ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!
Team Udayavani, Jan 5, 2022, 7:10 AM IST
ಸಾಂದರ್ಭಿಕ ಚಿತ್ರ.
ಮಡಿಕೇರಿ: ಕೊಕ್ಕೆ ಚಾಕು ಹಿಡಿದು ವೃದ್ಧರೇ ಇರುವ ಮನೆಗಳಿಗೆ ನುಗ್ಗುವ ಮುಸುಕುಧಾರಿ ವ್ಯಕ್ತಿಯ ಬಗ್ಗೆ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಆತಂಕ ಮೂಡಿದೆ. ಒಂದು ವರ್ಷದಲ್ಲಿ ಗ್ರಾಮದ ನಾಲ್ಕು ಮನೆಗಳಿಗೆ ನುಗ್ಗಿರುವ ಈತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಲೇ ಇದ್ದಾನೆ.
2021ರ ಡಿ. 28ರಂದು ನಾಲ್ಕೇರಿ ಗ್ರಾಮದಲ್ಲಿ ಕೊಕ್ಕೆ ಚಾಕು ವ್ಯಕ್ತಿಯಿಂದ ದಾಳಿಗೊಳಗಾದ ಬೆಳೆಗಾರ ಸುಳ್ಳಿಮಾಡ ಪಿ. ತಿಮ್ಮಯ್ಯ ಅವರ ಪುತ್ರ ಸುಳ್ಳಿಮಾಡ ಟಿ.ಪೊನ್ನಪ್ಪ ಅವರು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರಿಗೆ ಮಂಗಳವಾರ ದೂರು ಸಲ್ಲಿಸಿದರು.
ಪೊಲೀಸರು ತನಿಖೆಯನ್ನು ವಿಳಂಬ ಮಾಡು ತ್ತಿರುವ ಕಾರಣದಿಂದಲೇ ಆಗಂತುಕನ ದಾಳಿ ನಿರಂತರ ವಾಗಿದೆ ಎಂದು ಪೊನ್ನಪ್ಪ ಆರೋಪಿಸಿದ್ದಾರೆ.
ಇದನ್ನೂ ಓದಿ:ದಕ್ಷಿಣ ಧ್ರುವ ತಲುಪಿದ ಭಾರತೀಯ ಮೂಲದ ಕ್ಯಾಪ್ಟನ್ ಹರ್‌ಪ್ರೀತ್ ಚಾಂದಿ!
ನಾಲ್ಕು ನಾಯಿಗಳೂ ಬೊಗಳಲಿಲ್ಲ!
ನಾಲ್ಕೇರಿ ಗ್ರಾಮದಲ್ಲಿ ವೃದ್ಧರೇ ಇರುವ ಮನೆಗಳನ್ನು ಗುರಿಯಾಗಿಸಿ ಈತ ದಾಳಿ ಮಾಡುತ್ತಿದ್ದಾನೆ. ನನ್ನ ತಂದೆ ತಿಮ್ಮಯ್ಯ ಹಾಗೂ ತಾಯಿ ಪಾರ್ವತಿ ಅವರು ಮನೆಯಲ್ಲಿದ್ದಾಗ ಡಿ.28ರಂದು ಮಧ್ಯಾಹ್ನ ಆತ ದಿಢೀರ್ ಪ್ರವೇಶಿಸಿದ್ದಾನೆ. ತಾಯಿಗೆ ಕೊಕ್ಕೆ ಚಾಕು ತೋರಿಸಿ ಬೆದರಿಸಿ, ಕೋಣೆಯಲ್ಲಿದ್ದ ತಂದೆ ಬಂದು ಗದರಿದಾಗ ಇಬ್ಬರಿಗೂ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತಂದೆ ತೀವ್ರವಾಗಿ ಗಾಯಗೊಂಡಿದ್ದು, ತಾಯಿ ಜೋರಾಗಿ ಕಿರುಚಿಕೊಂಡಾಗ ಆತ ಕಾಲ್ಕಿತ್ತಿದ್ದಾನೆ. “ದುಡ್ಡು, ದುಡ್ಡು, ರಕ್ತ’ ಎಂದಷ್ಟೇ ಈತ ಹೇಳುತ್ತಿರುತ್ತಾನೆ. ಮನೆಯಲ್ಲಿ ನಾಲ್ಕು ನಾಯಿಗಳಿದ್ದು, ಅಪರಿಚಿತ ಬಂದರೂ ಬೊಗಳ ದಿರುವುದು ಆಶ್ಚರ್ಯ ಮೂಡಿಸಿದೆ ಎಂದು ಪೊನ್ನಪ್ಪ ಅವರು ತಿಳಿಸಿದ್ದಾರೆ.
ತೇಲಪಂಡ ಶಿವಕುಮಾರ್ ನಾಣಯ್ಯ ಮಾತನಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಳ್ಳನ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಗೃಹ ಸಚಿವರಿಗೆ ದೂರು ನೀಡಬೇಕಾಗುತ್ತದೆ ಎಂದರು.
ಆತನ ಬಂಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.