ಅಭಿವೃದ್ಧಿಗೆ ನಿರಾಸಕ್ತಿ-ಗೈರು ಹಾಜರಿಗೆ ಜಿಪಂ ಅಧ್ಯಕ್ಷೆ ಗರಂ
Team Udayavani, May 16, 2017, 4:15 PM IST
ಕಲಬುರಗಿ: ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿಗಳು ಹೆಚ್ಚಿನ ಆಸಕ್ತಿ ತೋರದಿರುವುದು ಹಾಗೂ ಸಭೆಗಳಿಗೆ ಸಿಇಒ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು ಹಾಜರಾಗುತ್ತಿರುವುದಕ್ಕೆ ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಗೈರು ಹಾಜರಾದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿಇಒ ಹೆಪ್ಸಿಬಾ ರಾಣಿ ಕೊರ್ಲಪಾರ್ಟಿ ಅವರೂ ತಮ್ಮ ಗಮನಕ್ಕೆ ಬಾರದೇ ಗೈರು ಹಾಜರಾಗಿದ್ದಾರೆ.
ಈ ಕುರಿತು ಸಾಮಾನ್ಯ ಸಭೆಯಲ್ಲಿ ಕೇಳಲಾಗುವುದು. ಅದರಂತೆ ಲೋಕೋಪಯೋಗಿ ಇಲಾಖೆ, ಪಿಎಂಜಿಎಸ್‌ವೈ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಮುಖ್ಯಸ್ಥರು ಸಭೆಗೆ ಗೈರು ಹಾಜರಾಗಿರುವುದನ್ನು ನೋಡಿದರೆ ಅಭಿವೃದ್ಧಿ ಕಾರ್ಯಗಳಿಗೆ ಆಸಕ್ತಿ ಇಲ್ಲದಿರುವುದು ತೋರಿಸುತ್ತದೆ.
ಆಟವಾಡುವಂತೆ ಸಭೆಗೆ ಬಂದರೆ ಸಹಿಸಲಾಗದು ಎಂದು ಅಧ್ಯಕ್ಷರು ತರಾಟೆಗೆ ತೆಗೆದುಕೊಂಡರು. ಅಧ್ಯಕ್ಷರ ಮಾತಿಗೆ ಧ್ವನಿಗೂಡಿಸಿದ ಜಿಲ್ಲಾ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಸಭೆಗೆ ನೀಡುತ್ತಿರುವ ಅಪೂರ್ಣ ಮಾಹಿತಿ ಅವಲೋಕಿಸಿದರೆ ಸಭೆಗೆ ಆಡವಾಡಲು ಬರಿ¤àರಾ ಎಂದು ಖಾರವಾಗಿ ಪ್ರಶ್ನಿಸಿದರು.
ಸಿದ್ಧತೆಗೆ ಸೂಚನೆ: ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗುವ ಮುನ್ನ 2017-18ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕೈಗೊಳ್ಳುವ ರೈತಾಪಿ ವರ್ಗಕ್ಕೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು.
ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ಮಳೆ ಹಾಗೂ ಗಾಳಿಯಿಂದ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಲೈನ್‌ಮೆನ್ ಇಲ್ಲದ ಪ್ರಯುಕ್ತ ಸರಿಯಾದ ಸಮಯದಲ್ಲಿ ದುರಸ್ತಿಗಳು ಆಗುತ್ತಿಲ್ಲ.
ಆದ್ದರಿಂದ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಇದನ್ನು ನಿವಾರಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿ ಜೆಸ್ಕಾಂ ಅಧಿಕಾರಿಗಳು, ಈಗಾಗಲೇ ಹೊಸದಾಗಿ ನೇಮಕವಾದ ಲೈನ್‌ಮೆನಗಳಿಗೆ ಟ್ರೇನಿಂಗ್ ರೂಪದಲ್ಲಿ ಮೆಂಟನೆನ್ಸ್ ವರ್ಕ್ ಹಾಗೂ μಲ್ಡ್ ವರ್ಕ್ ನೀಡಲಾಗುತ್ತಿದೆ.
ಟ್ರೇನಿಂಗ್ ಮುಗಿದ ನಂತರ ಎರಡು ಹಳ್ಳಿಗಳಿಗೆ ಒಬ್ಬರಂತೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. 2016-17ನೇ ಸಾಲಿನಲ್ಲಿ ಗುತ್ತಿಗೆ ಆಧಾರದ ಮೇಲೆ ಪಡೆದ ಶಿಕ್ಷಕರ ಸಂಭಾವನೆ ಪಾವತಿಸಲು 5 ಲಕ್ಷ ರೂ. ನಿಗದಿಪಡಿಸಲಾಗಿತ್ತು. ಜಿಪಂ ನಿಂದ ಶಿಕ್ಷಣ ಇಲಾಖೆಗೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಆದರೆ ಅತಿಥಿ ಶಿಕ್ಷಕರನ್ನು ಪಡೆಯದೇ ಅನುದಾನ ಖರ್ಚು ಮಾಡಿಲ್ಲ ಎಂದು ಅಧ್ಯಕ್ಷರು ಅಸಮಾಧಾನ ಪಟ್ಟರು. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಅಫಜಲಪುರ ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲ ಎಂದು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲಯ್ಯ ಹಿರೇಮಠ ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ನಾನು ಈಗಾಗಲೇ ಅಫಜಲಪುರ ಆಸ್ಪತ್ರೆಗೆ ಭೇಟಿ ನೀಡಿ ಸ್ವತ್ಛತೆ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ವತ್ಛವಾಗಿಟ್ಟುಕೊಳ್ಳಲು ತಿಳಿಸಲಾಗಿದೆ ಎಂದು ತಿಳಿಸಿದರು. ಜಿಪಂ ಅಧ್ಯಕ್ಷರ ಅನುಮತಿ ಪಡೆಯದೆ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು. ಅನಿವಾರ್ಯ ಕಾರಣಗಳಿಂದ ಸಭೆಯಲ್ಲಿ ಭಾಗವಹಿಸಲು ಆಗದೇ ಇರುವ ಅಧಿಕಾರಿಗಳು ಈ ವಿಷಯವನ್ನು ಅಧ್ಯಕ್ಷರ ಗಮನಕ್ಕೆ ತಂದು ಅವರ ಅನುಮತಿ ಪಡೆಯಬೇಕು ಎಂದು ಸಭೆ ಸೂಚನಾ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದರೂ ಸಹ ಅಧಿಕಾರಿಗಳು ಇದನ್ನು ಪಾಲಿಸುತ್ತಿಲ್ಲ.
ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು. ಈ ಸಭೆಗೆ ಏಳು ಇಲಾಖೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಾಹಿತಿ ನೀಡುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಹಾಗೂ ಪ್ರಾದೇಶಿಕ ಆಯುಕ್ತರಿಗೆ ತಿಳಿಸಲಾಗುವುದು ಎಂದು ಜಿಪಂ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಹೇಳಿದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.