ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಿ
ಸ್ವಯಂ ಪ್ರೇರಿತರಾಗಿ ಪ್ಲಾಸ್ಟಿಕ್ ಬಳಕೆ ಕೈ ಬಿಡಿ ಬಳಸಿದರೆ ದಂಡದ ಎಚ್ಚರಿಕೆ
Team Udayavani, Oct 5, 2019, 3:51 PM IST
ಕವಿತಾಳ: ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸರಕಾರ ಯೋಜನೆ ರೂಪಿಸಿದೆ. ಅದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಕಡ್ಡಾಯವಾಗಿ ಶೌಚಾಲಯ ಬಳಸಬೇಕು ಮತ್ತು ಬಯಲು ಶೌಚಾಲಯ ಮುಕ್ತ ಗ್ರಾಮಗಳನ್ನಾಗಿ ಮಾಡಬೇಕು ಎಂದು ಜಿಪಂ ಸದಸ್ಯ ಕಿರಲಿಂಗಪ್ಪ ಹೇಳಿದರು.
ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ವಿಜಯಪುರ, ಶ್ರಮಜೀವಿ ಸಂಸ್ಥೆ, ಪಟ್ಟಣ ಪಂಚಾಯಿತಿ ಹಾಗೂ ಶಿಕ್ಷಣ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಟ್ಟಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವತ್ಛ ಪರಿಸರ ಮತ್ತು ಶೌಚಾಲಯ ಬಳಕೆಯಿಂದ ಅನೇಕ ರೋಗ ರುಜನಗಳು ಹರಡುವುದನ್ನು ತಡೆಗಟ್ಟಲು ಸಾಧ್ಯವಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಅಗಾಧ ಪರಿಣಾಮ ಬೀರುತ್ತಿದ್ದು, ಸ್ವಯಂ ಪ್ರೇರಿತರಾಗಿ ಪ್ಲಾಸ್ಟಿಕ್ ಬಳಕೆ ಬಿಡಬೇಕು ಎಂದು ಹೇಳಿದರು.
ವಾರ್ತಾ ಇಲಾಖೆ ಅ ಧಿಕಾರಿ ಮುರಳೀಧರ ಮಾತನಾಡಿ, ಕೇಂದ್ರ ಸರಕಾರ ಜಾರಿ ಮಾಡಿದ ಸ್ವಚ್ಛ ಭಾರತ, ಆಯುಷ್ಮಾನ್ ಭಾರತ ಮತ್ತಿತರ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಆಯುಷ್ಮಾನ್ ಭಾರತ ಯೋಜನೆಯಡಿ ಪ್ರತಿಯೊಂದು ಬಡ ಕುಟುಂಬಕ್ಕೆ 5 ಲಕ್ಷ ರೂ. ವರೆಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲಾಗಿದೆ. ಮಹಾತ್ಮ ಗಾಂಧಿಧೀಜಿ ಕನಸು ನನಸಾಗಿಸುವ ನಿಟ್ಟಿನಲ್ಲಿ ದೇಶದಲ್ಲಿ ಸ್ವಚ್ಛತೆ ಬಗ್ಗೆ ಕ್ರಾಂತಿಕಾರಿ ಹೆಜ್ಜೆ ಇಡಲಾಗಿದೆ. ಶಾಲಾ ಮಕ್ಕಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸಾರ್ವಜನಿಕ ಸ್ಥಳಗಳಲ್ಲಿ ಸ್ವತ್ಛತೆ ಕಾಪಾಡುವ ವಾಗ್ಧಾನ ಮಾಡುವ ಮೂಲಕ ಸ್ವಚ್ಛ ಭಾರತ ಯೋಜನೆಗೆ ಕೈಜೋಡಿಸಬೇಕು ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ ಮಾತನಾಡಿ, ಪ್ಲಾಸ್ಟಿಕ್ ಬಳಕೆಗೆ
ಕಡಿವಾಣ ಹಾಕುವ ನಿಟ್ಟಿನಲ್ಲಿ ಪಟ್ಟಣದ ಕಿರಾಣಿ ಅಂಗಡಿಗಳು ಮತ್ತಿತರ ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿ ಸಲಾಗಿದೆ, ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇಷ್ಟಾಗಿಯೂ ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ದುಬಾರಿ ದಂಡದ ಜತೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಸಿದರು.
ಸ್ವಚ್ಛ ಭಾರತ ಯೋಜನೆ ಜಿಲ್ಲಾ ಸಂಯೋಜಕ ಭೀಮಣ್ಣ ಸ್ವಚ್ಛ ಭಾರತ ಪ್ರತಿಜ್ಞಾ ವಿಧಿ ಬೋಧಿಸಿದರು. ಶ್ರಮ ಜೀವಿ ಸಂಸ್ಥೆ ಅಧ್ಯಕ್ಷ ಮಲ್ಲಯ್ಯ ಗೋರ್ಕಲ್, ಪಪಂ ಸದಸ್ಯ ಬಸವರಾಜ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ ಹಾಗೂ ಆರೋಗ್ಯ ಮಿತ್ರ ಮಲ್ಲಪ್ಪ ಮಾತನಾಡಿದರು.
ಪ.ಪಂ. ಸದಸ್ಯರಾಧ ಗಂಗಪ್ಪ ದಿನ್ನಿ, ಅಕ್ಬರ್ ಎಡಿಎಂ, ಕಾಜಾಪಾಶಾ, ಮೌನೇಶ ನಾಯಕ, ಮೌನೇಶ ಪೂಜಾರಿ, ಮೌನೇಶ ಹಿರೇಕುರಬರ್, ಮುಖಂಡ ವೀರಯ್ಯಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.