್ಲ ಮಾಧ್ಯಮ ಶಾಲೆ ಕಟ್ಟಡ ನಿರ್ಮಾಣಕ್ಕಾಗಿ 9ಕೋಟಿ ರೂ.ಅನುದಾನ ಮಂಜೂರಿಯಾಗಿದೆ. ಅಲ್ಲದೇ ಸರಕಾರದಿಂದ ಜಮೀನು ಗುರುತಿಸಲಾಗಿದೆ ಎಂದು ಶಾಸಕರು ಸಭೆ ಗಮನಕ್ಕೆ ತಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಲ್. ಹಂಪಣ್ಣ, ಡಾ| ಧನರಾಜ ಬೊಮ್ಮ, ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೊಡ, ಎಇಇ ಉಮೇಶ ಗೋಳಾ, ಲೋಕೋಪಯೋಗಿ ಇಲಾಖೆ ಎಇಇ ಆನಂದಕಟ್ಟಿ, ಎಇಇ ಪ್ರಕಾಶ ಕುಲಕರ್ಣಿ, ಪ್ರಭುಲಿಂಗ ಬುಳ್ಳ, ರಾಚಪ್ಪ ಭದ್ರಶೆಟ್ಟಿ, ಪದ್ಮಾವತಿ, ಬಿಸಿಎಂ ಅಧಿಕಾರಿ ಅನುಸೂಜ ಚವ್ಹಾಣ, ಶಾಂತವೀರಯ್ಯ ಹಿರೇಮಠ, ಡಾ| ಮಹಮ್ಮದ ಗಫಾರ, ಜೆಇ ಸುಭಾಷ ರಾಠೊಡ, ಭಾಸ್ಕರ ರಾಠೊಡ, ಜಯಪ್ಪ ಚಾಪೆಲ್, ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಪಿಎಸ್‌ಐ ಉದ್ದಂಡಪ್ಪ ಇನ್ನಿತರ ಅಧಿಕಾರಿಗಳು ತಮ್ಮ ಇಲಾಖೆ ಪ್ರಗತಿ ವರದಿಯನ್ನು ತಿಳಿಸಿದರು. ಎಡಿಎ ಅಧಿಕಾರಿ ನಾಗೇಂದ್ರಪ್ಪ ಬೆಡಕಪಳ್ಳಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.