ಕಾಮಗಾರಿಯಲ್ಲಿ ಲೋಪದೋಷ
ಒಳ ಚರಂಡಿ ಸಂಪೂರ್ಣ ಅವೈಜ್ಞಾನಿಕ•ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು
Team Udayavani, Aug 28, 2019, 11:36 AM IST
ಕೆಂಭಾವಿ: ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲಿಸಿತು.
ಕೆಂಭಾವಿ: ಪಟ್ಟಣದ ಸಂಘ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಮಾಧ್ಯಮಗಳಲ್ಲಿ ಸತತವಾಗಿ ನಗರೋತ್ಥಾನ ಯೋಜನೆ ಅವೈಜ್ಞಾನಿಕ ರಸ್ತೆ ಕಾಮಗಾರಿ ಕುರಿತು ಬಂದ ದೂರು ಹಾಗೂ ವರದಿಗಳ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ ಮಂಗಳವಾರ ಜಿಲ್ಲಾ ನಗರಾಭಿವೃದ್ಧಿ ಕೋಶದ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲಿಸಿತು.
ಸಿಸಿ ರಸ್ತೆ ಕಾಮಗಾರಿ ಹಾಗೂ ಒಳ ಚರಂಡಿ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹಾಗೂ ಪ್ರಭಾರಿ ಯೋಜನಾ ನಿರ್ದೇಶಕ ಅಲ್ಲಾಭಕ್ಷ, ಸುಮಾರು 2 ಗಂಟೆ ಸ್ಥಳ ಪರಿಶೀಲಿಸಿದಾಗ ಹಲವು ರೀತಿಯ ಲೋಪದೋಷಗಳು ಕಂಡು ಬಂದಿವೆ. ಅಂದಾಜು ಪತ್ರಿಕೆ ಪ್ರಕಾರ ಅನೇಕ ಕಡೆ 30 ಅಡಿ ರಸ್ತೆ ಅಗಲೀಕರಣವಾಗಿಲ್ಲ. ಒಳ ಚರಂಡಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಹಲವು ಕಡೆ ತೆರವು ಕಾರ್ಯಾಚರಣೆ ನಡೆಯಬೇಕಾಗಿದೆ. ಗುಣಮಟ್ಟದ ಕಾಮಗಾರಿ ಬಗ್ಗೆಯೂ ದೂರು ಇದೆ, ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಿಲ್ಲ, ವಿದ್ಯುತ್ ತಂತಿಗಳು ಕೈಗೆಟುಕುವಂತಿವೆ. ಸೂಕ್ಷ್ಮ ತಿರುವಿನಲ್ಲಿ ಸರಿಯಾಗಿ ರಸ್ತೆ ನಿರ್ಮಾಣವಾಗದೆ ಇರುವುದು ಸೇರಿದಂತೆ ಹಲವು ಲೋಪದೋಷಗಳು ಕಂಡು ಬಂದಿವೆ ಎಂದರು.
ಒಟ್ಟಾರೆ ಕಾಮಗಾರಿಯಲ್ಲಿ ನಡೆದ ಲೋಪದೋಷಗಳ ಬಗ್ಗೆ ಅಧಿಕಾರಿಗಳ ಹಾಗೂ ಸಂಬಂಧಿಸಿದ ಇಂಜಿನಿಯರ್ ಅವರ ಅಲಕ್ಷ ಎದ್ದು ಕಾಣುತ್ತಿದ್ದು, ಈ ಕುರಿತು ವರದಿಯನ್ನು ಜಿಲ್ಲಾಧಿಕಾರಿಗೆ ನೀಡಲಾಗುವುದು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು. ತಪ್ಪಿತಸ್ಥರೆಲ್ಲರಿಗೂ ನೋಟಿಸ್ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಕಾಮಗಾರಿ ಸರಿಯಾಗಿ ನಿರ್ವಹಿಸದೆ ಬೇಜವಾಬ್ದಾರಿ ತೋರಿಸುತ್ತಿರುವ ಗುತ್ತಿಗೆದಾರನ ಬಿಲ್ ತಡೆ ಹಿಡಿಯಲಾಗುವುದು ಎಂದು ತಿಳಿಸಿದರು. 24 ಗಂಟೆಗಳ ಒಳಗಾಗಿ ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಟೆಂಡರ್ ಕರೆಯುವಂತೆ ಸ್ಥಳದಲ್ಲಿದ್ದ ಪುರಸಭೆ ಸಿಬ್ಬಂದಿಗೆ ಆದೇಶಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಬಂಡೆಪ್ಪ ಆಕಳ, ಪುರಸಭೆ ವ್ಯವಸ್ಥಾಪಕ ಅರುಣ ಚವ್ಹಾಣ, ರೈತ ಸಂಘದ ಅಧ್ಯಕ್ಷ ಎಚ್.ಆರ್. ಬಡಿಗೇರ, ಕರವೇ ಮುಖಂಡ ಶ್ರೀಶೈಲ ಕಾಚಾಪುರ, ಕುಮಾರ ಮೋಪಗಾರ, ದಲಿತ ಸಂಘದ ಲಕ್ಷ್ಮಣ ಬಾವಿಮನಿ, ರವಿ ಮಾಳಳ್ಳಿಕರ್ ಸೇರಿದಂತೆ ಸಂಘ ಸಂಸ್ಥೆಗಳು ಪದಾಧಿಕಾರಿಗಳು ಹಾಗೂ ಸಾರ್ವಜನಿಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.