ಕೈಗಾರಿಕೆ ಅಭಿವೃದ್ಧಿಗೆ ಹೆಚ್ಚು ಒತ್ತು: ಶೆಟ್ಟರ
ಕಂದಾಯ ವಸೂಲಿಯಲ್ಲಿ ಹೊಸ ನಿಯಮ ಜಾರಿ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪನೆ
Team Udayavani, Nov 23, 2019, 11:14 AM IST
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಿಂದುಳಿದ ಭಾಗವಾಗಿದ್ದು, ಈ ಭಾಗದ ಆರ್ಥಿಕ ಪ್ರಗತಿಗೆ ಆಹಾರ ಮತ್ತು ಕೃಷಿ, ಕೃಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.
ನಗರದ ಎಚ್‌ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಹೈದರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಷಿಯೇಸನ್ ಮತ್ತು ಗುಲಬರ್ಗಾ ಕೈಗಾರಿಕಾ ಪ್ರದೇಶ ಉತ್ಪಾದಕರ ಸಂಘ, ಗುಲಬರ್ಗಾ ಕೈಗಾರಿಕಾ ಮ್ಯಾನುಫ್ಯಾಕ್ಚರ್ ಅಸೋಷಿಯೇಷನ್ಸ್ ಸಂಯುಕ್ತಾಶ್ರಯದಲ್ಲಿ ನಡೆದ ರಫ್ತು, ವಿದೇಶ ವ್ಯಾಪಾರ ನೀತಿ ಮತ್ತು ಕಾರ್ಯವಿಧಾನಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಸಂವಾದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕೆ ಅಭಿವೃದ್ಧಿಗಾಗಿ ಹಾಗೂ ಕಂದಾಯ ವಸೂಲಿಯಲ್ಲಿ ಹೊಸ ನಿಯಮ ಜಾರಿಗೊಳಿಸುವ ಮೂಲಕ ಕೈಗಾರಿಗಳ ಉನ್ನತಿಗೆ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ಈಗಾಗಲೇ ಅಧಿ ಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು. ಕೈಗಾರಿಕೆ ಕಟ್ಟಡಗಳ ಬಾಡಿಗೆ, ಮಾರಾಟಕ್ಕೆ ಮತ್ತು ಕಂದಾಯ ವಸೂಲಿಗೆ ಸಂಬಂ ಧಿಸಿದಂತೆ ವೈಜ್ಞಾನಿಕ ದರ ನಿಗದಿ ಮಾಡುವ ಮೂಲಕ ಹಾಗೂ ಎಲ್ಲ ಕೈಗಾರಿಗಳ ಉನ್ನತಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ಶ್ರಮಿಸುವುದಾಗಿ ತಿಳಿಸಿದರು.
ಬೆಂಗಳೂರನ್ನು ಹೊರತುಪಡಿಸಿ ಆರ್ಥಿಕವಾಗಿ ಹಿಂದುಳಿದಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹೊಸ ಕೈಗಾರಿಕಾ ನೀತಿಯಲ್ಲಿ ಸೇರಿಸಲಾಗುವುದು. ಕೈಗಾರಿಕಾ ಸಂಸ್ಥೆಯವರು ಸಲ್ಲಿಸಿರುವ ಮನವಿ ಪತ್ರಗಳನ್ನು ಪರಿಶೀಲಿಸಿ, ಅವುಗಳನ್ನು ಪ್ರಾಮಾಣಿಕವಾಗಿ ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳು ಆರ್ಥಿಕವಾಗಿ ಸದೃಢವಾಗಲಿದೆ. ಇಲ್ಲಿನ ಕಪನೂರು ಕೈಗಾರಿಕಾ ಪ್ರದೇಶಕ್ಕೆ ತಾವು ಭೇಟಿ ನೀಡಿದ್ದು, ಅಲ್ಲಿನ ಕೈಗಾರಿಕೆಗಳ ಅಭಿವೃದ್ಧಿಗೆ ಮಾರಕವಾಗಿರುವ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಣಾ ಅಧಿ ಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಎಚ್. ಬಸವರಾಜೇಂದ್ರ, ಕೆಎಸ್ ಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ ಬಿ. ಶಿರೂರ್, ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ, ಕೆಎಎಸ್ ಎಸ್‌ಐಎ ಅಧ್ಯಕ್ಷ ರಾಜು ಆರ್. ಹಾಗೂ ಕೈಗಾರಿಕೆ ಇಲಾಖೆ ಹಿರಿಯ ಅ ಧಿಕಾರಿಗಳು, ಕೈಗಾರಿಕಾ ಸಂಸ್ಥೆಯ ಮಾಲೀಕರು ಹಾಗೂ ಉದ್ದಿಮೆದಾರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.