ಪ್ರತಿಭಟನೆ ಸ್ಥಳಕ್ಕೆ ಬೋಪಯ್ಯ ಭೇಟಿ: ಭರವಸೆ
Team Udayavani, Feb 15, 2020, 7:25 AM IST
ಮಡಿಕೇರಿ: ಮಳೆಹಾನಿ ಸಂತ್ರಸ್ತರು ಸಿದ್ದಾಪುರದಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿದರು. ನಿವೇಶನಗಳನ್ನು ಹಂಚಿಕೆ ಮಾಡಲು ಅಗತ್ಯವಿರುವಷ್ಟು ಸರ್ಕಾರಿ ಜಾಗ ಲಭ್ಯವಿರದೇ ಇರುವುದರಿಂದ ಖಾಸಗಿ ಜಮೀನು ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಕೆಲವು ಭಾಗಗಳಲ್ಲಿ ಸರಕಾರಿ ಭೂಮಿ ಒತ್ತುವರಿಯಾಗಿದ್ದು, ಇದಕ್ಕೆ ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸರಕಾರಿ ಭೂಮಿ ಅಲಭ್ಯವಾಗಿರುವುದರಿಂದ ಖಾಸಗಿ ಜಾಗವನ್ನು ಖರೀದಿಸುವ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.
ಅವರೆಗುಂದ ಅಸ್ತಾನ ಹಾಡಿ ವ್ಯಾಪ್ತಿ ಹಾಗೂ ಕರಡಿಗೋಡಿನಲ್ಲಿ ಖಾಸಗಿ ಜಾಗ ಮಾರಾಟಕ್ಕೆ ಇರುವುದಾಗಿ ಕೆಲವರು ತಿಳಿಸಿದ್ದಾರೆ. ಈ ಎರಡು ಜಾಗದ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿ ಜವರೇಗೌಡರಿಗೆ ಶಾಸಕರು ಸೂಚನೆ ನೀಡಿದರು.
ಬೇಡಿಕೆಯನ್ನು ಈಡೇರಿಸಲು ತಕ್ಷಣಕ್ಕೆ ಸಾಧ್ಯವಿಲ್ಲದೆ ಇರುವುದರಿಂದ ಸ್ವಲ್ಪ ಕಾಲಾವಕಾಶ ನೀಡಬೇಕೆಂದು ತಿಳಿಸಿದ ಕೆ.ಜಿ.ಬೋಪಯ್ಯ ಪ್ರತಿಭಟನೆಯನ್ನು ಕೈ ಬಿಡುವಂತೆ ಮನವಿ ಮಾಡಿದರು.
ಉಪವಿಭಾಗಾಧಿಕಾರಿ ಜವರೇಗೌಡ ಅವರು ಮಾತನಾಡಿ ಪ್ರವಾಹ ಸಂತ್ರಸ್ತರ ಪೈಕಿ ನದಿ ತೀರದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿ ವಾಸವಾಗಿದ್ದ ಕುಟುಂಬಗಳಿಗೂ ಬಾಡಿಗೆ ಹಣವನ್ನು ನೀಡಲಾಗಿದೆ ಎಂದರು. ಪ್ರವಾಹ ಸಂತ್ರಸ್ತರಿಗೆ ಸೂರು ಕಲ್ಪಿಸುವಂತೆ ಆಗ್ರಹಿಸಿ ಸಿದ್ದಾಪುರ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ 4 ದಿನ ಪೂರೈಸಿದೆ. ನದಿ ತೀರದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿ, ಪ್ರವಾಹದಲ್ಲಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಬಾಡಿಗೆ ಹಣ ನೀಡಲು ಸಾಧ್ಯವಿಲ್ಲ ಎಂದು ಈ ಹಿಂದೆ ಜಿಲ್ಲಾಡಳಿತ ಹೇಳಿತ್ತು. ಆದರೆ ಅನಧಿಕೃತ ಸೇರಿದಂತೆ ಮನೆ ಕಳೆದುಕೊಂಡ ಪ್ರತಿಯೊಬ್ಬರಿಗೂ ಬಾಡಿಗೆ ಹಣವನ್ನು ನೀಡಬೇಕೆಂದು ಹೋರಾಟ ಸಮಿತಿಯ ಬೇಡಿಕೆಯಾಗಿತ್ತು. ಅನಧಿಕೃತವಾಗಿ ಮನೆ ಕಟ್ಟಿದ್ದ 228 ಕುಟುಂಬಗಳ ಖಾತೆಗಳಿಗೆ ತಿಂಗಳಿಗೆ ತಲಾ ರೂ.5 ಸಾವಿರದಂತೆ ಐದು ತಿಂಗಳಿಗೆ ರೂ.25 ಸಾವಿರವನ್ನು ಪಾವತಿ ಮಾಡಲಾಗಿದೆ ಎಂದರು.
ತಹಶೀಲ್ದಾರ್ ಮಹೇಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಜತೆಗಿದ್ದರು.
ಮುಂದುವರಿದ ಧರಣಿ
ಬೋಪಯ್ಯ ಅವರು ಭರವಸೆ ನೀಡಿದ ನಂತರವೂ ಸಮಿತಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿದೆ. ಈ ಹಿಂದೆ ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿರುವುದರಿಂದ ಪರಿಹಾರ ಸಿಗುವವರೆಗೆ ಹೋರಾಟ ನಿಲ್ಲದು ಎಂದು ಪ್ರತಿಭಟ®ನರರು ಘೋಷಿಸಿದರು. ಸಮಿತಿಯ ಯಮುನಾ, ರೆಜಿತ್ ಕುಮಾರ್ ಗುಹ್ಯ, ಬೈಜು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.