Madikeri ಕ್ಯಾಂಟರ್ ವಾಹನದಡಿಗೆ ಸಿಲುಕಿ ಬೈಕ್ ಸವಾರ ಸಾವು
Team Udayavani, Oct 14, 2023, 7:42 PM IST
ಮಡಿಕೇರಿ: ಕ್ಯಾಂಟರ್ ವಾಹನದಡಿಗೆ ಸಿಲುಕಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರೆಸಾರ್ಟ್‌ವೊಂದರ ಬಳಿ ನಡೆದಿದೆ.
ಮೂಲತಃ ಕೆ.ಆರ್. ನಗರದ ಬೇರ್ಯ ಗ್ರಾಮದ ನಿವಾಸಿ ಬೈರವ (28) ಮೃತರು. ಮಡಿಕೇರಿಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಕಾರೊಂದರ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ವಾಹನದ ಚಕ್ರ ಬೈಕ್ ಸವಾರನ ತಲೆ ಮೇಲೆ ಹರಿದು ಈ ಸಾವು ಸಂಭವಿಸಿದೆ.
ಬೈರವ ತಮ್ಮ ಬೈಕ್ ನಲ್ಲಿ ಮಡಿಕೇರಿಯಿಂದ ಕೆ.ಆರ್ ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.