ಕಾನೂನು ತಿದ್ದುಪಡಿಗೆ ಕಾರ್ಮಿಕರ ಆಕ್ರೋಶ
Team Udayavani, Jan 5, 2019, 6:56 AM IST
ಚಿತ್ತಾಪುರ: ಜ. 8,9 ರಂದು ನಡೆಯಲಿರುವ ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಪ್ರಯುಕ್ತ ಪಟ್ಟಣದಲ್ಲಿ ವಿವಿಧ ಕಾರ್ಮಿಕ
ಸಂಘಟನೆಗಳ ಮುಖಂಡರು ಜೀಪ್ ಜಾಥಾ ನಡೆಸಿದರು.
ಈ ವೇಳೆ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ ಮಾತನಾಡಿ, ದೇಶದಲ್ಲಿ ಕಾರ್ಮಿಕರ ಪರವಾದ 44 ಕಾನೂನುಗಳಿವೆ. ಅವುಗಳನ್ನು ಕೇಂದ್ರ ಸರ್ಕಾರ ಬದಲಿಸಿ ನಾಲ್ಕು ಕೋಡ್‌ಗಳಾಗಿ ಮಾಡಲು ಹೊರಟಿದೆ. ಜತೆಗೆ ಕಾರ್ಮಿಕರ ಕಾನೂನು ತಿದ್ದುಪಡಿ ಮಸೂದೆ ತರಲು ಮುಂದಾಗಿದೆ.
ಒಂದು ವೇಳೆ ಮಸೂದೆಗೆ ಒಪ್ಪಿಗೆ ಸಿಕ್ಕರೆ ದೇಶದಲ್ಲಿರುವ ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಅದನ್ನು ವಿರೋಧಿಸಿ ಜ.
8,9 ರಂದು ಅಖೀಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿದರು.
ದಿನನಿತ್ಯ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ತಡೆಗಟ್ಟಲು, ಹೊಸ ಮತ್ತು ಸಭ್ಯ ಉದ್ಯೋಗಗಳನ್ನು ಸೃಷ್ಟಿಸಲು, 18 ಸಾವಿರ ರೂ. ಕನಿಷ್ಠ ವೇತನ ಜಾರಿ, ಕಾರ್ಮಿಕ ಕಾನೂನುಗಳ ತಿದ್ದುಪಡಿ ಕಡಿತ, ಸ್ಕೀಂ ನೌಕರರನ್ನು ಕಾಯಂ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ದೇಶದ ಎಲ್ಲ ಕಾರ್ಮಿಕರಿಗೂ ಸಾರ್ವತ್ರಿಕ ಸಾಮಾಜಿಕ ರಕ್ಷಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಟೋ, ಬಸ್, ಲಾರಿ, ಹಮಾಲರು, ಅಂಗನವಾಡಿ, ಬ್ಯಾಂಕ್, ಎಲ್.ಐ.ಸಿ, ಸರ್ಕಾರಿ ನೌಕರರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾಗವಹಿಸಲಿವೆ. ಎರಡು ದಿನ ಇಡೀ ಭಾರತ ಸಂಪೂರ್ಣ ಸ್ತಬ್ದಗೊಳ್ಳಲಿದೆ ಎಂದು ಹೇಳಿದರು.
ಮೋಟಾರ್ ವಾಹನ ತಿದ್ದುಪಡಿ ಮಸೂದೆ, ಅಂಗನವಾಡಿಗಳಿಗೆ ಆಹಾರ ಪೂರೈಸುವ ಐ.ಸಿ.ಡಿ.ಎಸ್ ಯೋಜನೆಯ ಹಣವನ್ನು ಶೇ. 75 ರಷ್ಟು ಕಡಿತಗೊಳಿಸಲಾಗಿದೆ. ಹೀಗೆ ಮಾಡಿದರೆ ಅಪೌಷ್ಟಿಕತೆ ನಿವಾರಿಸಲು ಹೇಗೆ ಸಾಧ್ಯವಾಗುತ್ತದೆ. ಕಾರ್ಮಿಕ ಹಾಗೂ
ಬಡವರ ವಿರುದ್ಧ ಕಾನೂನು ತರಲು ಹೊರಟಿರುವ ಕೇಂದ್ರದ ಕಣ್ಣು ತೆರೆಸಲು ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ಮಾತ್ರ ದುಬಾರಿ ಬೆಲೆ ಕೊಡುವಂತಾಗಿದೆ. ಅನೀಲ ಬೆಲೆಯೂ ಗಗನಕ್ಕೆ ಏರುತ್ತಿದೆ. ಪರಿಣಾಮ ಕೆಳ ವರ್ಗದ ಬಡ ಕಾರ್ಮಿಕರು ಸರಳ ಜೀವನ ನಡೆಸುವುದಕ್ಕೆ ತುಂಬ ಕಷ್ಟಕರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪಾರ್ವತಿ ಕಾಳಗಿ, ಸಾಬಮ್ಮ ನಾಲವಾರ, ಶೇಕಮ್ಮ ಕುರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.