ಸಾಮಾಜಿಕ ಜಾಲತಾಣ ವ್ಯಾಮೋಹ ಬಿಡಲು ವಿದ್ಯಾರ್ಥಿಗಳಿಗೆ ಕರೆ
Team Udayavani, Jul 13, 2019, 5:28 AM IST
ಮಡಿಕೇರಿ: ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೇಲಿನ ಒಲವನ್ನು ಬಿಟ್ಟು ಶೈಕ್ಷಣಿಕ ಗುರಿ ಸಾಧಿಸಲು ಪುಸ್ತಕದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಶಿಸ್ತುಬದ್ಧ ಜೀವನ ನಡೆಸಬೇಕೆಂದು ಎನ್‌ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ವಿ.ಎಂ.ನಾಯಕ್ ಕರೆ ನೀಡಿದ್ದಾರೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಎನ್‌ಸಿಸಿ ಸಹಯೋಗದಲ್ಲಿ ಕಾಲೇಜ್‌ನಲ್ಲಿ ನಡೆದ “”ಎನ್‌ಸಿಸಿ ಸೇರ್ಪಡೆ” ದಿಕ್ಸೂಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎನ್‌ಸಿಸಿ ತನ್ನದೇ ಆದ ಮೌಲ್ಯ ಹಾಗೂ ಮಹತ್ವವನ್ನು ಹೊಂದಿದ್ದು, ಇದರಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಇತರರಿಗಿಂತ ಭಿನ್ನವಾಗಿರುತ್ತಾರೆ. ಕೇವಲ ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಶಿಸ್ತನ್ನು ಅಳವಡಿಸಿಕೊಳ್ಳದೆ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಎನ್‌ಸಿಸಿ ಬೆಳೆದು ಬಂದ ಹಾದಿ ಹಾಗೂ ಅದರ ಕಾರ್ಯವೈಖರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಕರ್ನಲ್ ನಾಯಕ್, ಎನ್‌ಸಿಸಿ ಯಲ್ಲಿ ವಿಫುಲ ಅವಕಾಶಗಳಿದ್ದು, ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್‌ನ ಪ್ರಾಂಶುಪಾಲ ಡಾ.ಟಿ.ಡಿ.ತಿಮ್ಮಯ್ಯ ಅವರು ಎನ್‌ಸಿಸಿ ವಿದ್ಯಾರ್ಥಿಗಳು ತಮ್ಮ ಶಿಸ್ತುಬದ್ಧ ಜೀವನ ಶೈಲಿಯ ಮೂಲಕವೇ ಇತರರಿಗೆ ಮಾದರಿಯಾಗಬೇಕೆಂದರು.
ಸಾಮಾಜಿಕ ಕಳಕಳಿ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವ ಎನ್‌ಸಿಸಿ, ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯವನ್ನು ತಿಳಿಸಿಕೊಡುವಲ್ಲಿ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎನ್‌ಸಿಸಿ ಅಧಿಕಾರಿ ಮೇಜರ್ ಡಾ.ಬಿ.ರಾಘವ ಮಾತನಾಡಿ, ಎನ್‌ಸಿಸಿ ಗೆ ತನ್ನದೇ ಆದ ಇತಿಹಾಸವಿದ್ದು, ಬಹಳಷ್ಟು ವಿದ್ಯಾರ್ಥಿಗಳು ಇದರಲ್ಲಿ ತೊಡಗಿಸಿಕೊಂಡು ಶಿಸ್ತು ಮತ್ತು ಸಂಯಮವನ್ನು ಬೆಳೆಸಿಕೊಂಡಿದ್ದಾರೆ.
ನಾಯಕತ್ವದ ಗುಣವನ್ನು ನೀಡುವ ಶಕ್ತಿಯನ್ನು ಹೊಂದಿರುವ ಎನ್‌ಸಿಸಿ ಧೈರ್ಯ, ಏಕತೆ ಮತ್ತು ಶಿಸ್ತುಬದ್ಧ ಜೀವನಕ್ಕೆ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.