ಮುಳ್ಳೂರು ಬಸವೇಶ್ವರ ದೇವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ
Team Udayavani, May 17, 2019, 6:10 AM IST
ಶನಿವಾರಸಂತೆ: ಸಮೀಪದ ಮುಳ್ಳೂರು ಗ್ರಾಮದ ಬಸವೇಶ್ವರ ದೇವರ ಮತ್ತು ಗ್ರಾಮದ ವಾರ್ಷಿಕ ಪೂಜಾ ಮಹೋತ್ಸವ ಮಂಗಳವಾರ ಬೆಳಗ್ಗೆ ಸಂಪನ್ನಗೊಂಡಿತು. ಸೋಮವಾರ ಅಪರಾಹ್ನ 3 ಗಂಟೆಗೆ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸದ ನಂತರ ಬಸವೇಶ್ವರ ದೇವರಿಗೆ ಜೇನು, ಎಳನೀರು, ಹಣ್ಣು ಹಂಪಲು ನೈವೇದ್ಯ ಅರ್ಪಿಸುವುದರೊಂದಿಗೆ ಪೂಜಾ ಮಹೋ ತ್ಸವಕ್ಕೆ ಚಾಲನೆ ನೀಡಲಾಯಿತು. ಅನಂತರ ದೇಗುಲದಲ್ಲಿ ಭಕ್ತರು ಬಂದು ಪೂಜೆ ಸಲ್ಲಿಸಿದರು.
ಸಂಜೆ 6 ಗಂಟೆಗೆ ಮುಳ್ಳೂರು ಜಂಕ್ಸನ್ ಅರಳಿಕಟ್ಟೆಯಿಂದ ಗ್ರಾಮದ ನೂರಾರು ಮಳೆಯರು ಮತ್ತು ಹೆಣ್ಣು ಮಕ್ಕಳು ಕಲಶ ಹೊತ್ತು ವಾದ್ಯಾಗೋಷ್ಠಿಯೊಂದಿಗೆ ದೇಗುಲದ ವರೆಗೆ ಮೆರವಣಿಗೆಯಲ್ಲಿ ಸಾಗಿದರು. ಅನಂತರ ದೇವಾಲಯದಲ್ಲಿ ವಿವಿಧ ಪೂಜಾದಿ ವಿಧಾನಗಳನ್ನು ನಡೆಸಲಾಯಿತು. ರಾತ್ರಿ ಭಕ್ತಾದಿಗಳಿಗೆ, ಗ್ರಾಮಸ್ಥರಿಗೆ ಅನ್ನ ದಾನವನ್ನು ಏರ್ಪಡಿಸಲಾಗಿತು. ರಾತ್ರಿ 11 ಗಂಟೆಯಿಂದ ಮಂಗಳವಾರ ಬೆಳಗ್ಗಿನ ಜಾವ 5 ಗಂಟೆಯ ತನಕ ಭಕ್ತಾದಿಗಳಿಂದ ಮತ್ತು ಗ್ರಾಮಸ್ಥರಿಂದ ದೇವರ ಉತ್ಸವದ ಅಂಗವಾಗಿ ಸುಗ್ಗಿ ಕುಣಿತ ನೆರವೇರಿತು.
ಬೆಳಗ್ಗೆ 5.30ಕ್ಕೆ ಬಸವೇಶ್ವರ ದೇವರ ವಿಗ್ರಹವನ್ನು ಅಡ್ಡ ಪಲ್ಲಕಿಯಲ್ಲಿ ಕುಳ್ಳಿರಿಸಿ ದೇವಾಲಯದ ಸುತ್ತ ಅಡ್ಡ ಪಲ್ಲಕ್ಕಿ ಉತ್ಸವವನ್ನು ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಬೆಳಗ್ಗೆ 7-30 ವರೆಗೆ ಉತ್ಸವದ ಅಂಗವಾಗಿ ಕೆಂಡ ಹಾಯುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ದೇವರಿಗೆ ಮಹಾ ಮಂಗಳಾರತಿ ಸಲ್ಲಿಸಿದ ಅನಂತರ ಪೂಜಾ ಮಹೋತ್ಸವ ಸಂಪನ್ನ ಗೊಂಡಿತು.
ದೇವಾಲಯದ ಪ್ರಧಾನ ಅರ್ಚಕ ಶಿವಶಂಕರ್ ನೇತೃತ್ವದಲ್ಲಿ ಪೂಜಾ ವಿಧಾನ ನೆರವೇರಿತು. ಪೂಜಾ ಮಹೋತ್ಸವದಲ್ಲಿ ಗ್ರಾಮ ಮತ್ತು ಅಕ್ಕಪಕ್ಕದ ಗ್ರಾಮಗಳಿಂದ ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.