ಬಿಸಿನೆಸ್ ಸೆಂಟರ್ ಆದ ನಗರಸಭೆ ಇಂಟರ್ಲಾಕ್ಗಾಗಿ ಕೋಳಿ ಜಗಳ
Team Udayavani, Mar 18, 2017, 2:34 PM IST
ಮಡಿಕೇರಿ: ನಗರಸಭೆ ಎನ್ನುವುದು ಜನರ ಸಮಸ್ಯೆಗಳಿಗೆ ಸ್ಪಂದಿಸುವುದಕ್ಕಾಗಿ ಇರುವುದೇ ಹೊರತು ಇದನ್ನು ಬಿಸಿನೆಸ್ ಸೆಂಟರ್ ಮಾಡುವುದು ಬೇಡ. ಇಲ್ಲಿ ಜನರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು, ಆದರೆ ಇಂಟರ್ಲಾಕ್ ಗೊಂದಲ, ನಗರಸಭೆಯ ಕೋಟಿಗಟ್ಟಲೆ ಆಸ್ತಿ ಎಂದೆಲ್ಲ ಚರ್ಚೆಯಾಗುತ್ತಿದೆ. ನಗರಸಭೆಯನ್ನು ಬಿಸಿನೆಸ್ ಸೆಂಟರ್ ಮಾಡುವುದು ಬೇಡವೆಂದು ಹಿರಿಯ ಸದಸ್ಯ ಕೆ.ಎಂ. ಗಣೇಶ್ ಸದಸ್ಯರಿಗೆ ಬುದ್ದಿ ಮಾತು ಹೇಳಿದ ಪ್ರಸಂಗ ನಡೆಯಿತು.
ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸುರಭಿ ಹೋಟೆಲ್ ಬಳಿ ಹಾಕಲಾಗಿದ್ದ ಇಂಟರ್ ಲಾಕ್ನ್ನು ನಗರಸಭಾ ಅಧ್ಯಕ್ಷರ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ ಎನ್ನುವ ಕ್ಷುಲ್ಲಕ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಯಿತಲ್ಲದೆ, ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಹಾಗೂ ಉಪಾಧ್ಯಕ್ಷರಾದ ಟಿ.ಎಸ್. ಪ್ರಕಾಶ್ ಅವರುಗಳ ನಡುವೆ ವಾಗ್ವಾದ ನಡೆಯಿತು.
ಸಭೆ ಆರೋಗ್ಯಕರ ಚರ್ಚೆಯ ಮೂಲಕ ಮುಂದುವರಿಯುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಟಿ.ಎಸ್. ಪ್ರಕಾಶ್ ಸುರಭಿ ಹೋಟೆಲ್ನ ಎದುರು ಅಳವಡಿಸಲಾಗಿದ್ದ ಇಂಟರ್ಲಾಕ್ನ್ನು ತೆರವುಗೊಳಿಸಿದ ಬಗ್ಗೆ ಸಹನೆ ಕಳೆದುಕೊಂಡು ಮಾತನಾಡಿದರು. ಅಧ್ಯಕ್ಷರು ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ನ್ಯಾಯ ಒದಗಿಸುತ್ತಿದ್ದಾರೆ ಎಂದು ಟೀಕಿಸಿದರು. ಇತರ ಅಂಗಡಿ ಮಳಿಗೆಗಳ ಎದುರು ಅಳವಡಿಸಲಾಗಿರುವ ಇಂಟರ್ಲಾಕ್ಗಳನ್ನು ಕೂಡ ತೆರವುಗೊಳಿಸಿ ಎಂದು ಒತ್ತಾಯಿಸಿದರು. ಈ ಸಂದರ್ಭ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.