ಯುವಕರಿಗೆ ವಿವೇಕವಾಣಿ ಸಹಾಯಕ: ಮಹೂರಕರ್
Team Udayavani, Jan 13, 2018, 11:05 AM IST
ಕಲಬುರಗಿ: ಇಲ್ಲಿನ ವಿವೇಕಾನಂದ ಇನ್‌ಸ್ಟೂಟ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನಿಂದ ಸ್ವಾಮಿ ವಿವೇಕಾನಂದರ 155ನೇ ಜಯಂತಿ ಅಂಗವಾಗಿ ಶುಕ್ರವಾರ ನಗರದಲ್ಲಿ ಬೃಹತ್ ಮೆರವಣಿಗೆ ಮಾಡಿ ಯುವಕರಲ್ಲಿ ಜಾಗೃತಿ ಮೂಡಿಸಲಾಯಿತು.
ಇದಕ್ಕೂ ಮುನ್ನ ಕಾಲೇಜಿನಲ್ಲಿ ಮೆರವಣಿಗೆ ರಥಕ್ಕೆ ಪೂಜೆ ಮಾಡುವ ಮೂಲಕ ಸ್ವಾಮಿ ವಿವೇಕಾನಂದ ಕೇಂದ್ರದ ಮುಖ್ಯಸ್ಥ ಎಸ್.ವಿ.ಮಹೂರಕರ್ ಚಾಲನೆ ನೀಡಿ, ಜಗತ್ತಿಗೆ ತನ್ನ ಸಂದೇಶಗಳ ಮೂಲಕ ವಿವೇಕವನ್ನು ಸಾರಿದ ಸ್ವಾಮಿ ವಿವೇಕಾನಂದರ ವಾಣಿ ಭಾರತದ ಯುವಕರಿಗೆ ತುಂಬಾ ಅವಶ್ಯಕವಾಗಿದೆ. ಇಂದಿನ ಯುವಕರು ಹಲವಾರು ಒತ್ತಡಗಳಲ್ಲಿ ಇದ್ದಾರೆ. ಅವರಿಗೆ ಸೂಕ್ತ ಮಾರ್ಗದರ್ಶನಕ್ಕಾಗಿ ವಿವೇಕವಾಣಿ ಸಹಾಯಕವಾಗಲಿದೆ ಎಂದರು.
ಬಳಿಕ ಮೆರವಣಿಗೆ ನಗರದ ನಗರೇಶ್ವರ ಶಾಲೆಯಿದ ಹಾದು ಕಿರಾಣಾ ಬಜಾರ್, ಕಪಡಾ ಬಜಾರ್, ಸರಾಫ್ ಬಜಾರ್, ಜಗತ್‌ವೃತ್ತ, ಸರದಾರ ವಲ್ಲಭಬಾಯಿ ವೃತ್ತದ ಮೂಲಕ ಹಾದು ಆನಂದ ಹೋಟೆಲ್ ವೃತ್ತದ ಬಳಿ ಇರುವ ಕಾಲೇಜಿಗೆ ತಲುಪಿತು. ಮೆರವಣಿಗೆಯಲ್ಲಿ ಕಾಲೇಜಿನ 600 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಚಾರ್ಯ ಪ್ರವೀಣ ನಾಯಕ, ಬಿಸಿಎ ವಿಭಾಗದ ಮುಖ್ಯಸ್ಥ ಅಜಯಕುಮಾರ ಶೆಟ್ಟಿ, ರತಿ ಶ್ರೀರಂಗ ಮಹಾಗಾಂವಕರ್, ಸುದರ್ಶನ ಸ್ವಾಮಿ, ಬಸಯ್ಯ ಸ್ವಾಮಿ, ಸಿದ್ದರಾಮಯ್ಯ ಹಿರೇಮಠ, ಸಿದ್ರಾಮ ಹವಾನಿ, ರಾಜಶೇಖರ ವಾಡಿ, ಅಶೋಕ ಕಾಂತಿಕಾರ, ಎಸ್.ಜಿ.ಘಂಟಿ, ಸ್ನೇಹಲ್ ಬೋರಾನ್ ಕರ್, ಅಂಬಿಕಾ ನೂಲಾ, ಕವಿತಾ ಸಂಗೊಳಗಿ, ಪಾರ್ವತಿ ಹಬೀಬ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.