ಬಾಲ್ಯ ವಿವಾಹ ನಡೆದರೆ ಅಧಿಕಾರಿಗಳ ವಿರುದ್ಧವೇ ಕ್ರಮ: ಡಿಸಿ
Team Udayavani, Jul 14, 2017, 2:40 AM IST
ಮಡಿಕೇರಿ: ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಬಗ್ಗೆ ವರದಿಗಳು ಕೇಳಿ ಬರುತ್ತಿದ್ದು, ಬಾಲ್ಯ ವಿವಾಹ ಮಾಡುವ ಪೋಷಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲ್ಯವಿವಾಹ ತಡೆಯುವ ಕುರಿತು ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀ ಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇನ್ನೂ ಬಾಲ್ಯವಿವಾಹ ನಡೆಯುತ್ತಿರು ವುದು ಅಕ್ಷಮ್ಯ ಅಪರಾಧವಾಗಿದೆ. ಬಾಲ್ಯವಿವಾಹ ಪ್ರಕರಣಗಳು ಕೇಳಿ ಬಂದರೆ ನಿಮ್ಮ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ) ವಿರುದ್ಧವೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಸಂಘ ಸಂಸ್ಥೆಗಳ ಸಹಕಾರ ಪಡೆಯಿರಿ
ಕಾನೂನಿನ ಭಯವಿಲ್ಲದಿದ್ದರೆ ಈ ರೀತಿ ಆಗುತ್ತದೆ. ಪ್ರತಿಯೊಬ್ಬರಲ್ಲೂ ಕಾನೂನಿನ ಬಗ್ಗೆ ಅರಿವು ಇರಬೇಕು. ಜತೆಗೆ ಭಯವೂ ಇರಬೇಕು. ಹಾಗಾದಾಗ ಮಾತ್ರ ಬಾಲ್ಯ ವಿವಾಹ ತಡೆಯಲು ಸಾಧ್ಯ. ಬಾಲ್ಯವಿವಾಹ ನಿಯಂತ್ರಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್ ಮತ್ತಿತರ ಸರಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ್ಯವಿವಾಹ ನಿಷೇಧ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ಹಾಗೆಯೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರೊಂದಿಗೆ ಚರ್ಚಿಸಿ ಜಿಲ್ಲೆಯ ಎಲ್ಲ ಪ್ರೌಢ ಶಾಲೆಗಳಲ್ಲಿ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪೋಸ್ಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಬಾಲ್ಯ ವಿವಾಹ ನಿಷೇಧ ಸೇರಿದಂತೆ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಜತೆಗೆ ಮಹಿಳೆಯರು ಮತ್ತು ಮಕ್ಕಳಿಗೆ ಇರುವ ಸರಕಾರದ ಕಾರ್ಯಕ್ರಮಗಳ ಬಗ್ಗೆ ತಾಲೂಕು ಮಟ್ಟದಲ್ಲಿ ಮಾಹಿತಿ ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಹೇಳಿದರು.
ಅಂಗನವಾಡಿಗಳ ಬಗ್ಗೆ ಕಾಳಜಿ ತೋರಿ
ಜಿಲ್ಲೆಯಲ್ಲಿ ಖಾಸಗಿಯಾಗಿ ನಿರ್ವಹಿಸುವ ಅಂಗನ ವಾಡಿಗಳಿಗೆ ಸ್ವಂತ ನಿವೇಶನ ಪಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಸಮರ್ಪಕವಾಗಿ ವಿತರಣೆ ಮಾಡಬೇಕು. ಗರ್ಭಿಣಿ ಯರು, ಬಾಣಂತಿಯರು, ಕಿಶೋರಿಯರು ಇವರಿಗೆ ಗುಣಮಟ್ಟದ ಪೂರಕ ಪೌಷ್ಟಿಕ ಆಹಾರ ವಿತರಣೆಯ ಮೆನು ಚಾರ್ಟ್ ತಯಾರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರು ಸೂಚನೆ ನೀಡಿದರು.
