ಶನಿವಾರಸಂತೆ: ಹೊಳೆಗೆ ಈಜಲು ಹೋದ ಬಾಲಕ ನೀರು ಪಾಲು
Team Udayavani, May 9, 2022, 8:06 PM IST
ಮಡಿಕೇರಿ : ಹೊಳೆಯಲ್ಲಿ ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಸಮೀಪದ ಹೆಮ್ಮನೆ ಗ್ರಾಮದಲ್ಲಿ ನಡೆದಿದೆ.
ಬೈಲುಕೊಪ್ಪದ ನಾಸೀರ್ ಪಾಷ, ಫಸಿಯಾ ಬಾನು ದಂಪತಿಯ ಪುತ್ರ ಫರ್ಹಾನ್ (12) ಸಾವನ್ನಪ್ಪಿದ ಬಾಲಕ.
ರಂಜಾನ್ ಹಬ್ಬಕ್ಕೆಂದು ಶನಿವಾರಸಂತೆಯಲ್ಲಿರುವ ಅಜ್ಜನ ಮನೆಗೆ ಬಂದಿದ್ದ ಫರ್ಹಾನ್ ಮಾವನ ಮಗ ಸಮೀರ್ ಜೊತೆ ಹೊಳೆಗೆ ಆಟವಾಡಲೆಂದು ತೆರಳಿದ್ದು, ಈ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಸಮೀರ್ ಪೋಷಕರಿಗೆ ತಿಳಿಸಿದ್ದಾನೆ.
ಹೊಳೆಯಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಗ ಮೃತಪಟ್ಟಿರುವುದಾಗಿ ತಂದೆ ನಾಸೀರ್ ಪಾಷ ದೂರು ನೀಡಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಸ್ಪರ್ಶಿಸಿ ಆಟೋ ಚಾಲಕ ಸಾವು
ಮಡಿಕೇರಿ : ವಿದ್ಯುತ್ ತಂತಿ ಸ್ಪರ್ಶಗೊಂಡು ಆಟೋ ಚಾಲಕ ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಗಾಂಧಿ ನಗರದಲ್ಲಿ ನಡೆದಿದೆ.
ವಿರಾಜಪೇಟೆಯ ಶಿವಕೇರಿ ನಿವಾಸಿ, ಪ್ರಸ್ತುತ ಗಾಂಧಿ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಟೋ ಚಾಲಕ ಎನ್.ಕೆ.ದಿವಾಕರ್ (58) ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟ ವ್ಯಕ್ತಿ.
ತನ್ನ ಆಟೋ ಮೇಲೆ ಬಿದ್ದಿದ್ದ ತೆಂಗಿನ ಗರಿಯನ್ನು ತೆರವು ಮಾಡುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಗೊಂಡಿದ್ದು, ಬಲಗೈ ತುಂಡಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ನಗರ ಠಾಣೆಯಲ್ಲಿ ಮೃತರ ಪತ್ನಿ ಶೋಭ ಅವರು ನೀಡಿದ ದೂರಿನ ಮೇರೆಗೆ ವಿದ್ಯುತ್ ಅವಘಡದಿಂದ ಆಕಸ್ಮಿಕ ಮರಣ ಸಂಭವಿಸಿದೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.