ಹನಿ ನೀರಿಗೂ ತಪ್ಪಿಲ್ಲ ಜನತೆ ಪರದಾಟ

Team Udayavani, May 20, 2019, 12:16 PM IST

20-May-14

ಕೆಂಭಾವಿ: ಯಾದಗಿರಿ- ವಿಜಯಪುರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ತಾಂಡಾದಲ್ಲಿ ಟ್ಯಾಂಕರ್‌ ನೀರಿಗೆ ಜನತೆ ಸರದಿ ಸಾಲಿನಲ್ಲಿ ಕೊಡಗಳನ್ನು ಇಟ್ಟಿರುವುದು.

ಕೆಂಭಾವಿ: ಬೇಸಿಗೆ ಅವಧಿಯಲ್ಲಿ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯದಿಂದ ಕೆಂಭಾವಿ ವಲಯದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಜನತೆ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗನೂರ ಗ್ರಾಪಂ ವ್ಯಾಪ್ತಿಯ ನಗನೂರ, ಖಾನಾಪೂರ, ಚಾಮನಾಳ ಗ್ರಾಪಂನ ವಿವಿಧ ತಾಂಡಾಗಳು ಹಾಗೂ ಏವೂರ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳು ಹಾಗೂ ತಾಂಡಾಗಳಲ್ಲಿ ನೀರಿಗೆ ಜನ ಪರಿತಪಿಸುತ್ತಿದ್ದಾರೆ. ಒಂದು ಕಡೆ ಬಿರು ಬೇಸಿಗೆಯಿಂದ ಜನತೆ ನೀರಿಗೆ ತತ್ತರಿಸುತ್ತಿದ್ದರೆ ಇತ್ತ ಮತ್ತೂಂದು ಕಡೆ ರಾಜಕೀಯ ನಾಯಕರು ಮದುವೆ ಹಾಗೂ ಸ್ಥಳೀಯ ಚುನಾವಣೆಯಲ್ಲಿ ಸಿಲುಕ್ಕಿದ್ದು, ಜನತೆಯ ಗೋಳು ಯಾರು ಕೇಳುವರು ಎಂಬ ಪ್ರಶ್ನೆ ಕಾಡುತ್ತಿದೆ.

ಸಕಾಲಕ್ಕೆ ಮಳೆಯಾಗದೆ ಈ ಬಾರಿ ಬೇಸಿಗೆ ಬಿಸಿಲಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಜಲಮೂಲ ಸಂಪೂರ್ಣ ಬತ್ತಿ ಹೋಗಿ ಕೊಳವೆ ಬಾವಿ ಹಾಗೂ ತೆರೆದ ಬಾವಿಗಳು ಒಣಗಿದ್ದು, ಇದರಿಂದ ನೀರಿನ ತೊಂದರೆ ಹೆಚ್ಚಾಗಲಿಕ್ಕೂ ಕಾರಣ ಎಂದು ಹೇಳಲಾಗುತ್ತಿದೆ.

ಯಾದಗಿರಿ-ವಿಜಯಪುರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಹಲವು ತಾಂಡಾಗಳಲ್ಲಿ ಬೆಳಗ್ಗೆಯಿಂದ ಜನತೆ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಟ್ಯಾಂಕರ್‌ ನೀರಿಗೆ ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ಗ್ರಾಮಕ್ಕೆ ದಿನಕ್ಕೆ ಕೇವಲ ಎರಡು ಟ್ಯಾಂಕರ್‌ ನೀರಿನಂತೆ ತಾಲೂಕು ಆಡಳಿತ ಹಾಗೂ ಸ್ಥಳೀಯ ಗ್ರಾಪಂ ವತಿಯಿಂದ ಜನತೆಗೆ ನೀರು ಸರಬರಾಜು ಮಾಡುತ್ತಿದ್ದು, ಇದು ಯಾವುದಕ್ಕೂ ಸಾಕಾಗುವುದಿಲ್ಲ ಎಂಬುದು ಹಲವರ ವಾದವಾಗಿದೆ. ವಿಪರ್ಯಾಸವೆಂದರೆ ಹೋದ ವರ್ಷ ಟ್ಯಾಂಕರ್‌ ನೀರು ಪೂರೈಕೆ ಮಾಡಿದ ಟ್ಯಾಂಕರ್‌ ಮಾಲೀಕರಿಗೆ ತಾಲೂಕು ಆಡಳಿತ ಇನ್ನೂ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಈ ಬಾರಿ ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಹಲವು ಟ್ಯಾಂಕರ್‌ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ.

