ಅರುವತ್ತೋಕ್ಲು ಕಾಡ್ಲಯ್ಯಪ್ಪ ದೇವಸ್ಥಾನದ ರಸ್ತೆ ಡಾಮರಿಗೆ ಚಾಲನೆ
Team Udayavani, Feb 24, 2017, 12:04 PM IST
ಗೋಣಿಕೊಪ್ಪ: ಅರುವತ್ತೋಕ್ಲು ಕಾಡ್ಲಯ್ಯಪ್ಪ ದೇವಸ್ಥಾನದ ರಸ್ತೆ ಡಾಮರೀಕರಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.
ಶಾಸಕರ ಅನುದಾನದಲ್ಲಿ 5 ಲಕ್ಷ ಮತ್ತು ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಅವರ ಅನುದಾನದಲ್ಲಿ 5 ಲಕ್ಷ ಒಟ್ಟು 10 ಲಕ್ಷಅನುದಾನದಲ್ಲಿ ಡಾಮರೀಕರಣಕ್ಕೆ ಚಾಲನೆ ನೀಡಲಾಗಿದೆ. ದೇವಸ್ಥಾನದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಭಾಗದ ಜನರು ಹಲವು ಬಾರಿ ರಸ್ತೆ ಅಭಿವೃದ್ದಿಗೆ ಮನವಿ ಸಲ್ಲಿಸಿದ್ದರು.
ಈ ಬಾರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ ಮಾರ್ಚ್ ತಿಂಗಳಲ್ಲಿ ನಡೆಯುವ ಹಬ್ಬದ ಸಂಭ್ರಮಕ್ಕೆ ದೇವಸ್ಥಾನದ ಮುಖ್ಯ ರಸ್ತೆಯ ಡಾಮರೀಕರಣ ಮಾಡಲಾಗುವುದು ಎಂದು ಶಾಸಕ ಕೆ.ಜಿ. ಬೋಪಯ್ಯ ಮಾಹಿತಿ ನೀಡಿದರು. ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್, ಅರುವತ್ತೋಕ್ಲು ಸ್ಥಾನೀಯ ಸಮಿತಿ ಅಧ್ಯಕ್ಷ ಮನೆಯಪಂಡ ಬೋಪಣ್ಣ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.