ಸಫಾನಾ ಮನೆಗೆ ಕಾಂಗ್ರೆಸ್ ಪ್ರಮುಖರ ಭೇಟಿ: ಸಾಂತ್ವನ
Team Udayavani, Mar 28, 2017, 2:58 PM IST
ಮಡಿಕೇರಿ: ದೇವರಪುರ ಸಮೀಪದ ತಾರಿಕಟ್ಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ವಿದ್ಯಾರ್ಥಿನಿ ಸಫಾನಾಳ ಮನೆಗೆ ತೆರಳಿದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿತು.
ಸರಕಾರದಿಂದ ದೊರೆಯಬೇಕಾದ ಸೌಲಭ್ಯವನ್ನು ಶೀಘ್ರದಲ್ಲಿ ನೀಡಲಾಗುವುದು ಹಾಗೂ ಆಕೆಯ ಸಹೋದರ ಶಾಕೀರ್‌ಗೆ ಸರಕಾರಿ ಉದ್ಯೋಗ ನೀಡುವ ಮೂಲಕ ಕುಟುಂಬಕ್ಕೆ ನೆರವು ನೀಡಲು ಪ್ರಯತ್ನಿಸುತ್ತೇವೆ. ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ಆನೆ, ಮಾನವ ಸಂಘರ್ಷದ ಬಗ್ಗೆ ಅರಣ್ಯ ಮಂತ್ರಿ ಹಾಗೂ ಮುಖ್ಯಮಂತ್ರಿಯ ಬಳಿ ನಿಯೋಗ ತೆರಳಿ ವಾಸ್ತವ ಸ್ಥಿತಿ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಅಲ್ಪಸಂಖ್ಯಾಕ ಘಟಕದ ಜಿಲ್ಲಾಧ್ಯಕ್ಷ ಕೆ.ಎಂ ಯಕೂಬ್ ಭರವಸೆ ನೀಡಿದರು. ಈಗಾಗಲೇ ಈ ಬಗ್ಗೆ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ಮಾಡಿ ಕುಟುಂಬಕ್ಕೆ 20 ಲಕ್ಷದ ಪರಿಹಾರ ನೀಡುವಂತೆ ಬೇಡಿಕೆ ನೀಡಿದ್ದೇವೆ. ಸಚಿವರಿಂದ ಸಕರಾತ್ಮಕ ಸ್ಪಂದನೆ ದೊರಕಿದೆ ಎಂದು ಹೇಳಿದರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ಈ ರೀತಿಯ ಘಟನೆಗಳು ಮುಂದಿನ ದಿನಗಳಲ್ಲಿ ನಡೆಯದಂತೆ ಅರಣ್ಯ ಇಲಾಖೆ ಎಚ್ಚರ ವಹಿಸಬೇಕು. ಸರಕಾರದ ಮಟ್ಟದಲ್ಲಿ ಆನೆ ಹಾವಳಿಯ ಬಗ್ಗೆ ಚರ್ಚಿಸಿ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಭೇಟಿ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ಸಮ್ಮದ್, ಗೋಣಿಕೊಪ್ಪ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎ.ಎಸ್ ಕಲೀಮುಲ್ಲಾ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲಾಂ, ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಕೆ ಪೋಕುಟ್ಟಿ, ಜಿಲ್ಲಾ ಕಾಂಗ್ರೆಸ್ ಸದಸ್ಯ ಶಮೀರ್, ಮುಸ್ಲಿಂ ಹಿತರಕ್ಷಣ ಸಮಿತಿ ಅಧ್ಯಕ್ಷ ಹನೀಫಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.