Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Team Udayavani, Apr 20, 2024, 12:35 AM IST
ಮಡಿಕೇರಿ: ಕಾಂಗ್ರೆಸ್ಸಿಗರು ಕುರ್ಚಿ ಅಜೆಂಡಾದಿಂದ ಇನ್ನೂ ಹೊರ ಬಂದಿಲ್ಲ, ಲೋಕಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಕುಶಾಲನಗರದ ಗೌಡ ಸಮಾಜದ ಆವರಣದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾದ ಅನಂತರ ಬಂದ್ ಆಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದು ಶಾಶ್ವತ ಯೋಜನೆ ಎಂದರು.
ಕಾಂಗ್ರೆಸ್ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿರುವುದು ಜನರ ದುರ್ದೈವ. ಈ ಬಾರಿಯ ಚುನಾವಣೆ ವಿಭಿನ್ನವಾಗಿದ್ದು, ಜಾತಿ ಲೆಕ್ಕಾಚಾರ ನಡೆಯದು. ಮೋದಿ ಅವರ ಕಾರ್ಯವೈಖರಿ ಜನಪರವಾಗಿದ್ದು, 3ನೇ ಅವಧಿಗೆ ಕೇಂದ್ರದಲ್ಲಿ ಮುಂದುವರೆಸಲು ಅಗತ್ಯ ಬೆಂಬಲ ನೀಡಬೇಕಿದೆ ಎಂದರು.
ಈ ಚುನಾವಣೆಯಲ್ಲಿ ದೇಶದ ಬಹಳಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್‌ನವರು ತಾವೇ ದೇಶದ ಆಳ್ವಿಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವುದು ತಮಾಷೆಯ ಸಂಗತಿ ಎಂದು ಲೇವಡಿ ಮಾಡಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ರಾಜ್ಯ ಸರಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಇನ್ನೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.