ಎ.16-19: ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ; ಸಂತೆ, ಜಾತ್ರೆಗಳಿಲ್ಲ
Team Udayavani, Apr 15, 2019, 6:30 AM IST
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ನಡೆಸುವ ಸಂಬಂಧ ಮತ್ತು ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಎ.16 ರ ಸಂಜೆ 6 ಗಂಟೆಯಿಂದ ಎ.19ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ, ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ರಾಜಕೀಯ ಸಭೆ ಸಮಾರಂಭ ನಡೆಸುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ಇನ್ನಿತರೆ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿಷೇಧಿಸಿದೆ.
ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮಾಡುವಂತಿಲ್ಲ. ಮತದಾನದ ದಿನವಾದ ಎ.18 ರಂದು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ.
ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್, ಎಟಿಎಂ, ಭದ್ರತಾ ಸಿಬಂದಿಗಳು ಹಾಗೂ ಮತಗಟ್ಟೆಗಳ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬಂದಿಗಳು ಆಯುಧ, ಬಂದೂಕು ಗಳನ್ನು ಹೊಂದಿರುವುದಕ್ಕೆ ಅಥವಾ ಬಳಸು ವುದಕ್ಕೆ ಅನುÌಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನಿರ್ಬಂಧಿತ ಪ್ರದೇಶ
ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು, ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಎಲ್ಲ ಮತಗಟ್ಟೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾ ದವುಗಳನ್ನು ನಿಷೇಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.