ಜಿ.ಪಂ. ಸಿಇಒ ಚಾರುಲತಾ ಸೋಮಲ್ ಅವರು ಮಾತನಾಡಿ, ಅಂಗನವಾಡಿ ಕಟ್ಟಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಬಾಕಿ ಇರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ವಾತಾವರಣಕ್ಕೆ ಹೊಂದಿಕೊಂಡಂತೆ ಗುಣಮಟ್ಟದ ಆಹಾರ ಪೂರೈಸುವಂತೆ ಜಿ.ಪಂ. ಸಿಇಒ ಅವರು ನಿರ್ದೇಶನ ನೀಡಿದರು.
ಆರು ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕತೆ ಮಟ್ಟ ಹಾಗೂ ಆರೋಗ್ಯ ಸ್ಥಿತಿ ಸುಧಾರಿಸುವುದು, ಮಗು ವಿನ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ಪೌಷ್ಟಿಕ ಆಹಾರ ಒದಗಿಸುವುದು. ಮಕ್ಕಳ ಬೆಳವಣಿಗೆಗೆ ಆರೋಗ್ಯ ಇಲಾಖೆ ಜತೆ ಸೇರಿ ಮಾಹಿತಿ ನೀಡುವುದು. ಶಿಶು ಮರಣ ತಡೆಯುವುದು, ಅಪೌಷ್ಟಿಕತೆ ನಿವಾರಣೆ ಮಾಡುವುದು, ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒ ಚಾರುಲತಾ ಸೋಮಲ್ ಅವರು ಸಲಹೆ ನೀಡಿದರು.
ಆರು ವರ್ಷದೊಳಗಿನ ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ ನೀಡು
ವುದು, ಮಕ್ಕಳಿಗೆ ಹಾಗೂ ತಾಯಂದಿರಿಗೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದು, ಆರೋಗ್ಯ ತಪಾಸಣೆ ಮಾಡುವುದು, ಸಲಹಾ ಸೇವೆ ಒದಗಿಸು ವುದು, ಮಹಿಳೆಯರಿಗೆ ಆರೋಗ್ಯ ಮತ್ತು ಪೌಷ್ಟಿಕ ಶಿಕ್ಷಣ ನೀಡುವುದು. 3 ರಿಂದ 6 ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಚಟುವಟಿಕೆಯನ್ನು ನಡೆಸುವಂತೆ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್ ಅವರು ಮಾಹಿತಿ ನೀಡಿ ಅಂಗನವಾಡಿ ಕಟ್ಟಡ ಉನ್ನತ್ತೀಕರಣ, ಬಾಲ ಸ್ನೇಹಿ ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ದುರಸ್ತಿ ಬಗ್ಗೆ ಮಾಹಿತಿ ನೀಡಿದರು.
52 ಅಂಗನವಾಡಿಗಳು ಅತಂತ್ರ
ಜಿಲ್ಲೆಯಲ್ಲಿ 871 ಅಂಗನವಾಡಿಗಳಿದ್ದು, 694 ಸ್ವಂತ ಕಟ್ಟಡಗಳಿವೆ. 12 ಪಂಚಾಯತ್ ಕಟ್ಟಡಗಳು, 25 ಸಮುದಾಯ ಭವನದಲ್ಲಿ, 7 ಮಹಿಳಾ ಮಂಡಳದಲ್ಲಿ, 16 ಶಾಲೆಗಳಲ್ಲಿ 65 ಬಾಡಿಗೆ ಕಟ್ಟಡದಲ್ಲಿ ಹಾಗೂ 52 ತಾತ್ಕಾಲಿಕ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ವಿಕಲಚೇತನರ ಅಧಿಕಾರಿ ಜಗದೀಶ್, ಸಿಡಿಪಿಒಗಳಾದ ದಮಯಂತಿ, ಲೀಲಾವತಿ, ಸಂಪತ್‌ಕುಮಾರ್ ಅವರು ಹಲವು ಮಾಹಿತಿ ನೀಡಿದರು. ಆಹಾರ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ.ಆರ್. ಬಸವರಾಜು., ಇನ್‌ಸ್ಪೆಕ್ಟರ್ ಐ.ಪಿ. ಮೇದಪ್ಪ, ಡಾ| ರಾಜೇಶ್ವರಿ, ಡಾ| ನವೀನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಾಂಸ್ಥಿಕ ರಕ್ಷಣಾಧಿಕಾರಿ ಮಂಜುನಾಥ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಜಾಯ್ಸ ಮಿನೇಜಸ್, ಸತ್ಯಭಾಮಾ, ಜಯಂತಿ, ಯಶೋದಾ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.