ಆಶಾಗಳ ಹೋರಾಟಕ್ಕೆ ಮಹಿಳಾ ಕಾಂಗ್ರೆಸ್ ಬೆಂಬಲ
Team Udayavani, Jul 21, 2020, 9:48 AM IST
ಕಲಬುರಗಿ: ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆರಂಭಿಸಿರುವ ಅನಿರ್ಧಿಷ್ಟಾವಧಿ ಹೋರಾಟ ಬೆಂಬಲಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಆಶಾ ಕಾರ್ಯಕರ್ತೆಯರು ಅತೀ ಹೆಚ್ಚು ಜವಾಬ್ದಾರಿ ಹೊತ್ತು ಮನೆ, ಮನೆಗೆ ತೆರಳಿ ಕೋವಿಡ್ ಪೀಡಿತರನ್ನು ಗುರುತಿಸುವಲ್ಲಿ ಸರ್ಕಾರಕ್ಕೆ ನೆರವಾಗಿದ್ದಾರೆ. ಆದರೆ, ಆಶಾ ಕಾರ್ಯಕರ್ತೆಯರ ಸುರಕ್ಷತೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಗೌರವ ಮತ್ತು ಪೋತ್ಸಾಹಧನ ಸೇರಿ ಕೇವಲ ಆರು ಸಾವಿರ ರೂ. ನೀಡಲಾಗುತ್ತಿದ್ದು, ಕುಟುಂಬ ನಿರ್ವಹಣೆಗೂ ಕಷ್ಟಪಡುವಂತಾಗಿದೆ. ಆಶಾ ಕಾರ್ಯಕರ್ತೆಯರ ಸೇವೆಗೆ ತಕ್ಕಂತೆ ಗೌರವ ಧನ ಹೆಚ್ಚಿಸಬೇಕೆಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಒತ್ತಾಯಿಸಿದರು.
ಸರ್ಕಾರದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮತ್ತು ಮಹಿಳಾ ಪೌರ ಕಾರ್ಮಿಕರಿಗೆ ಸರಿಯಾದ ರಕ್ಷಾ ಕವಚಗಳನ್ನು ಸರ್ಕಾರ ಒದಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇತ್ತೀಚೆಗೆ ಸರ್ಕಾರದ ಮೇಲೆ ಒತ್ತಡ ತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಶಾ ಕಾರ್ಯಕರ್ತೆಯರು ಭೇಟಿ ಮಾಡಿದ್ದು, ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ವಿರೋಧ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಆಶಾ ಕಾರ್ಯಕರ್ತೆಯರು ಪರವಾಗಿ ಸರ್ಕಾರದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ. ಸರ್ಕಾರ ಈಗಲಾದರೂ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರ ಮನವಿ ಸಲ್ಲಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಲತಾ ರವಿ ರಾಠೊಡ, ಕಾರ್ಯಕರ್ತೆರಾದ ಶಿಲ್ಪಾ, ಗೀತಾ ರಾಠೊಡ, ಸುಮಂಗಳಾ ಪೂಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ರೈಲ್ವೇ ವಿಭಾಗೀಯ ಕಚೇರಿಗಾಗಿ ರೈಲು ತಡೆಗೆ ಯತ್ನ
Congress: ಸಿಎಂ, ಡಿಸಿಎಂ ನಡುವೆ ಅಧಿಕಾರ ಹಂಚಿಕೆಯ ಚರ್ಚೆಯೇ ಆಗಿಲ್ಲ: ಕೆ.ಜೆ.ಜಾರ್ಜ್
Kalaburagi: ಜ. 26ರಂದು ಸಿದ್ಧಲಿಂಗೇಶ್ವರ ಪ್ರಕಾಶನ 131 ಗ್ರಂಥಗಳು ಏಕಕಾಲಕ್ಕೆ ಬಿಡುಗಡೆ
Kalaburagi:ರೈಲ್ವೇ ವಿಭಾಗೀಯ ಕಚೇರಿಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ
Kalaburagi: ತೊಗರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ ಬಂದ್…
MUST WATCH
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಗೆ ಭೇಟಿ ಕೊಟ್ಟರೆ “ಈ ವಸ್ತು”ಗಳನ್ನು ಮರೆಯದೇ ತನ್ನಿ…
Thirthahalli: ಕುವೆಂಪು ಆಶಯಕ್ಕೆ ಅಪಮಾನ… ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ
ಪ್ರಯಾಗ್ ನಲ್ಲಿ ಜ.23-27 ರವರೆಗೆ 5 ದಿನಗಳ ಕಾಲ ಶ್ರೀ ಚಕ್ರ ನವಾವರಣ ಪೂಜೆ ಸಮೇತ ವಿವಿಧ ಹೋಮ
Charmady: ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ…
Sanju Weds Geetha 2: ಮರು ಬಿಡುಗಡೆಯತ್ತ ಸಂಜು ವೆ ಡ್ಸ್ ಗೀತಾ