![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 9, 2019, 12:30 AM IST
ಮಡಿಕೇರಿ :ಮುಂದಿನ ಎರಡು ತಿಂಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಪ್ರಕೃತಿ ವಿಕೋಪ ಸಂಬಂಧ ಈಗಾಗಲೇ ಕೈಗೊಳ್ಳಲಾಗಿರುವ ಮನೆ ಸೇರಿದಂತೆ ರಸ್ತೆ, ಸೇತುವೆ, ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚನೆ ನೀಡಿದ್ದಾರೆ.
ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಣ್ಣ ನೀರಾವರಿ ಹೀಗೆ ನಾನಾ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂತ್ರಸ್ತರ ಖಾತೆಗೆ ಪರಿಹಾರದ ಮೊತ್ತ ಜಮೆಯಾಗಿಲ್ಲ ಎಂಬುದು ಕೇಳಿ ಬಂದಿದೆ. ಆದ್ದರಿಂದ ಈ ಬಗ್ಗೆ ಬ್ಯಾಂಕ್‌ಗಳಿಂದ ಮಾಹಿತಿ ಪಡೆದು ಸಲ್ಲಿಸುವಂತೆ ಅವರು ಸೂಚಿಸಿದರು.
ಚುನಾವಣಾ ಕಾರ್ಯಗಳು ಆರಂಭವಾಗಿವೆ. ಆದ್ದರಿಂದ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ರೇವಣ್ಣವರ್, ಉಪ ಅರಣ್ಯ ಸಂರಕ್ಷಣಾಧಿ ಕಾರಿ ಮಂಜುನಾಥ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಜಗದೀಶ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಬಾಬು, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಷಂಶುದ್ದೀನ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಪೌರಾಯುಕ್ತರಾದ ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹೇಮಂತ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ರಾಧ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಬಿಸಿಎಂ ಇಲಾಖಾ ಅಧಿಕಾರಿ ಅವೀನ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಕುಮಾರ ಇತರರು ಹಲವು ಮಾಹಿತಿ ನೀಡಿದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.