ಗ್ರಾಮೀಣ ಕ್ರೀಡೆಗಳ ಉಳಿಸಿ ಬೆಳೆಸಲು ಗಣ್ಯರ ಕರೆ


Team Udayavani, Apr 26, 2019, 6:30 AM IST

grameena-kreede

ಮಡಿಕೇರಿ: ಯರವ ಸಮಾಜದ ಆಶ್ರಯದಲ್ಲಿ ಗಿರಿಜನ ಸಮೂಹಕ್ಕೆ ನಡೆಸಿಕೊಂಡು ಬರುತ್ತಿರುವ, ಇಡೆಮಲೆಲಾತ್ಲೆàರ ಕುಟುಂಬದ ಆತಿಥ್ಯದ 8ನೇ ವರ್ಷದ ಯರವ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು. ವೀರಾಜಪೇಟೆ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಯರವ ಸಮುದಾಯದ ಯುವಕ ಯುವತಿಯರು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗಮನ ಸೆಳೆದರು.ತಿತಿಮತಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಐದು ದಿನಗಳ ಕಾಲ ನಡೆಯುವ ಕ್ರೀಡೋತ್ಸವವನ್ನು ಸಮಾಜ ಬಾಂಧ‌ವರು ಸಾಂಪ್ರದಾಯಿಕವಾಗಿ ಗುರು ಹಿರಿಯರಿಗೆ ನಮಿಸಿ, ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಕ್ರಿಕೆಟ್‌ ಹಬ್ಬದ ಸವಿ ನೆನಪಿಗಾಗಿ ಮೈದಾನದ ಬದಿಯಲ್ಲಿ ಅತಿಥಿಗಳು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆೆಯ ಮಹತ್ವವನ್ನು ಸಾರಿದ್ದು ವಿಶೇಷ. ಉದ್ಘಾಟನಾ ಸಮಾರಂಭವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ‌ ಕಾಡ್ಯಮಾಡ ಮನುಸೋಮಯ್ಯ, ಸಮುದಾಯ ಬಾಂಧವರನ್ನು ಒಂದೆಡೆ ಸೇರಿಸಲು ಕ್ರೀಡಾಕೂಟಗಳು ಸಹಕಾರಿಯಾಗಿದೆ. ಜಿಲ್ಲೆಯ ವಿವಿಧ ಭಾಗದಲ್ಲಿ ನೆಲೆಸಿರುವ ಯರವ ಸಮುದಾಯ ಬಾಂಧವರನ್ನು ಒಟ್ಟಾಗಿ ಸೇರಿಸಿ ತಮ್ಮ ಹಕ್ಕುಗಳನ್ನು ಪಡೆಯುವಂತೆ ಕರೆ ನೀಡಿದರು. ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ ಬ್ಯಾಟ್‌ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಕ್ರೀಡೆಗಳು ನಶಿಸುತ್ತಿದ್ದು, ಇವುಗಳನ್ನು ಉಳಿಸುವ ಕೆಲಸವನ್ನು ಸಮಾಜ ಬಾಂಧ‌ವರು ಮಾಡಬೇಕು.ಮೂಲ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕ್ರೀಡೆ ಸಹಕಾರಿಯಾಗಿದೆ ಎಂದರು. ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷರಾದ ಶರತ್‌ ಕಾಂತ್‌, ದಾನಿಗಳಾದ ಉಂಬಾಯಿ ಉಪಸ್ಥಿತರಿದ್ದರು.ಯರವ ಸಮಾಜದ ಕಾರ್ಯದರ್ಶಿ ಸಂಜೀವ ಸ್ವಾಗತಿಸಿ, ಸಂಚಾಲಕ ಸಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು. ನಿತಿನ್‌ ವಂದಿಸಿದರು.

ಕ್ರೀಡೋತ್ಸವದ ಅಂಗವಾಗಿ ಆದಿವಾಸಿ ಮಹಿಳೆಯರಿಗೆ, ಪುರುಷರಿಗೆ ಏರ್ಪಡಿಸಿದ್ದ ಹಗ್ಗ -ಜಗ್ಗಾಟ, ಬಿಂದಿಗೆಯಲ್ಲಿ ನೀರು ತರುವ ಸ್ಪರ್ಧೆ ಗೋಣಿಚೀಲ ನಡಿಗೆ ಸ್ಪರ್ಧೆ ನೋಡುಗರನ್ನು ರಂಜಿಸಿತು.

ಅನುದಾನಕ್ಕೆ ಆಗ್ರಹ
ಯರವ ಸಮಾಜದ ಅಧ್ಯಕ್ಷ‌ ಶಾಂತಕುಮಾರ್‌ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಇನ್ನು ಮುಂದಿನ ವರ್ಷದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳುವ ತಂಡಗಳು ತಮ್ಮ ಮನೆತನದ ಹೆಸರಿನಲ್ಲಿಯೇ ನೋಂದಾವಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರಲ್ಲದೆ, ಸರ್ಕಾರ ಯರವ ಸಮುದಾಯವನ್ನು ಗುರುತಿಸಿ ಕ್ರೀಡೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ದರು. ಹೆಗ್ಗಡೆ ಸಮಾಜದ ಉಪಾಧ್ಯಕ್ಷ‌ ಕೊರಕುಟ್ಟಿàರ ಸರ ಚಂಗಪ್ಪ ಮಾತನಾಡಿ, ಅಳಿವಿನ ಅಂಚಿನ ಲ್ಲಿರುವ ಯರವ ಸಮುದಾಯವನ್ನು ರಕ್ಷಿಸುವ ಜವಾಬ್ದಾರಿ ಈ ನಾಡಿನ ಪ್ರತಿಯೊಬ್ಬರ ಕರ್ತವ್ಯವಿದ್ಯಾಭ್ಯಾಸಕ್ಕೆ ಸಮಾಜ ಬಾಂಧವರು ಒತ್ತು ನೀಡಬೇಕೆಂದು ಕರೆ ನೀಡಿದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.