Sandalwood Couple:ಶುರುವಾಯ್ತು ಭುವನ್-ಹರ್ಷಿಕಾ ಮದುವೆ ಸಂಭ್ರಮ;ಆ. 24ರಂದು ಅದ್ದೂರಿ ವಿವಾಹ
Team Udayavani, Aug 14, 2023, 3:07 PM IST
ಕೊಡಗು: ದೀರ್ಘ ಕಾಲದ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಆಗಸ್ಟ್ 24 ರಂದು ಹಸೆಮಣೆ ಏರಲಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಡಲಿರೋ ಚಂದನವನದ ತಾರೆಯರಾದ ಭುವನ್ ಹಾಗೂ ಹರ್ಷಿಕಾ ಅವರ ಅದ್ದೂರಿ ವಿವಾಹವು ವಿರಾಜಪೇಟೆಯಲ್ಲಿ ನಡೆಯಲಿದೆ. ಕೊಡವ ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆ ನಡೆಯಲಿದ್ದು, ವಿರಾಜಪೇಟೆಯ “ಅಮ್ಮತಿ ಕೊಡವ ಸಮಾಜ”ದಲ್ಲಿ ಸಂಭ್ರಮದ ವಿವಾಹ ಜರುಗಲಿದೆ.
ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ ಜೋಡಿ ಸಿಎಂ ಸಿದ್ದರಾಮಯ್ಯ , ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಇತರ ರಾಜಕೀಯ ಗಣ್ಯರಿಗೆ ಮದುವೆಗೆ ಆಹ್ವಾನಿಸಿದ್ದಾರೆ.
ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್, ದೊಡ್ಡಣ್ಣ, ಶ್ರೀನಾಥ್, ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನು ಪ್ರಭಾಕರ್ ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
ಮಾಧ್ಯಮ ಮಿತ್ರರಿಗೂ ಭುವನ್ -ಹರ್ಷಿಕಾ ಕಡೆಯಿಂದ ವಿಶೇಷ ಆಹ್ವಾನ ನೀಡಲಾಗಿದೆ.
ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದ ಭುವನ್ – ಹರ್ಷಿಕಾ ಮದುವೆಯಲ್ಲಿ ರಾಜಕೀಯ ಗಣ್ಯರು ಹೆಚ್ಚಾಗಿ ಆಗಮಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.