ಹಾರಂಗಿಗೆ ಸಿಎಂ ಬಾಗಿನ
Team Udayavani, Jul 20, 2018, 10:24 AM IST
ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ಗುರುವಾರ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಅವರೊಂದಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಇದ್ದರು. ಪಿರಿಯಾಪಟ್ಟಣದಿಂದ ರಸ್ತೆ ಮೂಲಕ ಹಾರಂಗಿಗೆ ಆಗಮಿಸಿದ ಅವರು ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಮೊದಲು ಪೂಜೆ ಸಲ್ಲಿಸಿದರು.
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, 35 ವರ್ಷಗಳ ಬಳಿಕ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯದ ಎಲ್ಲ ಅಣೆಕಟ್ಟುಗಳು, ಕೆರೆಗಳು ಸಂಪೂರ್ಣ ತುಂಬಿವೆ, ಈ ಮಳೆ ಕೊಡಗು ಜಿಲ್ಲೆಯ ಮಟ್ಟಿಗೆ ಸಾಕಷ್ಟು ನಷ್ಟವನ್ನೂ ಉಂಟು ಮಾಡಿದೆ. ಜನರ ಕಷ್ಟಗಳಿಗೆ ಸರಕಾರ ಸ್ಪಂದಿಸಲಿದೆ ಎಂದರು. ಮಳೆಯಿಂದಾದ ನಷ್ಟಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಮಾತ್ರವಲ್ಲದೆ ಹಾಸನ, ಮೈಸೂರು, ಮಂಗಳೂರು ಮುಂತಾದ ಜಿಲ್ಲೆಗಳಲ್ಲೂ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.