ಭಾಗಮಂಡಲದಲ್ಲಿ ಶ್ರದ್ಧಾಭಕ್ತಿಯಿಂದ ಜರಗಿದ ಪೊಲಿಂಕಾನ ಉತ್ಸವ
Team Udayavani, Jul 25, 2017, 8:05 AM IST
ಮಡಿಕೇರಿ: ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ರವಿವಾರ ಶ್ರದ್ಧಾಭಕ್ತಿಯಿಂದ ಪೊಲಿಂ ಕಾನ ಉತ್ಸವ ವಿಶೇಷ ಪೂಜೆ ಜರಗಿತು.
ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವಾಲಯಗಳಿಗೆ ಪೂಜೆ, ಬಳಿಕ ಬಾಳೆದಿಂಡಿ ನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡ ಲಾಯಿತು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಪೊಲಿಂಕಾನ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.
ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಗಂಡೇಶ್ವರ ದೇವಾಲಯದ ಎಲ್ಲ ದೇವರಿಗೆ ಪೂಜೆ ಪುರಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಅವರು ತಿಳಿಸಿದರು.
ಹಿಂದೆ ಆಷಾಡ ಮಾಸದಲ್ಲಿ ವ್ಯಾಪಕ ಮಳೆಯಾಗು ತ್ತಿತ್ತು. ಇದರಿಂದಾಗಿ ಯಾವುದೇ ಜೀವಕ್ಕೆ ಹಾನಿಯಾಗ ದಂತೆ ಕಾವೇರಿ ಮಾತೆಗೆ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ ಇತ್ತೀಚಿನ ವರ್ಷದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಕಾವೇರಿ ಕಣಿವೆಯಲ್ಲಿ ಹೆಚ್ಚಿನ ಮಳೆಯಾಗಿ ನಾಡಿಗೆ ಸಮೃದ್ದಿ ತರುವಂತಾಗಲಿ ಎಂದು ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಭಾಗಮಂಡಲ ಭಗಂಡೇಶ್ವರ ದೇವಾಯಲಯದ ಪ್ರಧಾನ ಅರ್ಚಕರಾದ ಹರೀಶ್ ಭಟ್ ಅವರು ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಗ್ರಾಮಸ್ಥರಾದ ಕುದುಕುಳಿ ಭರತ್ ಅವರು ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಜ್ರ ವೈಡೂರ್ಯಗಳಿಂದ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯ ಕ್ರಮವಾಗಿದೆ ಎಂದು ಅವರು ತಿಳಿಸಿದರು.
ಜೀವನದಿ ಕಾವೇರಿ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರು, ನಾಡಿನ ಜನರಲ್ಲಿ ಸುಭಿಕ್ಷೆ ತರುವಂತಾಗಬೇಕು ಎಂದು ಪೊಲಿಂಕಾನ ಉತ್ಸವದಲ್ಲಿ ಪ್ರಾರ್ಥಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಪೊಲಿಂಕಾನ ಉತ್ಸವದಲ್ಲಿ ಭಗಂಡೇಶ್ವರ ದೇವಾಲ ಯದ ತಕ್ಕ ಮುಖ್ಯಸ್ಥರಾದ ಬಲ್ಲಡ್ಕ ಅಪ್ಪಾಜಿ, ಪಾರು ಪತ್ತೆದಾರರಾದ ಕೆ.ಪಿ. ಪೊನ್ನಣ್ಣ, ತಲಕಾವೇರಿ- ಭಾಗಮಂಡಲ ದೇವಾಲಯದ ಕಾರ್ಯನಿರ್ವಹಣಾ ಧಿಕಾರಿ ಜಗದೀಶ್ ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.