ತಾಲೂಕಿನ ಗಡಿ ಗ್ರಾಮಗಳಾದ ಯಕ್ತಾಪೂರ ಗ್ರಾಪಂ ವ್ಯಾಪ್ತಿಯ ಯಕ್ತಾಪೂರ, ಬೊಮ್ಮನಹಳ್ಳಿ, ವಂದಗನೂರ, ಚಿಂಚೋಳಿ, ಮಲಕಾಪೂರ, ಕಾಚಾಪೂರ, ಹೂವಿನಹಳ್ಳಿ, ತಳ್ಳಳ್ಳಿ, ಐನಾಪೂರ, ಬೇವಿನಾಳ, ಆಲಾØಳ, ದೋರನಹಳ್ಳಿ ಗ್ರಾಮಗಳಲ್ಲಿ ಇದ್ದ ಎಲ್ಲ ಕೊಳವೆ ಬಾವಿಗಳು ಸಂಪೂರ್ಣ ಬತ್ತಿ ಹೋಗಿದ್ದು, ಇದರಿಂದ ಜನತೆ ನೀರಿನ ತೊಂದರೆ ಅನುಭವಿಸುತ್ತಿದ್ದಾರೆ. ವಿಚಿತ್ರವೆಂದರೆ ಗ್ರಾಪಂ ಕೇಂದ್ರ ಸ್ಥಾನವಾದ ಯಕ್ತಾಪೂರ ಗ್ರಾಮದಲ್ಲಿಯೇ ಕಳೆದ ಹಲವು ತಿಂಗಳಿನಿಂದ ಇಡೀ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿಗೆ ಸರ್ಕಾರ ಪ್ರತಿವರ್ಷ ಸಾಕಷ್ಟು ಅನುದಾನ ನೀಡುತ್ತಿದ್ದರೂ ಗ್ರಾಮಾಂತರ ಪ್ರದೇಶಗಳಲ್ಲಿ ಜಲಮೂಲ ಬತ್ತಿ ಹೋಗಿರುವುದರಿಂದ ಜನತೆಗೆ ಯಾವ ರೀತಿ ನೀರು ಕೊಡಬೇಕು ಎಂಬುದೆ ಅಧಿಕಾರಿಗಳಿಗೆ ತಲೆನೋವಾಗಿ ಪರಣಮಿಸಿದೆ. ಇನ್ನು ಹಲವು ಗ್ರಾಮಗಳಲ್ಲಿ ಜಲಮೂಲ ಸಾಕಷ್ಟಿದ್ದರೂ ಅನುದಾನ ಬಳಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದು, ಇದೂ ಕೂಡ ನೀರಿನ ತತ್ವಾರಕ್ಕೆ ಕಾರಣ ಎಂಬ ಮಾತು ಹಲವರಿಂದ ಕೇಳಿ ಬರುತ್ತಿದೆ. ಏನೆ ಇದ್ದರೂ ಬೇಸಿಗೆ ಮುಗಿಯುವ ಮುನ್ನವೆ ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಂಡು ನೀರಿನ ಕೊರತೆ ನೀಗಿಸುವಲ್ಲಿ ಜಿಲ್ಲಾಡಳಿತ ಶ್ರಮ ವಹಿಸುವುದೆ ಕಾಯ್ದು ನೋಡಬೇಕು.

ತಾಲೂಕಿನ ಹಲವು ಗ್ರಾಮಗಳಲ್ಲಿ ಜಲಕ್ಷಾಮ ಉಂಟಾಗಿದ್ದು, ಭೂಮಿಯಲ್ಲಿ ನೀರಿನ ಪ್ರಮಾಣ ಸಂಪೂರ್ಣ ಕುಸಿದಿದೆ. ಕೆಲವು ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಯಿಂದ ಜನತೆಗೆ ನೀರು ಪೂರೈಕೆ ಮಾಡುತ್ತಿದ್ದು, ನಗನೂರ, ತಳ್ಳಳ್ಳಿ ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ಜನತೆಗೆ ನೀರು ಸರಬರಾಜು ಮಾಡಲಾಗುತ್ತಿದೆ. ಬೇಸಿಗೆ ಮುಗಿಯುವವರೆಗೆ ಜನತೆಗೆ ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು.
ಜಗದೇವಪ್ಪ. ಇಒ ಸುರಪುರ

ನಮ್ಮ ಗ್ರಾಮಕ್ಕೆ ದಿನಕ್ಕೆ ಎರಡು ಬಾರಿ ಟ್ಯಾಂಕರ್‌ ನೀರು ಸರಬರಾಜು ಮಾಡುತ್ತಿದ್ದು, ಇದು ಜನತೆಗೆ ಸಾಲುತ್ತಿಲ್ಲ. ಪ್ರತಿ ವಾರ್ಡ್‌ಗೆ ಒಂದರಂತೆ ಸಮಯದ ಅನುಗುಣವಾಗಿ ನೀರು ಸರಬರಾಜು ಮಾಡಬೇಕು ಎಂದು ಹಲವು ಬಾರಿ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನೀರಿನ ಸಮಸ್ಯೆ ಹೆಚ್ಚಾಗಿದ್ದರಿಂದ ಹಲವು ಜನತೆ ಗ್ರಾಮವನ್ನೆ ತೊರೆದು ಬೇರೆ ಊರಿಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
•ಶರಣಪ್ಪ ಗಾಯಕವಾಡ, ನಗನೂರ ನಿವಾಸಿ

ಗುಂಡಭಟ್ಟ ಜೋಶಿ

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.