ಸಂಸದ ಹೆಗಡೆ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಮಹಾತ್ಮಾ ಗಾಂಧಿ, ಸ್ವಾತಂತ್ರ್ಯ ಹೋರಾಟಗಾರರ ಅವಹೇಳನ ಆರೋಪ

Team Udayavani, Feb 9, 2020, 5:46 AM IST

Z-CONGRESS-PROTEST-1

ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸ್ವಾತಂತ್ರ್ಯ ಹೋರಾಟ ಗಾರರನ್ನು ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಆಶ್ರಮ ಗಳಿಗೆ ನೀಡಲಾಗುತ್ತಿದ್ದ ದಾಸೋಹದ ಧಾನ್ಯ ಗಳನ್ನು ಬಿಜೆಪಿ ಸರ್ಕಾರ ಸ್ಥಗಿತ ಗೊಳಿಸಿದೆ ಎಂದು ಅಸಮಾ ಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ, ಅನಂತಕುಮಾರ್‌ ಹೆಗ್ಡೆ, ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್‌ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಬಿಜೆಪಿ ಜನಪ್ರತಿನಿಧಿಗಳು ತಮ್ಮ ಮನಸ್ಸಿನ ಮೇಲಿನ ಹತೋಟಿಯನ್ನು ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಇದ್ದ ಸಂದರ್ಭ ಮಠ, ಆಶ್ರಮಗಳಿಗೆ ಸಮರ್ಪಕವಾಗಿ ದಾಸೋಹದ ಧಾನ್ಯ ಗಳನ್ನು ವಿತರಿಸ ಲಾಗುತ್ತಿತ್ತು. ಆದರೆ ಈ ಯೋಜನೆ ಯನ್ನು ತಡೆಹಿಡಿದು ಬಡವರ ಹೊಟ್ಟೆಗೆ ಹೊಡೆಯುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದ‌ರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಕೆ. ಮಂಜು ನಾಥ್‌ ಕುಮಾರ್‌ ಮಾತನಾಡಿ, ಹೆಗಡೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ವಿಕೃತ ಗುಣ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು. ಅಹಿಂಸೆ ಹಾಗೂ ಸತ್ಯದ ಹಾದಿಯಲ್ಲಿ ಬ್ರಿಟಿಷರ ವಿರುದ್ದ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯನ್ನು ಹೀಯಾಳಿಸಿ, ಅವಮಾನಿಸಿರುವುದನ್ನು ಜಿಲ್ಲಾ ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ ಎಂದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಆಶ್ರಮಗಳಿಗೆ ಆಹಾರ ಧಾನ್ಯ ಪೂರೈಕೆ ನಿಂತಿತ್ತು ಎಂಬ ಸುಳ್ಳು ಮಾಹಿತಿ ನೀಡಲು ಹೋಗಿ ಇಂದು ಸಿಕ್ಕಿ ಹಾಕಿಕೊಂಡು ಚಡಪಡಿಸುತ್ತಿದ್ದಾರೆ. ಅನಂತಕುಮಾರ್‌ ಹೆಗ್ಡೆ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯ ಬಿಜೆಪಿ ಸರ್ಕಾರವೇ ಜನತೆಯ ಕ್ಷಮೆಯಾಚಿಸಬೇಕು ಮತ್ತು ವಿವಾದಕ್ಕೆ ಸಿಲುಕಿರುವ ಇಬ್ಬರನ್ನು ವಜಾ ಗೊಳಿಸಬೇಕು ಎಂದು ಮಂಜುನಾಥ್‌ ಕುಮಾರ್‌ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆ.ಪಿ.ಸಿ.ಸಿ. ಹಿರಿಯ ಮುಖಂಡ ಮಿಟ್ಟುಚಂಗಪ್ಪ, ಸದಸ್ಯರಾದ ಟಿ.ಪಿ. ರಮೇಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್‌, ವಕ್ತಾರ ಟಿ.ಈ. ಸುರೇಶ್‌, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಸುರಯ್ಯ ಅಬ್ರಾರ್‌, ರಾಹುಲ್‌ ಬ್ರಿಗೇಡ್‌ನ‌ ಅಧ್ಯಕ್ಷ ಚುಮ್ಮಿದೇವಯ್ಯ, ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಯೋಜಕ ತೆನ್ನಿರಾ ಮೈನಾ, ಸಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್‌, ನಗರ ಕಾಂಗ್ರೆಸ್‌ ಅಧ್ಯಕ್ಷ‌ ಅಬ್ದುಲ್‌ ರಜಾಕ್‌, ಪ್ರಧಾನ ಕಾರ್ಯದರ್ಶಿ ಆರ್‌.ಪಿ.ಚಂದ್ರಶೇಖರ್‌, ಡಿ.ಸಿ.ಸಿ. ಉಪಾಧ್ಯಕ್ಷ‌ ಎಂ.ಎಸ್‌. ಪೂವಯ್ಯ, ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಚಂಗಪ್ಪ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ‌ ಕೆ.ಎ. ಯಾಕುಬ್‌, ಅಲ್ಪಸಂಖ್ಯಾಕರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್‌, ಯುವ ಘಟಕದ ಜಿಲ್ಲಾಧ್ಯಕ್ಷ ಎಸ್‌.ಇ.ಹನೀಫ್, ಯುವ ಕಾಂಗ್ರೆಸ್‌ ಅಧ್ಯಕ್ಷ ಸದಾಮುದ್ದಪ್ಪ, ಹಿಂದುಳಿದ ವರ್ಗಗಳ ಮಡಿಕೇರಿ ನಗರ ಅಧ್ಯಕ್ಷ ಕೆ.ಜಿ. ಜಗದೀಶ್‌, ಸೇವಾದಳದ ಅಧ್ಯಕ್ಷೆ ಪ್ರೇಮಾ ಕೃಷ್ಣಪ್ಪ, ನಗರಸಭಾ ಮಾಜಿ ಸದಸ್ಯರಾದ ಕಾವೇರಮ್ಮ ಸೋಮಣ್ಣ, ಜುಲೇಕಾಬಿ, ಸಿದ್ದಾಪುರ ಗ್ರಾ.ಪಂ. ಸದಸ್ಯೆ ದೇವಜಾನ್‌, ಪ್ರಮುಖರಾದ ಮಿನಾಜ್‌ ಪ್ರವೀಣ್‌, ಗಾಯತ್ರಿ ನರಸಿಂಹ ಹಾಗೂ ಎಲ್ಲಾ ಬ್ಲಾಕ್‌ ಅಧ್ಯಕ್ಷರು, ಸದಸ್ಯರು, ನಗರಸಭಾ ಮಾಜಿ ಸದಸ್ಯರು, ಜಿ.ಪಂ. ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.