ಅಂಬೇಡ್ಕರ್‌ ಹೋರಾಟ ಸದಾ ಸ್ಮರಣೀಯ: ವಿಜು ಸುಬ್ರಮಣಿ 


Team Udayavani, Jul 23, 2017, 7:20 AM IST

Z-AMBEDKAR-SMARANE-1.gif

ಮಡಿಕೇರಿ: ಸುಭದ್ರ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್‌ ಅವರ ತತ್ವ, ಸಿದ್ಧಾಂತಗಳು, ದೂರದೃಷ್ಟಿ, ಮಾರ್ಗದರ್ಶನಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಎಂ.ಕೆ. ವಿಜು ಸುಬ್ರಮಣಿ ಅವರು ಹೇಳಿದ್ದಾರೆ.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿ ಧಾನ ಶಿಲ್ಪಿ, ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 126ನೇ ವರ್ಷಾಚರಣೆ ಪ್ರಯುಕ್ತ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ತಮಗಿದೋ ನಮ್ಮ ಗೌರವ ನಮನ ಮೂರು ನುಡಿ-ನೂರು ದುಡಿ ನುಡಿ ನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಧೀಮಂತ ನಾಯಕ. ಇವರ ಚಿಂತನೆಗಳು, ಸಮಾಜಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಿಸುವಂತಾಗಬೇಕು ಎಂದು ವಿಜು ಸುಬ್ರಮಣಿ ಕರೆ ನೀಡಿದರು. 

ಅಂಬೇಡ್ಕರ್‌ ಅವರ ಹೋರಾಟದ ಬದುಕನ್ನು ಸದಾ ಸ್ಮರಿಸುವಂತಾಗಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅಂಬೇಡ್ಕರ್‌ ಅವರ ಜೀವನ, ಬದುಕು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ವಿಶ್ವದಲ್ಲಿಯೇ ಅತ್ಯಂತ ಪ್ರಬಲ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಅಂಬೇಡ್ಕರ್‌ ಅವರ ಕೊಡುಗೆ ಅಪಾರ. ಪ್ರಪಂಚದಲ್ಲಿ ಪ್ರಸಿದ್ಧ ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್‌ ಅವರ ಶ್ರಮ ದೊಡ್ಡದು ಎಂದರು. 

ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರು ಮಾತನಾಡಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಮಾಜದ ಬಡ ವರ್ಗದವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸದಾ ತುಡಿತ ಹೊಂದಿದ್ದರು ಎಂದು ಹೇಳಿದರು. 
 
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್‌ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ದೇಶಕ್ಕೆ ನೀಡಿ ರುವ ಕೊಡುಗೆಯನ್ನು  ಸದಾ ಸ್ಮರಿಸಬೇಕು. ಇವರ ಕಾರ್ಯ ದಕ್ಷತೆ, ಹೋರಾಟದ ಬಗ್ಗೆ ಅಧ್ಯಯನ ಮಾಡಬೇಕು ಎಂದು ತಿಳಿಸಿದರು. 

ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ಉಪನ್ಯಾಸಕರಾದ ಶ್ರೀಧರ ಹೆಗಡೆ ಮಾತನಾಡಿದರು. ನಗರಸಭೆ ಪೌರಾಯುಕ್ತೆ ಬಿ. ಶುಭಾ, ಪ್ರಮುಖರಾದ ಮುತ್ತಪ್ಪ, ಗಣೇಶ್‌, ದಿವಾಕರ್‌, ಆಹಾರ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ ಇತರರು ಹಾಜರಿದ್ದರು.  ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ ಸ್ವಾಗತಿಸಿದರು. ರಾಜು ಮತ್ತು ತಂಡದವರು ನುಡಿ ನಮನ ಹಾಡು ಹಾಡಿದರು. ಚರ್ಮವಾದ್ಯ, ಹೋರಾಟದ ಹಾಡುಗಳು, ಜನಪದ ಕಲಾ ಕಾರ್ಯಕ್ರಮ ಆಕರ್ಷಣೀಯವಾಗಿತ್ತು.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.