ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಆಯುಧ ಪೂಜೆ
Team Udayavani, Oct 10, 2019, 5:33 AM IST
ಮಡಿಕೇರಿ: ನವರಾತ್ರಿ ಉತ್ಸವದ ಒಂಭತ್ತನೇ ದಿನದ ಆಯುಧಪೂಜಾ ಉತ್ಸವವನ್ನು ಕೊಡಗು ಜಿಲ್ಲೆಯಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಜಾತಿ ಧರ್ಮಗಳ ಭೇದವಿಲ್ಲದೆ ಅಲಂಕೃತ ವಾಹನಗಳಿಗೆ ಪೂಜಾ ಕಾರ್ಯಗಳು ನೆರವೇರಿದವು. ಜಿಲ್ಲಾ ಕೇಂದ್ರ ಮಡಿಕೇರಿ, ದಕ್ಷಿಣ ಕೊಡಗಿನ ಗೋಣಿಕೊಪ್ಪಲು, ಸೋಮವಾರಪೇಟೆ, ಸುಂಟಿಕೊಪ್ಪಗಳಲ್ಲಿ ಆಯುಧ ಪೂಜೆಯ ಪ್ರಯುಕ್ತ ವಾಹನ ಅಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದರೆ, ದೇಗುಲಗಳಲ್ಲಿ ಭಕ್ತಾದಿಗಳು ವಿಶೇಷ ಪೂಜೆಗಳನ್ನು ಸಲ್ಲಿಸಿ ಪುನೀತರಾದರು. ಗಾಂಧಿ ಮೈದಾನದಲ್ಲಿ ದ್ವಿಚಕ್ರ ಸೇರಿದಂತೆ ಭಾರೀ ವಾಹನಗಳ ಅಲಂಕಾರ ಸ್ಪರ್ಧೆ ಗಮನ ಸಳೆೆಯಿತು. ದಸರಾ ಮಂಟಪಗಳನ್ನು ಮೀರಿಸುವಂತೆ ಅಲಂಕೃತಗೊಂಡ ವಾಹನಗಳು ನೋಡುಗರ ಗಮನ ಸೆಳೆದವು.
ವಿವಿಧ ವಾಹನಗಳಲ್ಲಿ ಕಾವೇರಿ, ಗಣಪತಿ ಸೇರಿದಂತೆ ವಿವಿಧ ಮೂರ್ತಿಗಳನ್ನು ಕುಳ್ಳಿರಿಸಿ, ವಿದ್ಯುದ್ದೀಪಗಳಿಂದ ಅಲಂಕರಿಸಿ ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದ್ದುದು ವಿಶೇಷ.
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿತ ಆಯುಧ ಪೂಜಾ ಸಮಾರಂಭಕ್ಕೆ ಮಡಿಕೇರಿ ಡಿವೈಎಸ್‌ಪಿ ದಿನೇಶ್ ಕುಮಾರ್ ಚಾಲನೆ ನೀಡಿ ದರು ಕಾರ್ಯಕ್ರಮವನ್ನು ಉದ್ದೇಶಿಸಿ ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷರಾದ ಮಹೇಶ್ ಜೈನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದಸರಾ ಸಮಿತಿ ಕಾಯಾಧ್ಯಕ್ಷರಾದ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ನಗರಸಭೆ ಪೌರಾಯುಕ್ತರಾದ ಬಿ.ಎಲ್. ರಮೇಶ್, ಪೊಲೀಸ್ ವೃತ್ತ ನಿರೀಕ್ಷಕ ಐ.ಪಿ.ಮೇದಪ್ಪ, ದಸರಾ ಸಮಿತಿ ಗೌರವಾಧ್ಯಕ್ಷ ಟಿ.ಪಿ.ರಾಜೇಂದ್ರ, ಉಪಾಧ್ಯಕ್ಷ ನೆರವಂಡ ಜೀವನ್, ಕಾರ್ಯದರ್ಶಿ ಗಜೇಂದ್ರ, ರಾಕೇಶ್ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.