ಸಂವಿಧಾನದ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸಿ
Team Udayavani, Aug 10, 2018, 10:02 AM IST
ಕಲಬುರಗಿ: ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ದೈರ್ಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಸ್‌ಪಿ. ಎನ್. ಶಶಿಕುಮಾರ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ ಅಂಶಗಳು ಮತ್ತು ಕಾನೂನುಗಳನ್ನು ಬೋಧಿಸಲಾಗಿದೆ. ಅವುಗಳ ರೀತ್ಯ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದು ಹೇಳಿದರು.
ಪೊಲೀಸ್ ಇಲಾಖೆ ಶಿಸ್ತಿಗೆ ಹೆಸರಾಗಿದೆ. ಪೊಲೀಸರು ಸಾರ್ವಜನಿಕರ ನಿರೀಕ್ಷೆಗಳನ್ನು ತಲುಪಿ ಅವರಲ್ಲಿ ಭರವಸೆ ಮೂಡಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡಿ ರಕ್ಷಣೆ ನೀಡಬೇಕು. ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗಣೇಶ ಹಬ್ಬ, ರಂಜಾನ್ ಹಬ್ಬಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಿ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪೊಲೀಸ್ ಇಲಾಖೆ ಒಬ್ಬ ಸಿಬ್ಬಂದಿ ತನ್ನ
ನಿವೃತ್ತಿ ಕಾಲದವರೆಗೆ ಕೈಗೊಳ್ಳುವ ಎಲ್ಲ ಕರ್ತವ್ಯಗಳನ್ನು ಪ್ರಶಿಕ್ಷಣಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿ ಹೇಳಲಾಗಿದೆ. ಇದರ ಪ್ರಯೋಜನವನ್ನು ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ಎಸ್‌ಪಿ ಹಾಗೂ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಜಯಪ್ರಕಾಶ ವರದಿ ವಾಚನ ಮಾಡಿ, ಕಲಬುರಗಿಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಿಂದ ಈವರೆಗೆ 9 ಸಿವಿಲ್, 6 ಸಶಸ್ತ್ರ ಮೀಸಲು ಹಾಗೂ 1 ಮಹಿಳಾ ಪೊಲೀಸ್ ಪೇದೆ ತಂಡದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಒಟ್ಟು 16 ತಂಡಗಳಿಗೆ ಮೂಲ ತರಬೇತಿ ನೀಡಲಾಗಿದೆ. ಒಟ್ಟು 2563 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಇಂದು ಪಥಸಂಚಲನದಲ್ಲಿ ಭಾಗಿಯಾಗಿರುವ 17ನೇ ತಂಡದ 146 ಪ್ರಶಿಕ್ಷಣಾರ್ಥಿಗಳಿಗೆ ಮೂಲ ತರಬೇತಿ ನೀಡಲಾಗಿದೆ. ಪ್ರಶಿಕ್ಷಣಾರ್ಥಿಗಳಿಗೆ ಒಳಾಂಗಣ, ಹೊರಾಂಗಣ ತರಬೇತಿಗಳಲ್ಲದೇ ವಿಶೇಷ ತರಬೇತಿಗಳನ್ನು ಸಹ ನುರಿತ ತಜ್ಞರಿಂದ ನೀಡಲಾಗಿದೆ ಎಂದು ವಿವರಿಸಿದರು.
ಸರ್ವೋತ್ತಮ ಪ್ರಶಿಕ್ಷಣಾರ್ಥಿ ಮಹೇಶ ಆರ್. ಬಿದರಮಳಿ, ಒಳಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಪಡೆದ ಜಿ. ಖಲೀಪ್ ಪೀರ್, ದ್ವಿತೀಯ ಬಹುಮಾನ ನಾಗರಾಜ, ತೃತೀಯ ಬಹುಮಾನ ಅನೀಲ ಟಿ.ವೈ., ಹೊರಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಮಹೇಶ ಆರ್. ಬಿದರಮಳಿ, ದ್ವಿತೀಯ ಬಹುಮಾನ ಹನುಮಂತ ದಳವಾಯಿ,
ತೃತೀಯ ಬಹುಮಾನ ಹಸನಸಾಬ್ ಜಕಾತಿ, ಫೈರಿಂಗ್ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಶಿವಾ ಎಸ್.ಆರ್., ದ್ವಿತೀಯ ಬಹುಮಾನ ಹನುಮಂತ ದಳವಾಯಿ, ತೃತೀಯ ಬಹುಮಾನ ಮಹೇಶ ಆರ್. ಬಿದರಮಳಿ ಅವರಿಗೆ ವಿತರಿಸಲಾಯಿತು.
ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಪ್ರತಿಜ್ಞಾ ವಿಧಿ ಬೋಧಿಸಿದರು. ಕಲಬುರಗಿ ಎ ವಿಭಾಗದ ಡಿವೈಎಸ್‌ಪಿ ಲೋಕೇಶ, ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನ ಪ್ರಾಂಶುಪಾಲ ಸವಿತಾ ಹೂಗಾರ, ಕೆಎಸ್‌ಆರ್‌ಪಿ 6ನೇ ಪಡೆ ಕಮಾಂಡಂಟ್ ಬಸವರಾಜ ಜಿಳ್ಳೆ, ಹಿರಿಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳ ಪೋಷಕರು ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.