ಭತ್ತದ ಮೇವು ಮಾರಾಟ
Team Udayavani, Dec 25, 2019, 12:31 PM IST
ಗುಂಡಭಟ್ಟ ಜೋಷಿ
ಕೆಂಭಾವಿ: ಜಿಲ್ಲೆಯಲ್ಲಿ ಮೇವಿನ ಕೊರತೆ ಆಗಬಾರದು ಎಂಬ ಉದ್ದೇಶದಿಂದ ರೈತರು ಭತ್ತದ ಮೇವನ್ನು ಸುಡಬಾರದು ಎಂದು ಜಿಲ್ಲಾಧಿಕಾರಿಗಳು ಪ್ರತಿ ಬಾರಿ ಆದೇಶ ನೀಡುತ್ತಾರೆ. ಆದರೆ ಇದಕ್ಕೆ ಅಪವಾದ ಎಂಬಂತೆ ಕೆಂಭಾವಿ ವಲಯದಿಂದ ಭತ್ತದ ಮೇವನ್ನು ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಲಾಗುತ್ತಿದೆ.
ಈಗಾಗಲೇ ಭತ್ತದ ರಾಶಿ ಪ್ರಾರಂಭವಾಗಿದೆ. ನಾ ಮುಂದು ತಾ ಮುಂದು ಎಂದು ಹೊರ ಜಿಲ್ಲೆಗಳ ಜನರು ನೂರಾರು ವಾಹನಗಳಲ್ಲಿ ಭತ್ತದ ಮೇವನ್ನು ತುಂಬಿಸಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ದನಗಳಿಗೆ ಮೇವಿನ ಕೊರತೆ ಎದುರಾಗಿತ್ತು. ಇದನ್ನು ಮನಗಂಡ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮೇವು ಸಾಗಿಸದಂತೆ ಕಟ್ಟಪ್ಪಣೆ ಹೊರಡಿಸಿದೆ. ಕೆಂಭಾವಿ ವಲಯದಲ್ಲಿ ಅರ್ಧ ಭಾಗ ನೀರಾವರಿ ಪ್ರದೇಶಕ್ಕೆ ಒಳಪಟ್ಟಿದ್ದರೆ, ಇನ್ನರ್ಧ ಭಾಗ ಒಣ ಬೇಸಾಯ ಪದ್ಧತಿಯಿಂದ ಮಳೆ ಅವಲಂಬಿಸಿ ರೈತರು ಬಿತ್ತನೆ ಮಾಡುತ್ತಾರೆ. ಒಣಬೇಸಾಯ ಪದ್ಧತಿ ಅಳವಡಿಸಿಕೊಂಡಿರುವ ರೈತರು ತಮ್ಮ ರಾಸುಗಳ ಹಸಿವು ನೀಗಿಸಲು ಭತ್ತದ ಮೇವಿನ ಕಡೆ ಚಿತ್ತ ನೆಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆ ಅಲ್ಲದೆ ಮಹಾರಾಷ್ಟ್ರ, ಆಂಧ್ರ ರಾಜ್ಯಗಳಿಂದಲೂ ಜನರು ಬಂದು ಟ್ರ್ಯಾಕ್ಟರ್, ಲಾರಿ ಸೇರಿದಂತೆ ಇನ್ನಿತರೆ ವಾಹನಗಳಲ್ಲಿ ಭತ್ತದ ಮೇವನ್ನು ತಗೆದುಕೊಂಡು ಹೋಗುತ್ತಿದ್ದಾರೆ. ಇದಕ್ಕೆ ತಡೆ ಹಿಡಿಯುವ ಪ್ರಯತ್ನ ಜಿಲ್ಲಾಡಳಿತ ಮಾಡುವುದಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.
ರೈತರು ಪ್ರತಿ ಬಾರಿ ಭತ್ತದ ಮೇವನ್ನು ಉಚಿತವಾಗಿ ನೀಡುತ್ತಿದ್ದರು. ಆದರೆ ಈ ಬಾರಿ ಬೇರೆ ಜಿಲ್ಲೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಪ್ರತಿ ಒಂದು ಲೋಡ್ ಗೆ ಇಂತಿಷ್ಟು ನಿಗದಿ ಮಾಡಿ ಆ ಭಾಗದ ರೈತರಿಂದ ಹಣ ಪಡೆಯುತ್ತಿದ್ದಾರೆ ಎಂದು ಕೆಲವರು ಹೇಳುತ್ತಾರೆ. ಕೆಂಭಾವಿ-ಸುರಪುರ, ಕೆಂಭಾವಿ- ಹುಣಸಗಿ, ಕೆಂಭಾವಿ-ಮಲ್ಲಾ ರಸ್ತೆಗಳಲ್ಲಿ ಈಗಾಗಲೇ ಭತ್ತದ ರಾಶಿ ನಡೆದಿದೆ.
ಭತ್ತದ ಗದ್ದೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಒಟ್ಟಾರೆ ಮುಂಬರುವ ಬೇಸಿಗೆ ದಿನಗಳಲ್ಲಿ ದನಕರುಗಳಿಗೆ ಮೇವಿನ ಕೊರತೆ ಆಗದ ರೀತಿಯಲ್ಲಿ ಜಿಲ್ಲಾಡಳಿತ ಯಾವ ರೀತಿ ಕ್ರಮ ಕೈಗೊಳ್ಳುವುದು ಕಾದು ನೋಡಬೇಕು.
ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ ದನಕರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ನೀಗಿಸಲು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗಿದೆ. ಯಾವ ಕಾರಣಕ್ಕೂ ನಮ್ಮ ತಾಲೂಕಿನ ಮೇವು ಬೇರೆ ಜಿಲ್ಲೆಗೆ ಹೋಗದಂತೆ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ಗಡಿಯಲ್ಲಿ ಗಸ್ತು ನೇಮಿಸಲಾಗುವುದು. ಅವಶ್ಯ ಬಿದ್ದರೆ ಪೊಲೀಸ್ ಇಲಾಖೆ ಸಹಾಯ ಪಡೆಯಲಾಗುವುದು.
ನಿಂಗಣ್ಣ ಬಿರಾದಾರ,
ತಹಶೀಲ್ದಾರ್ ಸುರಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.