ಮತ್ತೆ ಬಿರುಕು ಬಿಟ್ಟ ಬ್ರಹ್ಮಗಿರಿ ಬೆಟ್ಟ
Team Udayavani, Sep 8, 2019, 5:40 AM IST
ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪಶ್ಚಿಮ ಘಟ್ಟ ವಲಯದ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಆತಂಕಕಾರಿ ಬಿರುಕು ಕಾಣಿಸಿಕೊಂಡಿದೆ.
ಆಗಸ್ಟ್ ಎರಡನೇ ವಾರ ಸುರಿದ ಧಾರಾಕಾರ ಮಳೆಯ ಸಂದರ್ಭ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆ.18ರಂದು ಸ್ಥಳಕ್ಕೆ ಭೂವಿಜ್ಞಾನಿಗಳು ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ವಿಜ್ಞಾನಿಗಳ ವರದಿ ಜಿಲ್ಲಾಡಳಿತದ ಕೈಸೇರುವ ಮೊದಲೇ ಬಿರುಕು ಮತ್ತಷ್ಟು ಆಳವಾಗಿದೆಯಲ್ಲದೆ ಇನ್ನಷ್ಟು ವಿಸ್ತರಿಸಿದೆ.
ಬೆಟ್ಟದಲ್ಲಿ ಸಾರ್ವಜನಿಕರು ಪ್ರವೇಶಿಸದ ಭಾಗಕ್ಕೆ ಶನಿವಾರ ಅರಣ್ಯಾಧಿಕಾರಿಗಳು ಭೇಟಿ ನೀಡಿದ ಸಂದರ್ಭ ಆತಂಕಕಾರಿ ಬಿರುಕು ಪತ್ತೆಯಾಗಿದೆ. ಇದರಿಂದ ಅಕ್ಕಪಕ್ಕದ ಗ್ರಾಮಗಳಲ್ಲಿ ಆತಂಕ ಉಂಟಾಗಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಕಳೆದ ತಿಂಗಳು ಭಾಗಮಂಡಲದ ಕೋರಂಗಾಲದಲ್ಲಿ ಭೂಕುಸಿತ ಉಂಟಾಗಿ ಐವರು ಅದರಡಿಯಲ್ಲಿ ಸಿಲುಕಿ ಮೃತಪಟ್ಟ ದುರ್ಘಟನೆಯ ದುಃಖ ಆರುವ ಮೊದಲೇ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಭಯ ಮೂಡಿಸಿದೆ.
ಮಳೆ ಕಡಿಮೆ
ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿದಿದೆ. ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲೂ ಹದವಾಗಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.