ರಸಗೊಬ್ಬರ ಅಂಗಡಿಗಳಿಗೆ ಜಿಪಂ ಅಧ್ಯಕ್ಷೆ ಸುವರ್ಣಾ ಭೇಟಿ
Team Udayavani, Aug 19, 2020, 5:24 PM IST
ಕಲಬುರಗಿ: ಜಿಲ್ಲೆಯಲ್ಲಿ ರೈತರಿಗೆ ಯೂರಿಯಾ ರಸಗೊಬ್ಬರ ಕೊರತೆಯಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ನಗರದ ಗಂಜ ಪ್ರದೇಶದಲ್ಲಿರುವ ವಿವಿಧ ಬೀಜ ಮತ್ತು ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ನೀಡಿ ರಸಗೊಬ್ಬರಗಳ ದಾಸ್ತಾನು ಪರಿಶೀಲಿಸಿದರು.
ಚನ್ನವೀರ ಅಗ್ರೋ ಏಜೆನ್ಸಿಯವರು ಯೂರಿಯಾ ರಸಗೊಬ್ಬರ ದಾಸ್ತಾನು ಇದ್ದರೂ ಕೃತಕ ಅಭಾವ ಸೃಷ್ಟಿಸಿ ರೈತರಿಂದ ಹೆಚ್ಚುವರಿ ಹಣ ಪಡೆದು ಮಾರಾಟ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಸದರಿ ಅಂಗಡಿಯ ಲೈಸನ್ಸ್ ಅಮಾನತುಗೊಳಿಸುವಂತೆ ಸ್ಥಳದಲ್ಲಿದ್ದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ ಅವರಿಗೆ ಸೂಚನೆ ನೀಡಿದರು.
ಬಕ್ಕಂಪ್ರಭು ಅಗ್ರೋ ಕೇಂದ್ರಕ್ಕೂ ಭೇಟಿ ನೀಡಿದ ಅಧ್ಯಕ್ಷರು ಅಲ್ಲಿಯೂ ರಸಗೊಬ್ಬರ ದಾಸ್ತಾನಿದ್ದರೂ ಇನ್ನು ಬಂದಿಲ್ಲ ಎಂದು ಸುಳ್ಳು ಹೇಳಿದರು. ಸ್ಥಳದಲ್ಲಿದ್ದ ರೈತರು ಅಂಗಡಿಯವರು ರಸಗೊಬ್ಬರ ಹೆಚ್ಚಿಗೆ ದರದಲ್ಲಿ ಮಾರಾಟ ಮಾಡುತ್ತಿದ್ದು, ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ತಮ್ಮ ಅಳಲನ್ನು ಅಧ್ಯಕ್ಷರಲ್ಲಿ ತೋಡಿಕೊಂಡರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷೆ ಅವರು ಸದರಿ ಅಗ್ರೋ ಕೇಂದ್ರದವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಖಡಕ್ ಸೂಚನೆ ನೀಡಿದರು.
ತಪಾಸಣೆ ನಂತರ ಮಾತನಾಡಿದ ಸುವರ್ಣಾ ಹಣಮಂತರಾಯ ಮಾಲಾಜಿ ಅವರು, ಜಿಲ್ಲೆಯಲ್ಲಿ ಯೂರಿಯಾ ದಾಸ್ತಾನು ಕೊರತೆ ಇರುವುದಿಲ್ಲ. ರೈತರು ಗಾಬರಿಯಾಗುವ ಅವಶ್ಯಕತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದರಲ್ಲದೇ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ಬೀಜ ಮತ್ತು ರಸಗೊಬ್ಬರವನ್ನು ದೊರಕುವ ರೀತಿಯಲ್ಲಿ ಎಲ್ಲಾ ಅಂಗಡಿಗಳಿಗೆ ಪ್ರತಿ ದಿನ ಭೇಟಿ ನೀಡಿ, ಮೇಲುಸ್ತುವಾರಿ ಮಾಡುವಂತೆ ಕೃಷಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕ್ರಿಮಿನಲ್ ಕೇಸ್: ಬೀಜ ಮತ್ತು ರಸಗೊಬ್ಬರ ಅಂಗಡಿಯವರು ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಕೂಡಲೇ ಅವರ ಲೈಸನ್ಸ್ ರದ್ದುಪಡಿಸುವುದು ಹಾಗೂ ಸದರಿ ಅಂಗಡಿಯವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಖಡಕ್ ಸೂಚನೆ ನೀಡಿದರು. ಕೃಷಿ ಇಲಾಖೆಯ ಅಧಿಕಾರಿಗಳು, ಮುಖಂಡ ಹಣಮಂತರಾಯ ಮಾಲಾಜಿ ಇದ್ದರು.
ಯೂರಿಯಾ ಕೊರತೆಯಿಲ್ಲ: ಜಿಲ್ಲೆಯ ಕೃಷಿ ಪರಿಕರ ಮಳಿಗೆಗಳಲ್ಲಿ ಯೂರಿಯಾ ರಸಗೊಬ್ಬರ ದಾಸ್ತಾನಿದ್ದು, ರೈತರು ದೃತಿಗೆಡದೆ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ತಮಗೆ ಅವಶ್ಯಕವಿರುವ ರಸಗೊಬ್ಬರವನ್ನು ನಿಗದಿತ ದರದಲ್ಲಿ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ. ದಪ್ಪ ಕಾಳು ಯೂರಿಯಾ ಮತ್ತು ಸಣ್ಣ ಕಾಳು ಯುರಿಯಾ ಎರಡರಲ್ಲೂ ಸಹ ಸಾರಜನಕ ಒಂದೇ ಪ್ರಮಾಣದಲ್ಲಿ (ಓ:46%)ಇರುವುದರಿಂದ ಎರಡರಲ್ಲಿಯೂ ಯಾವುದೇ ವ್ಯತ್ಯಾಸ ಇರುವುದಿಲ್ಲ. ಆದ್ದರಿಂದ ಸಣ್ಣ/ದೊಡ್ಡ ಕಾಳಿನ ಯೂರಿಯಾ ರಸಗೊಬ್ಬರ ಲಭ್ಯವಿರುವುದು ಉಪಯೋಗಿಸಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.