ಕೊಡಗು: 18 ಪಾಸಿಟಿವ್, 2 ಸಾವು
Team Udayavani, Jul 13, 2020, 6:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಡಿಕೇರಿ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪದ 86 ವರ್ಷದ ವೃದ್ಧೆ ಮತ್ತು ಚೇರಂಬಾಣೆಯ ನಿವಾಸಿ 77 ವರ್ಷದ ವೃದ್ಧರೊಬ್ಬರು ರವಿವಾರ ಮೃತಪಟ್ಟಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ವೃದ್ಧೆಯು ಅಧಿಕ ರಕ್ತದೊತ್ತಡದ ಹಿನ್ನೆಲೆಯಲ್ಲಿ ಜು. 6ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜು. 7ರಂದು ಸೋಂಕು ದೃಢಪಟ್ಟಿತ್ತು.
ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಶನಿವಾರ ತಡರಾತ್ರಿ ಅಸುನೀಗಿದ್ದಾರೆ.
ಕಿಡ್ನಿ ಸಮಸ್ಯೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಕೋವಿಡ್ ಆಸ್ಪತ್ರೆಗೆ ಜು. 9ರಂದು ಪುನರ್ ದಾಖಲಾಗಿದ್ದ ಚೇರಂಬಾಣೆಯ 77 ವರ್ಷದ ವೃದ್ಧ ರವಿವಾರ ಸಂಜೆ ಮೃತಪಟ್ಟರು.
ಒಂದೇ ದಿನ 18 ಪ್ರಕರಣ
ಕೊಡಗು ಜಿಲ್ಲೆಯಲ್ಲಿ ರವಿವಾರ ಮೂವರು ಆರೋಗ್ಯ ಕಾರ್ಯಕರ್ತರು ಸೇರಿದಂತೆ 18 ಮಂದಿಯಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 169ಕ್ಕೆ ಏರಿಕೆಯಾಗಿದೆ.
ಕುಶಾಲನಗರದಲ್ಲಿ ಇತ್ತೀಚೆಗೆ ಕೋವಿಡ್ 19 ಸೋಂಕಿನಿಂದ ಸಾವಿಗೀಡಾದ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಮಂದಿ, ಮಹಾರಾಷ್ಟ್ರದಿಂದ ಮರಳಿದ ಕೊಡ್ಲಿಪೇಟೆ ಊರುಗುತ್ತಿಯ ಮಹಿಳೆ, ಸುಂಟಿಕೊಪ್ಪದ 11 ವರ್ಷದ ಬಾಲಕಿ, ಮಡಿಕೇರಿ ಪುಟಾಣಿ ನಗರದ ಆ್ಯಂಬುಲೆನ್ಸ್ ಚಾಲಕ ಬಾಧಿತರಲ್ಲಿದ್ದಾರೆ. ಅವರಲ್ಲಿ 60 ವರ್ಷ ದಾಟಿದ ಇಬ್ಬರು ಇದ್ದಾರೆ.
ಸ್ವಯಂ ಸೇವಕರಿಂದ ವೃದ್ಧೆಯ ಶವ ಸಂಸ್ಕಾರ
ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮೃತರಾದ ಗೋಣಿಕೊಪ್ಪದ ಮಹಿಳೆಯ ಶವ ಸಂಸ್ಕಾರವನ್ನು ಕೋವಿಡ್-19 ಮಾರ್ಗಸೂಚಿ ಪ್ರಕಾರ ಮಡಿಕೇರಿ ನಗರ ಶಾಂತಿನಿಕೇತನ ಘಟಕದ ಬಜರಂಗದಳದ ಕೋವಿಡ್ ವಾರಿಯರ್ಸ್ ಮಡಿಕೇರಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.