ಬಿಜೆಪಿ ಮುಖಂಡನ ಹತ್ಯೆಗೆ ಖಂಡನೆ: ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ   


Team Udayavani, Mar 18, 2017, 2:26 PM IST

Z-BJP-PROTEST.jpg

ಮಡಿಕೇರಿ: ಆನೇಕಲ್‌ ಪುರಸಭೆಯ ಸದಸ್ಯರಾದ ಬಿಜೆಪಿ ಮುಖಂಡ ಶ್ರೀನಿವಾಸ್‌ ಪ್ರಸಾದ್‌ ಅವರ ಹತ್ಯಾ ಪ್ರಕರಣ ರಾಜಕೀಯ ಪ್ರೇರಿತ ದುಷ್ಕೃತ್ಯವಾಗಿದ್ದು, ಪ್ರಕರಣದ ಸತ್ಯಾಸತ್ಯತೆಯ ಕುರಿತು ಶೀಘ್ರ ತನಿಖೆ ನಡೆಸಿ ಹಂತಕರನ್ನು ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.

ಬಿಜೆಪಿ ನೂತನ ಅಧ್ಯಕ್ಷ ಬಿ.ಬಿ. ಭಾರತೀಶ್‌ ನೇತೃತ್ವದಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು ಮತ್ತು ಕಾರ್ಯಕರ್ತರು ಗುರುವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಎದುರು ಸಮಾವೇಶಗೊಂಡು ರಾಜ್ಯದ ಕಾಂಗ್ರೆಸ್‌ ಸರಕಾರದ ವಿರುದ್ಧ ಘೋಷಣೆೆಗಳನ್ನು ಕೂಗಿ, ಹತ್ಯಾ ಪ್ರಕರಣದ ತನಿಖೆಗೆ ಆಗ್ರಹಿಸಿದರು.

ಈ ಸಂದರ್ಭ ಬಿ.ಬಿ. ಭಾರತೀಶ್‌ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗೆ ಪ್ರವೀಣ್‌ ಪೂಜಾರಿಯಿಂದ ಹಿಡಿದು ಈಗಿನ ಶ್ರೀನಿವಾಸ್‌ ಪ್ರಸಾದ್‌ ವರೆ‌ಗೆ ಹಿಂದೂಪರ ಸಂಘ‌ಟನೆಗಳ ಹಲವು ಪ್ರಮುಖರು ಹತ್ಯೆಗೆ ಒಳಗಾಗಿದ್ದಾರೆ. ಇದಕ್ಕೆ ರಾಜ್ಯದ ಆಡಳಿತ ವ್ಯವಸ್ಥೆ, ಕಾನೂನು ವ್ಯವಸ್ಥೆ ಕುಸಿದಿರುವುದೆ ಪ್ರಮುಖ ಕಾರಣವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಶ್ರೀನಿವಾಸ್‌ ಪ್ರಸಾದ್‌ ಹತ್ಯೆಯ ಹಿಂದೆ ಆಡಳಿತ ಪಕ್ಷದ ಕೆಲವು ಶಾಸಕರ ಕೈವಾಡವಿದೆ ಎಂದು ಆರೋಪಿಸಿದ ಬಿ.ಬಿ. ಭಾರತೀಶ್‌, ಇಂತಹ ಹತ್ಯಾ ಪ್ರಕರಣಗಳಿಗೆ ಗೃಹ ಇಲಾಖೆಯ ವೈಫ‌ಲ್ಯವೆ ಪ್ರಮುಖ ಕಾರಣವಾಗಿದೆ ಎಂದರು.

ಪ್ರತಿಭಟನೆಯ ಬಳಿಕ ಜಿಲ್ಲಾಡಳಿತಕ್ಕೆ ಬಿಜೆಪಿ ಪ್ರಮುಖರು ಮನವಿ ಸಲ್ಲಿಸಿ, ಶ್ರೀನಿವಾಸ್‌ ಪ್ರಸಾದ್‌ ಅವರ ಹತ್ಯೆ ರಾಜಕೀಯ ಪ್ರೇರಿತವೆನ್ನುವ ಅನುಮಾನಗಳು ಜನವಲಯದಲ್ಲಿ ಮೂಡಿದೆ. ಈ ಬಗ್ಗೆ ಶೀಘ್ರ ತನಿಖೆೆ ನಡೆಸಿ ಹಂತಕರನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಶಾಂತೆಯಂಡ ರವಿ ಕುಶಾಲಪ್ಪ, ಎಂ.ಬಿ. ದೇವಯ್ಯ, ಎಸ್‌.ಎನ್‌. ರಾಜಾರಾವ್‌, ತಳೂರು ಕಿಶೋರ್‌ ಕುಮಾರ್‌, ಮಹಿಳಾ ಘಟಕದ ಅಧ್ಯಕ್ಷರಾದ ಯಮುನಾ ಚಂಗಪ್ಪ, ಸೋಮವಾರಪೇಟೆ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷರಾದ ನಳಿನಿ ಗಣೇಶ್‌, ಸುಮಾ ಸುದೀಪ್‌, ಕಾಂತಿ ಸತೀಶ್‌, ಕನ್ನಂಡ ಸಂಪತ್‌, ಜಿ.ಎಲ್‌. ನಾಗರಾಜ್‌, ರಾಬಿನ್‌ ದೇವಯ್ಯ, ನಾಪಂಡ ಕಾಳಪ್ಪ, ಸಜಿಲ್‌ ಕೃಷ್ಣನ್‌, ಕೊಮಾರಪ್ಪ, ಜೀವನ್‌, ಸತೀಶ್‌ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.