ಬಿಜೆಪಿಗೆ 150 ಸ್ಥಾನ: ಡಿವಿಎಸ್
Team Udayavani, Jan 16, 2018, 10:28 AM IST
ಸೋಮವಾರಪೇಟೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, ಬಿಜೆಪಿಯು ನಿಶ್ಚಿತವಾಗಿ 150 ಸ್ಥಾನಗಳನ್ನು ಪಡೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಅವರು ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುವುದಾಗಿ ಕನಸು ಕಾಣುತ್ತಿದೆ. ಆದರೆ ಅದರ ಸ್ಥಾನ ಗಳಿಕೆ ಎರಡಂಕಿಯನ್ನು ದಾಟುವುದಿಲ್ಲ ಹಾಗೂ ಇದು ಜೆಡಿಎಸ್‌ನ ಕೊನೆಯ ಚುನಾವಣೆ ಆಗಲಿದೆ. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ 150 ಸ್ಥಾನ ಪಡೆದು ಅಧಿಕಾರ ಕೈಗೆತ್ತಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸು ವುದಾಗಿ ಅವರು ಹೇಳಿದರು.
ಹಿಂದೂವಾದ ಅಹಿಂದ
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಮಾತನಾಡಿ, ಬಿಜೆಪಿ ಸೈದ್ಧಾಂತಿಕ ಹಿನ್ನೆಲೆಯುಳ್ಳ ರಾಷ್ಟ್ರೀಯ ಪಕ್ಷ. ಇಂತಹ ದೇಶಾಭಿಮಾನವುಳ್ಳ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಕರ್ತವ್ಯ ಎಂದು ಹೇಳಿದರು. ವಿಭಜನೆ ಮತ್ತು ವಿಷಯಾಂತರದ ರಾಜಕಾರಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಂದಿನ ಚುನಾ ವಣೆಯಲ್ಲಿ ಜನರು ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದರು.
ಗ್ರಹಣ ಬಿಡುವ ಕಾಲ ಸನ್ನಿಹಿತ
ಸಂಸದ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರತಾಪ್ ಸಿಂಹ ಮಾತನಾಡಿ, ರಾಜ್ಯಕ್ಕೆ ಕಳೆದ ನಾಲ್ಕು ಮುಕ್ಕಾಲು ವರ್ಷಗಳಿಂದ ಗ್ರಹಣ ಹಿಡಿದಿದೆ. ಮುಂದಿನ ಮೂರು ತಿಂಗಳಲ್ಲಿ ಗ್ರಹಣ ಬಿಡಲಿದೆ ಎಂದರು. ಕೊಡಗಿನವರು ಸೈನ್ಯ ಹಾಗೂ ಹಾಕಿಯಲ್ಲಿ ದೇಶದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ದೇಶಭಕ್ತಿಯಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಪ್ರಶಂಸಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.