ಚಾವಡಿಮನೆ ಕುಟುಂಬ ಸಮಾಜಕ್ಕೆ ಮಾದರಿ: ರಾಜಪ್ಪ

Team Udayavani, Feb 27, 2017, 4:14 PM IST

25spt01.jpg

ಸೋಮವಾರಪೇಟೆ: ಕೂಡು ಕುಟುಂಬಕ್ಕೆ ಮತ್ತೂಂದು ಹೆಸರು ಎನ್ನಬಹುದಾದ ಇಲ್ಲಿನ ಚಾವಡಿಮನೆ ಕುಟುಂಬದ ಸದಸ್ಯರು ಉನ್ನತ ಶಿಕ್ಷಣ ಪಡೆದು, ಉನ್ನತ ಸ್ಥಾನ ಅಲಂಕರಿಸುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಪುಷ್ಪಗಿರಿ ಕೃಷಿ ಒಕ್ಕೂಟದ ಅಧ್ಯಕ್ಷ ಎಂ.ಬಿ. ರಾಜಪ್ಪ ಬಣ್ಣಿಸಿದರು. 

ಸ್ಥಳೀಯ ಸಫಾಲಿ ಸಭಾಂಗಣದಲ್ಲಿ ತೋಳೂರುಶೆಟ್ಟಳ್ಳಿಯ ಪ್ರತಿಷ್ಠಿತ ಒಕ್ಕಲಿಗರ ಕುಟುಂಬಗಳಲ್ಲೊಂದಾದ ಚಾವಡಿಮನೆ ಕುಟುಂಬದ ವತಿಯಿಂದ ಕುಟುಂಬದ ಸದಸ್ಯ ಟಿ.ಕೆ. ಮಾಚಯ್ಯ ನವರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಆಯೋ ಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು, ಮಾತನಾಡಿದರು.ಸುಮಾರು ಆರು ದಶಕಗಳ ಹಿಂದೆ ಕುಗ್ರಾಮವಾಗಿದ್ದ ತೋಳೂರು ಶೆಟ್ಟಳ್ಳಿಯಲ್ಲಿ ನೆಲೆಸಿದ್ದ   ಅಲ್ಪ ಪ್ರಮಾಣದ ವಿದ್ಯಾಭ್ಯಾಸ  ಪಡೆದಿದ್ದ ಸಿ.ಎಸ್‌. ಕಾಳಪ್ಪ ಹಾಗೂ ಚಿನ್ನಮ್ಮ ದಂಪತಿಗಳಿಗೆ ಏಳು ಮಂದಿ ಪುತ್ರರೂ ಹಾಗೂ ಈರ್ವರು ಪುತ್ರಿಯರು. ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶವಿಲ್ಲದಿದ್ದರೂ ತಮ್ಮ 9 ಮಂದಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಸುಸಂಸ್ಕೃತ ಜೀವನವನ್ನು ಕಲಿಸಿದ ಪರಿಣಾಮವಾಗಿ ಇಂದು ಅವರುಗಳು ಸೇವೆಯಲ್ಲೂ ತಮ್ಮ ಛಾಪನ್ನು ಮೂಡಿಸಿ, ಐಕ್ಯಮತ್ಯದ ಕುಟುಂಬವಾಗಿ ಹೊರಹೊಮ್ಮಿದೆ ಎಂದರು.

