ಸೇನೆ ದಾಳಿ: ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿ ವಿಜಯೊತ್ಸವ
Team Udayavani, Feb 28, 2019, 1:00 AM IST
ಮಡಿಕೇರಿ : ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿ ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆಯ ಎದೆಗಾರಿಕೆಯ ಕಾರ್ಯಾಚರಣೆಯನ್ನು ವಿಜಯೋತ್ಸವವನ್ನಾಗಿ ಆಚರಿಸಿದ ಬಿಜೆಪಿ ಪ್ರಮುಖರು ಹಾಗೂ ಸಾರ್ವಜನಿಕರು ಸೈನಿಕರ ಪರ ಘೋಷಣೆಕೂಗಿದರು.
ನಗರದ ಇಂದಿರಾಗಾಂಧಿ ವೃತ್ತದಲ್ಲಿ ಸೇನಾಪಡೆ ಪರ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಪಾಕ್ ಪ್ರಚೋದಿತ ಉಗ್ರಗಾಮಿಗಳ ಕೃತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸೇನೆಯ ಮೂಲಕ ತಕ್ಕ ಉತ್ತರ ನೀಡಿದ್ದು, ಇನ್ನಾದರೂ ಪಾಕಿಸ್ತಾನ ತನ್ನ ತಪ್ಪನ್ನು ತಿದ್ದುಕೊಳ್ಳಲಿ ಎಂದರು.
ನಿವೃತ ಯೋಧ ಲಕ್ಷ್ಮಣ್ ಮಾತನಾಡಿ, ಎರಡನೇ ಸರ್ಜಿಕಲ್ ಸ್ಟ್ರೆçಕ್ ಹೆಮ್ಮೆಯ ವಿಚಾರವಾಗಿದ್ದು, ಭಾರತೀಯ ಯೋಧರು ಯಾವುದಕ್ಕೂ ಹಿಂಜರಿಯುವುದಿಲ್ಲ ಎನ್ನುವುದಕ್ಕೆ ಇದು ಸಾಕ್ಷಿೆ. ಉಗ್ರರ ದಾಳಿ ಮುಂದುವರೆದಲ್ಲಿ ಭಾರತೀಯ ಸೇನೆ ಉಗ್ರರನ್ನು ಧ್ವಂಸಗೊಳಿಸುವುದು ಖಚಿತವೆಂದರು.
ರಜೆಯಲ್ಲಿ ಆಗಮಿಸಿದ್ದ ಯೋಧ ದೀಕ್ಷಿತ್ ಶೆಟ್ಟಿ ಮಾತನಾಡಿ, ಭಾರತೀಯ ಸೈನ್ಯದ 44 ಯೋಧರು ಉಗ್ರರ ದಾಳಿಯಿಂದ ಸಾವನ್ನಪ್ಪಿದ್ದರು. ಇದೀಗ ಪಾಕ್‌ಗೆ ನಮ್ಮ ಸೇನೆ ತಕ್ಕ ಉತ್ತರ ನೀಡಿದೆ. ಇಂದು ಜನರಲ್ಲಿ ದೇಶ ಪ್ರೇಮ ಮೂಡಿಸಿರುವುದು ಸಂತಸ ತಂದಿದೆ. ತಾನು ರಜೆಯ ಮೇಲೆ ಬಂದಿದ್ದು, ದೇಶ ಸೇವೆಗಾಗಿ ಯಾವುದೇ ಸಂದರ್ಭದಲ್ಲೂ ಕರೆ ಬಂದರೂ ತೆರಳುವುದಾಗಿ ತಿಳಿಸಿದರು. ಬಿಜೆಪಿ ನಗರಾಧ್ಯಕ್ಷ ಮಹೇಶ್ ಜೈನಿ, ಜನಾರ್ಧನ್, ಜಗದೀಶ್, ಅನಿತಾ ಪೂವಯ್ಯಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.