ಸಮಸ್ಯೆ ಇರುವಲ್ಲಿ ಟ್ಯಾಂಕರ್ ನೀರು ಪೂರೈಕೆ
Team Udayavani, May 13, 2019, 5:21 PM IST
ಕಮಲನಗರ: ಪಟ್ಟಣದ 8ನೇ ವಾರ್ಡ್‌ನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿರುವುದು.
ಕಮಲನಗರ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬರ ಪರಿ ನಿರ್ವಹಣೆ ಯೋಜನೆಯಡಿ ಪಟ್ಟಣದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರವೀಣ ಕದಂ ಹೇಳಿದರು.
ಪಟ್ಟಣದ ನಾಗೋಬಾ ಮಂದಿರ, ಪಠಾಣ ಗಲ್ಲಿ, ಗಡಿ ಗಲ್ಲಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೇ ನೀರಿನ ತೀವ್ರ ಸಮಸ್ಯೆ ಇದ್ದ ಕಡೆ ಬಾಲೂರ್(ಕೆ) ಗ್ರಾಮದಿಂದ ಪೈಪ್‌ಲೈನ್ ಮೂಲಕ ಕಮಲನಗರದ ಅತಿಥಿ ಗೃಹದ ಎದುರಿನ ಬಾವಿಗೆ ನೀರು ತುಂಬಿಸಿ ಅಲ್ಲಿಂದ ಪುನಃ ನೀರನ್ನು ಮನೆಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮುಖಂಡ ಶಾಂತಕುಮಾರ ಮಾತನಾಡಿ, ಅಂತರ್ಜಲ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಯುವಕರು ಸೇರಿ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿದ್ದಕ್ಕಾಗಿ ತಾಲೂಕು ಆಡಳಿತದಿಂದ ಟೆಂಡರ್ ಕರೆದು ಪ್ರತಿದಿನ 6 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಬಿರಾದಾರ, ಪಿಡಿಒ ಸುಭಾಷ ಫುಲೆ, ಸಂತೋಷ ಕದಂ, ಸುರೇಶ ಚಾಂಗುಣೆ, ವಾರ್ಡ್‌ನ ನಿವಾಸಿ ಸಂಗೀತಾ, ಸುಜಾತಾ ಹಾಗೂ ಯುವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.