ಕುಟುಂಬದ ಕಿರಿಯ ಸದಸ್ಯೆ 10ನೇ ತರಗತಿ ವಿದ್ಯಾರ್ಥಿನಿ ಕೃಪಾ ರವಿಕುಮಾರ್‌   ರಚಿಸಿದ    20 ಕವನಗಳನ್ನೊಳಗೊಂಡ “ಹೊಂಗನಸು’ ಎಂಬ ಕವನ ಸಂಕಲನದ ಪುಸ್ತಕವನ್ನು ಅನಾವರಣ ಮಾಡಿದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಸ್‌. ಮಹೇಶ್‌ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲೇ ಎಂಬ ನಾಣ್ಣುಡಿಯಂತೆ ಕೃಪಾ ರಚಿಸಿರುವ ಕವನ ಅತ್ಯದ್ಭುತವಾಗಿದೆ. ತನ್ನ ಹುಟ್ಟೂರಿನಿಂದ ಹಿಡಿದು ದಿನನಿತ್ಯದ ಜೀವನದ ನೋವು ನಲಿವು ಸೇರಿದಂತೆ  ಪ್ರಕೃತಿ, ಭೂಮಿ  ಎಲ್ಲವನ್ನು ಕ್ರೋಡೀಕರಿಸಿ ಪುಸ್ತಕ ರೂಪದಲ್ಲಿ ಹೊರ ತರುವ ಮೂಲಕ ಚಾವಡಿ ಕುಟುಂಬದ ಗೌರವವನ್ನು ಹೆಚ್ಚಿಸಿದ್ದಾಳೆ. ಆಕೆಯ ಹೆಸರು ವಿಶ್ವವ್ಯಾಪಿ ಪಸರಿಸುವಂತಾಗಲಿ ಎಂದು ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಟುಂಬದ ಹಿರಿಯ ಸದಸ್ಯ ಟಿ.ಕೆ. ಸುಬ್ಬಯ್ಯ ಮಾತನಾಡಿ, ನಮ್ಮ ಸಹೋದರರಲ್ಲಿ ಸೌಮ್ಯ ನಡವಳಿಕೆಯಿಂದ ಕೂಡಿದವನು ಮಾಚಯ್ಯ. 1980ರಲ್ಲಿ ವಾಣಿಜ್ಯ ಪದವಿಯನ್ನು ಮುಗಿಸುತ್ತಿದ್ದಂತೆ ಸೋಮವಾರಪೇಟೆ ಕಂದಾಯ ಇಲಾಖೆಯಲ್ಲಿ, ನಂತರ ಚೌಡ್ಲು ವಿಎಸ್‌ಎಸ್‌ಎನ್‌, ಗೌಡಳ್ಳಿ ಸಹಕಾರ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ, ಅನಂತರದಲ್ಲಿ ಕ.ರಾ. ನಿರ್ಮಾಣ ನಿಗಮದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿ, ಇದೀಗ ನಿವೃತ್ತಿಯಾಗಿದ್ದಾನೆ.  ಕಚೇರಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಸಹೋದರ ಇಂದಿನಿಂದ ಕೃಷಿಕರಾಗಿ ಸೇವೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದರು.

ಚಿಕ್ಕಮಗಳೂರು   ಕೊಪ್ಪದ ಪಿಕಾರ್ಡ್‌ ಬ್ಯಾಂಕಿನ ಕಾರ್ಯದರ್ಶಿ ಎಂ.ಆರ್‌. ಕಿರಣ್‌ ಹೆಗ್ಗಡೆ, ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಎಸ್‌. ರಾಮಕೃಷ್ಣ, ನಗರಳ್ಳಿ ಸುಗ್ಗಿ ಸಮಿತಿ ಅಧ್ಯಕ್ಷ ಕೆ.ಟಿ. ಜೋಯಪ್ಪ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಸನ್ನಕುಮಾರ್‌, ಜಿಲ್ಲಾ ಶಿಕ್ಷಕರ ಸಂಘದ  ಮಾಜಿ ಅಧ್ಯಕ್ಷ ಯೋಗೇಶ್‌, ಶಿಕ್ಷಕರ ಸಂಘದ ಪದಾಧಿಕಾರಿ ಟಿ.ಕೆ. ಶಿವಕುಮಾರ್‌, ಛಾವಡಿಮನೆ ವಸಂತ್‌ಕುಮಾರ್‌ ಮಾತನಾಡಿದರು.ಚಾವಡಿ ಕುಟುಂಬದ ವತಿಯಿಂದ ಟಿ.ಕೆ. ಮಾಚಯ್ಯ-ಇಂದಿರಾ ದಂಪತಿ ಯನ್ನು ಈ ಸಮಾರಂಭದಲ್ಲಿ ಸಮ್ಮಾನಿಸಲಾಯಿತು. 
 
ಟಾಪ್ ನ್ಯೂಸ್

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.