ಸಮಸ್ಯೆ ಯಾರಿಗೆ ಹೇಳ್ಳೋಣ?


Team Udayavani, Jan 8, 2018, 12:26 PM IST

gul-7.jpg

ಅಫಜಲಪುರ: ಗ್ರಾಮೀಣ ಭಾಗದ ಜನರ ಬಳಿಯೇ ಹೋಗಿ ಸಮಸ್ಯೆಗಳನ್ನು ಬಗೆಹರಿಸಲು ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ವೇಳೆ ಅಧಿಕಾರಿಗಳು ಬಾರದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗ್ರೇಡ್‌ 2 ತಹಶೀಲ್ದಾರ್‌ ಪ್ರಭಾಕರ ಖಜೂರಿ ಎಚ್ಚರಿಸಿದರು. ತಾಲೂಕಿನ ಘತ್ತರಗಿ ಗ್ರಾಪಂನಲ್ಲಿ ಅಧ್ಯಕ್ಷೆ ಸಂಗಮ್ಮ ಅಪ್ಪಾರಾವ್‌ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಪಂ ಸದಸ್ಯರಾದ ಘೋಷಯ್ಯ ಆಲಮೇಲ, ಭಗವಂತ ವಗ್ಗೆ, ಸುಭಾಷ ಹಂಚಿನಾಳ ಹಾಗೂ ಗ್ರಾಪಂ ಸದಸ್ಯರು ಈ ವೇಳೆ ಮಧ್ಯ ಪ್ರವೇಶಿಸಿ, ಗ್ರಾಮಸ್ಥರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕೆಂದರೆ ಇಲಾಖೆಗಳ ಮುಖ್ಯಾಧಿಕಾರಿಗಳು ಬರುವುದಿಲ್ಲ, ಸಹಾಯಕರನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕಳುಹಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿಯೇ ಇರುವುದಿಲ್ಲ. ಹೀಗಾದರೆ ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ ಸಿಗಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘತ್ತರಗಿ ಗ್ರಾಮ ಐತಿಹಾಸಿಕ ಧಾರ್ಮಿಕ ಕೇಮದ್ರವಾಗಿದೆ. ಘತ್ತರಗಾ ಮತ್ತು ಹವಳಗಾ ಧಾರ್ಮಿಕ ಸ್ಥಳಗಳಾಗಿದ್ದು, ಇಲ್ಲಿ ಶುದ್ಧ ಕುಡಿಯುವ ನೀರಿನ ಅವಶ್ಯಕತೆ ಇದೆ. ಗ್ರಾಮದಲ್ಲಿರುವ ವಿದ್ಯುತ್‌ ಕಂಬಗಳು ಹಾಳಾಗಿವೆ, ತಂತಿಗಳು ಜೋತು ಬಿದ್ದಿವೆ, ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್‌ ಸಂಪರ್ಕವಿಲ್ಲ. ಕೊಳ್ಳೂರು ಘತ್ತರಗಾ ರಸ್ತೆ ಕಾಮಗಾರಿ ಕಳಪೆಯಾಗಿ ಅರ್ಧಕ್ಕೆ ನಿಂತಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ, ಸರಿಯಾದ ರಸ್ತೆಗಳಿಲ್ಲ, ಆರೋಗ್ಯ ಸೇವೆಗಳು ಸರಿಯಾಗಿ ಸಿಗುತ್ತಿಲ್ಲ ಇಂತಹ ಅನೇಕ ಸಮಸ್ಯೆಗಳು ಗ್ರಾಮದಲ್ಲಿವೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಜನಸ್ಪಂದನಕ್ಕೆ ಬಂದಿದ್ದರೆ ಹೇಳುತ್ತಿದ್ದೆವು. ಅವರೆ ಬಂದಿಲ್ಲವೆಂದರೆ ಯಾರಿಗೆ ಸಮಸ್ಯೆ ಹೇಳುವುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಪಂ ಅಧ್ಯಕ್ಷೆ ಸಂಗಮ್ಮ ಅಪ್ಪಾರಾವ ಸಂಗಮಕರ ಹಾಗೂ ಸದಸ್ಯರು ಮಾತನಾಡಿ, ಕಳೆದ ವರ್ಷ ನಡೆದ ಜನಸ್ಪಂದನದಲ್ಲಿ ಅಧಿಕಾರಿಗಳು ಅಹವಾಲು ಸ್ವೀಕರಿಸಿಕೊಂಡು ಹೋಗಿದ್ದಾರೆ. ಆದರೆ ಅವುಗಳಿಗೆ ಪರಿಹಾರವನ್ನೇ ನೀಡಿಲ್ಲ. ಹೀಗಾಗಿ ಅಧಿಕಾರಿಗಳು ಕೇವಲ ಅಹವಾಲು ಸ್ವೀಕರಿಸಿ ಹೋದರೆ ಸಾಲದು, ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸವನ್ನು ಮಾಡಬೇಕು ಎಂದರು.

ಜೆಸ್ಕಾಂ ಎಇಇ ನಾಗರಾಜ ಮಾತನಾಡಿ, ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಾದರೆ ಪಿಡಿಒ ಅವರ ಕಡೆಯಿಂದ ಜೆಸ್ಕಾಂ ಕಚೇರಿಗೆ ಪತ್ರ ಬರೆಯಲು ಹೇಳಿದರೆ ನಾವು ವಿದ್ಯುತ್‌ ಕಲ್ಪಿಸುವ ಕೆಲಸ ಮಾಡುತ್ತೇವೆ. ಘತ್ತರಗಿ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 6 ಕಿ.ಮೀ.ಯಷ್ಟು ಹೊಸ ಎಪಿ ವಿದ್ಯುತ್‌ ತಂತಿ ಅಳವಡಿಸಲಾಗುತ್ತಿದೆ ಎಂದು ಹೇಳಿದರು.

ಸಿಡಿಪಿಒ ಸರಳಾ ದೊಡ್ಮನಿ, ಕೃಷಿ ಇಲಾಖೆ ಎಎಒ ಅರವಿಂದ ರಾಠೊಡ, ಡಾ| ಸುಶೀಲ ಅಂಬೂರೆ, ಮಹಾಂತೇಶ ಹಿರೇಮಠ, ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ ಗ್ರಾಮಸ್ಥರ ಅಹವಾಲು ಸ್ವಿಕರಿಸಿ ಇಲಾಖೆಗಳ ಮಾಹಿತಿ ನೀಡಿದರು. ತಾಪಂ ಯೋಜನಾಧಿಕಾರಿ ರೇವಣಸಿದ್ದಪ್ಪ ಅಕಂಡೆ, ಗ್ರಾಪಂ ಸದಸ್ಯರಾದ ಶೋಭಾ ಬಿಲ್ಲಾಡ, ಈರಮ್ಮ ಬಜಂತ್ರಿ, ರಾಜಕುಮಾರ ಪಾಟೀಲ, ಸಿದ್ದಣ್ಣ ಕಲಾಲ, ಪಿಡಿಒ ಮಹಾಂತೇಶ ಯಾಡಗಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.